ಜೇವರ್ಗಿಯಲ್ಲಿ ಇನ್ನೂ ಬಗೆಹರಿದಿಲ್ಲ ತ್ಯಾಜ್ಯದ ಸಮಸ್ಯೆ

ಘನ ತ್ಯಾಜ್ಯ ವಸ್ತು ವಿಲೇವಾರಿ ಘಟಕ ಸ್ಥಾಪಿಸಿದರೂ ಪ್ರಯೋಜನವಾಗಿಲ್ಲ

Team Udayavani, Jul 10, 2019, 10:36 AM IST

1–July-2

ಜೇವರ್ಗಿ: ರಿಲಾಯನ್ಸ್‌ ಪೆಟ್ರೋಲ್ ಬಂಕ್‌ ಹತ್ತಿರ ಹೆದ್ದಾರಿ ಬದಿ ಹಾಕಲಾಗಿರುವ ಕಸದ ರಾಶಿ.

ವಿಜಯಕುಮಾರ ಎಸ್‌. ಕಲ್ಲಾ
ಜೇವರ್ಗಿ:
ಪಟ್ಟಣದ ರಿಲಾಯನ್ಸ್‌ ಪೆಟ್ರೋಲ್ ಬಂಕ್‌ ಸಮೀಪ ರಾಷ್ಟ್ರೀಯ ಹೆದ್ದಾರಿ 50ರ ಬದಿ ಸತ್ತ ದನ, ಹಂದಿ, ನಾಯಿಗಳನ್ನು ತಂದು ಬಿಸಾಕುತ್ತಿರುವುದರಿಂದ ಗಬ್ಬು ವಾಸನೆಯಿಂದ ನಿತ್ಯ ವಾಹನ ಸವಾರರು, ಪಾದಚಾರಿಗಳು ನರಕಯಾತನೆ ಅನುಭವಿಸುವಂತಾಗಿದೆ.

