ಬೇಡಿಕೆ ಈಡೇರಿಕೆಗಾಗಿ ಶಿಕ್ಷಕರ ಪ್ರತಿಭಟನೆ

ಪ್ರಾಥಮಿಕ ಶಿಕ್ಷಕರನ್ನು ಪದವೀಧರ ಶಿಕ್ಷಕ ಎಂದು ಪರಿಗಣಿಸಿ

Team Udayavani, Jul 10, 2019, 11:10 AM IST

kopala-tdy-1..

ಕೊಪ್ಪಳ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಶಾಲೆಗಳನ್ನು ಬಂದ್‌ ಮಾಡಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿತು.

ಕೊಪ್ಪಳ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ಶಾಲೆಗಳ ಬಂದ್‌ ಮಾಡಿ ನಗರದಲ್ಲಿ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರು ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಿರಂತರ ಹೋರಾಟ ಮಾಡುತ್ತಿದ್ದರೂ ಸರ್ಕಾರ ನಮ್ಮ ಬಗ್ಗೆ ಕಾಳಜಿ ತೋರುತ್ತಿಲ್ಲ. ನಮ್ಮ ಬೇಡಿಕೆ ಈಡೇರಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಪ್ರಾಥಮಿಕ ಶಾಲಾ ಶಿಕ್ಷಕರು, ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರತ ಶಿಕ್ಷಕರನ್ನು ಹಾಲಿ ಪದವಿ ಶಿಕ್ಷಕರು ಎಂದು ಪರಿಗಣನೆ ಮಾಡಬೇಕು. ವೃಂದ ಮತ್ತು ನೇಮಕಾತಿ ನಿಯಮಗಳನ್ನು ಬದಲಾಯಿಸಬೇಕು ಎಂದು ಒತ್ತಾಯಿಸಿದರು.

ನೂತನ ಪಿಂಚಣಿ ಯೋಜನೆ ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿ ಮಾಡಬೇಕು. ಕಳೆದ ಮೂರು ವರ್ಷದಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಸಿಲ್ಲ. ಈಗಷ್ಟೇ ವರ್ಗಾವಣೆ ಪ್ರಕ್ರಿಯೆ ಆರಂಭವಾಗಿದೆ. ಈ ಪ್ರಕ್ರಿಯೆ ಮುಗಿದ ಬಳಿಕ ಮತ್ತೂಮ್ಮೆ ಅಕ್ಟೋಬರ್‌ ತಿಂಗಳಲ್ಲಿ ಕೋರಿಕೆಯ ವರ್ಗಾವಣೆಗೆ ಅವಕಾಶ ಮಾಡಿಕೊಡಬೇಕು. ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಬೇಕು. ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಯಲ್ಲಿರುವ ನ್ಯೂನ್ಯತೆ ಸರಿಪಡಿಸಿ ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರೆಂದು ಪರಿಗಣನೆ ಮಾಡಬೇಕು. ಶಿಕ್ಷಕ ಹಾಗೂ ವಿದ್ಯಾರ್ಥಿ ಅನುಪಾತ ಗುರುತಿಸುವಾಗ ಮುಖ್ಯೋಪಾಧ್ಯಾಯ, ದೈಹಿಕ ಶಿಕ್ಷಕರನ್ನು ಹೊರತುಪಡಿಸಿ ಹೆಚ್ಚುವರಿ ಪ್ರಕ್ರಿಯೆ ಆರಂಭಿಸಬೇಕೆಂದು ಒತ್ತಾಯಿಸಿದರು.

6ನೇ ವೇತನ ಆಯೋಗದ ಅಂತಿಮ ವರದಿ ಶಿಫಾರಸ್ಸಿನಂತೆ ಮುಖ್ಯ ಗುರುಗಳಿಗೆ 10, 15, 20, 25 ಹಾಗೂ 30 ವರ್ಷದ ಬಡ್ತಿ ನೀಡಬೇಕು. ಗ್ರಾಮೀಣ ಕೃಪಾಂಕದಿಂದ ವಜಾಗೊಂಡ ಶಿಕ್ಷಕರಿಗೂ ಇತರೆ ಸೇವೆ ಸೌಲಭ್ಯ ಕಲ್ಪಿಸಬೇಕು. ಜಿಲ್ಲೆಯಲ್ಲಿ 23 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಗುರು ಭವನ ನಿರ್ಮಾಣಕ್ಕೆ ಒತ್ತು ನೀಡಬೇಕು. ಗುರು ಭವನಕ್ಕೆ ನಿವೇಶನ ಮಂಜೂರು ಮಾಡಬೇಕು. ಜಿಲ್ಲೆಯಲ್ಲಿ ಶಿಕ್ಷಕರು ವೈದ್ಯಕೀಯ ವೆಚ್ಚ ಮರುಪಾವತಿಗೆ ರಚಿಸಲಾಗಿರುವ ಸಮಿತಿಯನ್ನು ರದ್ದುಪಡಿಸಬೇಕೆಂದು ಹಲವು ಬಾರಿ ಮನವಿ ಸಲ್ಲಿಸಿದ್ದರೂ ಈ ವರೆಗೂ ಸಮಿತಿ ರದ್ದುಪಡಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈಗಾಗಲೇ ವಿವಿಧ ಬೇಡಿಕೆ ಈಡೇರಿಕೆಗೆ ಮೂರು ಹಂತದಲ್ಲಿ ಹೋರಾಟ ಮಾಡುವ ಕುರಿತು ರಾಜ್ಯ ಸಂಘವು ನಿರ್ಣಯ ಮಾಡಿದ್ದು, ಎರಡು ಹಂತದ ಪ್ರಕ್ರಿಯೆ ಮುಗಿದಿದೆ. ಮೂರನೇ ಹಂತಕ್ಕೆ ಪ್ರಸಕ್ತ ವರ್ಷದ ಸೆ.5 ರಂದು ಶಿಕ್ಷಕರ ದಿನಾಚರಣೆಯ ಬಹಿಷ್ಕರಿಸಿ ವಿಧಾನಸೌಧ ಚಲೋ ಚಳವಳಿ ಮೂಲಕ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಎಚ್ಚರಿಸಿದರು.

