ಬೇಡಿಕೆ ಈಡೇರಿಕೆಗೆ ಶಿಕ್ಷಕರ ಪ್ರತಿಭಟನೆ
•ಜಿಲ್ಲಾಡಳಿತ ಭವನ ಎದುರು ಸಾವಿರಾರು ಶಿಕ್ಷಕರು ಭಾಗಿ•ಸರ್ಕಾರ ಸ್ಪಂದಿಸದಿದ್ದರೆ ವಿಧಾನಸೌಧ ಚಲೋ
Team Udayavani, Jul 10, 2019, 10:53 AM IST
ಹಾವೇರಿ: ಪ್ರಾಥಮಿಕ ಶಾಲಾ ಶಿಕ್ಷಕರು ಜಿಲ್ಲಾಡಳಿತ ಭವನ ಎದುರು ಪ್ರತಿಭಟನೆ ನಡೆಸಿದರು.
ಹಾವೇರಿ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮಂಗಳವಾರ ಎರಡು ಸಾವಿರಕ್ಕೂ ಅಧಿಕ ಪ್ರಾಥಮಿಕ ಶಾಲಾ ಶಿಕ್ಷಕರು ಶಾಲೆಗೆ ಗೈರಾಗಿ ಜಿಲ್ಲಾಡಳಿತ ಭವನದ ಎದುರು ನಡೆದ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಜಿಲ್ಲೆಯ ಎಲ್ಲ ತಾಲೂಕುಗಳಿಂದ ಸಾವಿರಾರು ಸಂಖ್ಯೆಯಲ್ಲಿ ಬಂದ ಶಿಕ್ಷಕರು ಜಿಲ್ಲಾಡಳಿತ ಭವನದ ಎದುರು ಸಮಾವೇಶಗೊಂಡು, ತಮ್ಮ ಬೇಡಿಕೆ ಈಡೇರಿಸಲು ಆಗ್ರಹಿಸಿ ಘೋಷಣೆ ಕೂಗಿ, ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರಾಥಮಿಕ ಶಾಲೆಗಳಲ್ಲಿ ಸೇವೆ ಸಲ್ಲಿಸಿದ ಪದವೀಧರ ಶಿಕ್ಷಕರಿಗೆ ಶೇ. 50ರಷ್ಟು ಬಡ್ತಿ ನೀಡಬೇಕು. ಮುಖ್ಯಶಿಕ್ಷಕರಿಗೆ ಪ್ರತ್ಯೇಕ ವೇತನ ಶ್ರೇಣಿ ನಿಗದಿ ಪಡಿಸಬೇಕು. ಪದವೀಧರ ಶಿಕ್ಷಕರೆಂದು ಪರಿಗಣಿಸುವ ಸಂಬಂಧ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಬದಲಾಯಿಸಬೇಕು. ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಶ್ರೇಣಿ ನಿಗದಿಗೊಳಿಸಬೇಕು. ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆಯನ್ನೇ ಮುಂದುವರೆಸಬೇಕು ಎಂದು ಪ್ರತಿಭಟನಾ ಶಿಕ್ಷಕರು ಈ ಸಂದರ್ಭದಲ್ಲಿ ಆಗ್ರಹಿಸಿದರು.
ಕಳೆದ ಮೂರು ವರ್ಷಗಳಿಂದ ಶಿಕ್ಷಕರ ವರ್ಗಾವಣೆ ಆಗದೇ ಈಗ ವರ್ಗಾವಣೆ ಪ್ರಕ್ರಿಯೆ ಆರಂಭವಾಗಿದ್ದು, ಈ ಪ್ರಕ್ರಿಯೆ ಮುಗಿದ ತಕ್ಷಣ ಅಕ್ಟೋಬರಲ್ಲಿ ಮತ್ತೂಮ್ಮೆ ಕೇವಲ ಕೋರಿಕೆ ವರ್ಗಾವಣೆ ನಡೆಸಬೇಕು. ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಬೇಕು. ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಗಳಲ್ಲಿರುವ ನ್ಯೂನತೆ ಸರಿಪಡಿಸಿ, ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ಪರಿಗಣಿಸಬೇಕು, ಶಿಕ್ಷಕ ಮತ್ತು ವಿದ್ಯಾರ್ಥಿ ಅನುಪಾತ ಗುರುತಿಸುವಾಗ ಮುಖ್ಯಶಿಕ್ಷಕರನ್ನು ಹೊರತುಪಡಿಸಿ ಹೆಚ್ಚುವರಿ ಪ್ರಕ್ರಿಯೆ ಆರಂಭಿಸಬೇಕು. ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆಗಳನ್ನು ನಿವಾರಿಸಬೇಕು ಎಂದು ಒತ್ತಾಯಿಸಿದರು.
ಒಂದು ವೇಳೆ ಸರ್ಕಾರ ತಮ್ಮ ಬೇಡಿಕೆ ಈಡೇರಿಸದಿದ್ದರೆ ಸೆ. 5ರಂದು ಶಿಕ್ಷಕರ ದಿನಾಚರಣೆ ಬಹಿಷ್ಕರಿಸಿ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗುವುದು ಎಂದು ಸಹ ಶಿಕ್ಷಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಸ್.ಆರ್. ಅಣ್ಣಯ್ಯನವರ, ಶಿಕ್ಷಕ ಸಂಘಟನೆ ಪದಾಧಿಕಾರಿಗಳಾದ ಜೆ.ಆರ್. ಯಲವದಹಳ್ಳಿ, ಸಿ.ಬಿ. ಪಾಟೀಲ, ಬಿ. ಅನುರಾಧಾ, ಸಿ.ಬಿ. ಬಂಗೇರ, ವೈ.ಜಿ. ಹರಕುಣಿ, ಸಿ.ಸಿ. ಸೇಬಣ್ಣನವರ, ಕೆ.ಆರ್. ಬಾರ್ಕಿ, ಎಸ್.ಎಂ. ಕೌಸರ, ಎಂ.ಜಿ. ದೊಡ್ಡಗೌಡರ, ಎಸ್.ಎನ್. ಮುಗಳಿ, ಎ.ಎಫ್. ಹೊಸಮನಿ, ಎಸ್.ವಿ. ಇಚ್ಚಂಗಿಮಠ, ಎನ್.ವಿ. ಕಲಕೋಟಿ, ವಿಜಯೇಂದ್ರ ಯತ್ತಿನಹಳ್ಳಿ, ಇತರರು ಪ್ರತಿಭಟನೆಯಲ್ಲಿದ್ದರು. ಎನ್‌ಪಿಎಸ್. ಬಿಇಡಿ ಪದವೀಧರರು, ಗ್ರಾಮೀಣ ಕೃಪಾಂಕ ನೌಕರರು, ಮಹಿಳಾ ವೇದಿಕೆ, ಶಿಕ್ಷಕರ ಸಂಘದ ತಾಲೂಕು ಘಟಕಗಳ ಪದಾಧಿಕಾರಿಗಳು, ಮುಖ್ಯ ಶಿಕ್ಷಕರ ಸಂಘ, ದೈಹಿಕ ಶಿಕ್ಷಕರ ಸಂಘಗಳು ಬೆಂಬಲ ನೀಡಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.