ಕಳೆದ ಹತ್ತಾರು ವರ್ಷಗಳಿಂದ ಇದೇ ರೀತಿ ಇದ್ದು, ಈ ಬಗ್ಗೆ ಪುರಸಭೆ ಅಧಿಕಾರಿಗಳು ಗೊತ್ತಿದ್ದೂ ಗೊತ್ತಿಲ್ಲದ ರೀತಿ ವರ್ತಿಸುತ್ತಿರುವುದು ಸ್ಥಳಿಯರಿಗೆ ಬೇಸರವನ್ನುಂಟು ಮಾಡಿದೆ. ಶಹಾಪುರ ರಸ್ತೆಯ ಬಿಎಸ್‌ಎನ್‌ಎಲ್ ಕಚೇರಿ ಹಿಂದುಗಡೆ ಪುರಸಭೆ ಘನ ತ್ಯಾಜ್ಯ ವಸ್ತು ವಿಲೇವಾರಿ ಘಟಕ ಸ್ಥಾಪಿಸಿದರೂ ಯಾವುದೇ ರೀತಿ ಪ್ರಯೋಜನವಾಗುತ್ತಿಲ್ಲ. ಇದಕ್ಕೆ ಪುರಸಭೆ ಸಿಬ್ಬಂದಿ ಕೂಡ ಕಾರಣ. ಪಟ್ಟಣದಲ್ಲಿ ಬೆಳಗ್ಗೆ ಕಸಗೂಡಿಸುವುದು, ಮನೆ ಮನೆ ತೆರಳಿ ಕಸ ಸಂಗ್ರಹಿಸಿ ವಿಲೇವಾರಿ ಘಟಕಕ್ಕೆ ಹಾಕಲಾಗುತ್ತದೆ. ಕೆಲವು ಸಂದರ್ಭಗಳಲ್ಲಿ ಸಿಬ್ಬಂದಿ ನಿರ್ಲಕ್ಷ್ಯತನದಿಂದ ಹೆದ್ದಾರಿ ಬದಿ ಸತ್ತ ಹಂದಿ, ನಾಯಿ, ದನಗಳನ್ನು ತಂದು ಹಾಕಲಾಗುತ್ತಿದೆ. ಕನಕದಾಸ ವೃತ್ತ ಸೇರಿದಂತೆ ಕೆಲವು ಕಡೆ ಇರುವ ಮಾಂಸದ ಅಂಗಡಿಯವರು ತ್ಯಾಜ್ಯ ತಂದು ಇಲ್ಲಿಯೇ ಹಾಕುತ್ತಿದ್ದಾರೆ. ಇದರಿಂದ ಕೆಟ್ಟ ವಾಸನೆ ಬರುತ್ತಿದೆ. ಕಲಬುರಗಿಯಿಂದ ಜೇವರ್ಗಿ, ಜೇವರ್ಗಿಯಿಂದ ಕಲಬುರಗಿಗೆ ತೆರಳುವ ಪ್ರತಿ ವಾಹನದವರು ಇಲ್ಲಿ ಮೂಗು ಮುಚ್ಚಿಕೊಳ್ಳಲೇಬೇಕು. ಇಲ್ಲದಿದ್ದರೇ ವಾಂತಿ ಗ್ಯಾರಂಟಿ. ಅಷ್ಟು ಕೆಟ್ಟ ವಾಸನೆ ಇಲ್ಲಿ ಮೂಗಿಗೆ ನಿತ್ಯ ರಾಚುತ್ತಿದೆ. ಪಟ್ಟಣದ ಕೆಲ ಆಗ್ರೋ ಮಳಿಗೆಯವರು ಅವಧಿ ಮುಗಿದ ಕೀಟನಾಶಕ ತಂದು ಇಲ್ಲಿಯೇ ಹಾಕುತ್ತಿದ್ದಾರೆ. ಅಪಾಯಕಾರಿ ಅಂಶಗಳನ್ನು ಒಳಗೊಂಡ ತ್ಯಾಜ್ಯ ವಸ್ತುಗಳು ಚೆಲ್ಲಾಪಿಲ್ಲಿಯಾಗುತ್ತಿದ್ದು, ಈ ವ್ಯಾಪ್ತಿಯಲ್ಲಿ ನಾಯಿ, ದನಗಳು, ಹದ್ದುಗಳ ಆಶ್ರಯ ಕೇಂದ್ರವಾಗಿ ಪರಿವರ್ತನೆಗೊಂಡಿದೆ. ಕೆಲವು ಜನರು ಕಸದ ರಾಶಿಗೆ ಬೆಂಕಿ ಹಾಕಿ ಸುಡುವುದರೊಂದಿಗೆ ಇಡೀ ವ್ಯಾಪ್ತಿಯಲ್ಲಿ ವಾಸನೆಯೊಂದಿಗೆ ಪರಿಸರ ಸಂಪೂರ್ಣ ಹೊಗೆಮಯವಾಗಿ ಗೋಚರಿಸುತ್ತಿದೆ.

ಪಟ್ಟಣದ ಲಕ್ಷ್ಮೀಚೌಕ್‌ ಬಡಾವಣೆ ಹೊರತುಪಡಿಸಿ ಉಳಿದ ಬಡಾವಣೆಗಳಲ್ಲಿ ಪುರಸಭೆ ಸಿಬ್ಬಂದಿ ನಿತ್ಯ ಮನೆ ಮನೆಗೆ ಬಂದು ಕಸ ಸಂಗ್ರಹಿಸುತ್ತಿಲ್ಲ. ಇದರಿಂದ ಅಲ್ಲಿಯ ಜನರು ರಸ್ತೆ ಅಕ್ಕಪಕ್ಕ, ಚರಂಡಿಯಲ್ಲಿ ಕಸ ಕಡ್ಡಿ ಹಾಕುವುದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಪುರಸಭೆ ಅಧಿಕಾರಿಗಳು ಇನ್ನೂ ಹೆಚ್ಚಿನ ಸಿಬ್ಬಂದಿ ನೇಮಕ ಮಾಡಿಕೊಂಡು ಪಟ್ಟಣದ ಎಲ್ಲ ಬಡಾವಣೆಗಳಿಗೆ ತೆರಳಿ ಕಸ ಸಂಗ್ರಹಿಸಿ ಸ್ವಚ್ಚತೆಗೆ ಆದ್ಯತೆ ನೀಡಬೇಕು ಎಂದು ಬಿಜೆಪಿ ಸ್ಲಂ ಮೋರ್ಚಾ ತಾಲೂಕು ಅಧ್ಯಕ್ಷ ಅಕ್ಬರ್‌ಸಾಬ್‌ ಮುಲ್ಲಾ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.