ನೌಕರ ವರ್ಗದ ಶಂಭುಲಿಂಗನಗೌಡ ಪಾಟೀಲ, ನಾಗರಾಜ ಜುಮ್ಮನ್ನವರ್‌, ಸುಶೀಲೆಂದ್ರರಾವ್‌ ದೇಶಪಾಂಡೆ, ಶರಣಬಸವನಗೌಡ ಪಾಟೀಲ, ನಿಂಗಪ್ಪ ಗುನ್ನಾಳ, ಬೀರಪ್ಪ ಅಂಡಗಿ, ಸರ್ದಾರ ಅಲಿ, ತಿಮ್ಮಣ್ಣ ನಾಯ್ಕ, ರಾಮು ನಾಯ್ಕ, ಮಹೇಶ ಸಬರದ, ಶರಣೇಗೌಡ, ಮಾರುತಿ ಆರೇರ, ಬಾಲನಾಗಮ್ಮ, ಸುರೇಶ ಅರಕೇರಿ, ಪ್ರಾಣೇಶ ಪೂಜಾರ, ಪೂರ್ಣಿಮಾ ತುಪ್ಪದ, ಹೋಳಿಬಸಯ್ನಾ, ಬಾಳಪ್ಪ ಕಾಳೆ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Launch of Bharat Brand-2: Wheat flour at 30, kg. 34 for rice

Bharat Brand: ಭಾರತ್‌ ಬ್ರ್ಯಾಂಡ್‌-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34

Famous Moo deng predicted Victory for Trump

US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್‌

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಕೊಪ್ಪಳ: 3 ದಿನದಲ್ಲಿ 300 ಜನರ ಮೇಲೆ ಕೇಸ್‌53 ಪ್ರಕರಣ -4.75 ಲಕ್ಷ ರೂ. ವಶ

ಕೊಪ್ಪಳ: 3 ದಿನದಲ್ಲಿ 300 ಜನರ ಮೇಲೆ ಕೇಸ್‌53 ಪ್ರಕರಣ -4.75 ಲಕ್ಷ ರೂ. ವಶ

Agriculture: ಕಂದಕೂರು ಗ್ರಾಮ- ನಿವೃತ್ತರ ನೌಕರನ ಕೈ ಹಿಡಿದ ಸಮ್ಮಿಶ್ರ ಬೇಸಾಯ ಪದ್ಧತಿ

Agriculture: ಕಂದಕೂರು ಗ್ರಾಮದ ನಿವೃತ್ತ ನೌಕರನ ಕೈ ಹಿಡಿದ ಸಮ್ಮಿಶ್ರ ಬೇಸಾಯ ಪದ್ಧತಿ

Deepavali Festival: ರೈತರ ಪಾಲಿಗೆ ಹೂವಾಯ್ತು ದೀಪಾವಳಿ ಹಬ್ಬದ ಬೋನಸ್‌!

Deepavali Festival: ರೈತರ ಪಾಲಿಗೆ ಹೂವಾಯ್ತು ದೀಪಾವಳಿ ಹಬ್ಬದ ಬೋನಸ್‌!

5-koppala

Koppala: ಶಾರ್ಟ್ ಸರ್ಕ್ಯೂಟ್ ನಿಂದ ಓರ್ವ ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Archana, abhishekam in ancestral village for Kamala’s victory!

US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!

Launch of Bharat Brand-2: Wheat flour at 30, kg. 34 for rice

Bharat Brand: ಭಾರತ್‌ ಬ್ರ್ಯಾಂಡ್‌-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34

Famous Moo deng predicted Victory for Trump

US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್‌

Kanaka-Award

Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.