ಸೌಲಭ್ಯ ವಂಚಿತ ಸರ್ಕಾರಿ ಶಾಲೆಗೆ ಬೇಕಿದೆ ಆಸರೆ


Team Udayavani, Jul 10, 2019, 10:40 AM IST

gadaga-tdy-2..

ಲಕ್ಷ್ಮೇ ಶ್ವರ: ಕೊಳಚೆ ನೀರಿನಿಂದ ಆವೃತಗೊಂಡಿರುವ ಶಾಲೆಯ ಮೈದಾನ . ಶಾಲಾ ಆವರಣದಲ್ಲಿರುವ ನಿರುಪಯುಕ್ತ ಅಂಗನವಾಡಿ ಕಟ್ಟಡ. (ಬಲಚಿತ್ರ)

ಪಟ್ಟಣದ ಪಾಳಾ-ಬಾದಾಮಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಅಂಬೇಡ್ಕರ್‌ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕಾರ್ಯಾರಂಭವಾಗಿ 16 ವರ್ಷ ಕಳೆದರೂ ಮೂಲ ಸೌಲಭ್ಯಗಳಿಂದ ವಂಚಿತಗೊಂಡಿದೆ.

ಶಾಲೆಯಲ್ಲಿ 1ರಿಂದ 5ನೇ ತರಗತಿವರೆಗೆ 68 ವಿದ್ಯಾರ್ಥಿಗಳು ಓದುತ್ತಿದ್ದು, ಸಾಕಷ್ಟು ಸ್ಥಳವಾಕಾಶವಿದ್ದರೂ ಶಾಲೆಯ ಸುತ್ತಲೂ ಕಾಂಪೌಂಡ್‌ ಇಲ್ಲದ್ದರಿಂದ ಆವರಣದಲ್ಲಿಯೇ ನಿರುಪಯುಕ್ತ ವಸ್ತು ತಂದು ಹಾಕಲಾಗುತ್ತಿದೆ. ನೀರು ಹರಿದು ಹೋಗಲು ಚರಂಡಿ ಇಲ್ಲದ್ದರಿಂದ ಕೊಳಚೆ ನೀರು ಮತ್ತು ಮಳೆಯ ನೀರು ವರ್ಷಪೂರ್ತಿ ಮೈದಾನದಲ್ಲಿ ನಿಲ್ಲುವ ಸ್ಥಿತಿ ಉದ್ಬವಿಸಿದೆ. ಇದರಿಂದ ಶಾಲಾ ವಾತಾವರಣ ಗಬ್ಬು ನಾರುವಂತಾಗಿದೆ. ಮಕ್ಕಳು ನಿಶ್ಚಿಂತೆಯಿಂದ ಕುಳಿತು ಕಲಿಯುವ ವಾತಾವರಣ ಇಲ್ಲದೇ ಅನಾರೋಗ್ಯದ ಭೀತಿ ನಿರ್ಮಾಣವಾಗಿದೆ.

ಈ ಮೊದಲು ಶಾಲೆಗೆ ಕಟ್ಟಡ ಇಲ್ಲದ್ದರಿಂದ ಇಲ್ಲಿನ ಸಮುದಾಯ ಭವನದಲ್ಲಿ ಶಾಲೆ ನಡೆಯುತ್ತಿತ್ತು. ಸದ್ಯ ಶಾಲೆ ಸ್ವಂತ ಕಟ್ಟಡ ಹೊಂದಿದ್ದರೂ ಮೂಲ ಸೌಲಭ್ಯಗಳ ಕೊರತೆಯಿಂದ ನರಳುತ್ತಿದೆ. ಶಾಲಾ ಆವರಣದಲ್ಲಿಯೇ ಅತ್ಯಂತ ಹಳೆಯದಾದ ಅಂಗನವಾಡಿ ಕಟ್ಟಡವೊಂದು ಆಗಲೂ ಈಗಲೂ ಬೀಳುವ ಸ್ಥಿತಿಯಲ್ಲಿದ್ದು ಇದು ಅನೈರ್ಮಲ್ಯಕ್ಕೆ ಕಾರಣವಾಗಿದೆ. ರಾಜ್ಯ ಹೆದ್ದಾರಿ ಪಕ್ಕದಲ್ಲಿಯೇ ಶಾಲೆ ಇದ್ದು ಇದೇ ರಸ್ತೆಯಲ್ಲಿ ಶಿಕ್ಷಣ ಇಲಾಖೆಯವರು, ಜನಪ್ರತಿನಿಧಿಗಳು ನಿತ್ಯವೂ ಸಂಚರಿಸುತ್ತಿದ್ದರೂ ಜಾಣ ಕುರುಡುತನ ತೋರುತ್ತಿದ್ದಾರೆ ಎಂದು ನಾಗರಿಕರು ಆರೋಪಿಸಿದ್ದಾರೆ.

ಶಾಲೆಯ ಅವ್ಯವಸ್ಥೆಯಿಂದಾಗಿ ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ವಿದ್ಯಾರ್ಥಿಗಳನ್ನು ಮಾತನಾಡಿಸಿದಾಗ ಮೈದಾನದಲ್ಲಿ ಕೊಳಚೆ ನೀರು ನಿಲ್ಲುವುದರಿಂದ ಆಟವಾಡಲು ಜಾಗವಿಲ್ಲದಂತಾಗಿದೆ. ಸೊಳ್ಳೆ, ನೊಣಗಳ ಕಾಟದಿಂದ ಪಾಠ ಮತ್ತು ಊಟಕ್ಕೆ ತೊಂದರೆಯಾಗುತ್ತಿದೆ. ಶಾಲೆಗೆ ಬರಲು ಹೋಗಲು ಕೊಳಚೆ ದಾಟಬೇಕಿದೆ. ರಸ್ತೆ ಪಕ್ಕವೇ ಶಾಲೆ ಇರುವುದರಿಂದ ಯರ್ರಾಬಿರ್ರಿ ವಾಹನಗಳು ಸಂಚರಿಸುತ್ತಿದ್ದು ಶಾಲೆಗೆ ಕಾಂಪೌಂಡ್‌ ನಿರ್ಮಿಸಬೇಕು ಎಂದು ಸಮಸ್ಯೆ ಹೇಳಿಕೊಂಡರು.

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.