ಬೇಡಿಕೆ ಈಡೇರಿಕೆಗೆ ಒತ್ತಾಯ
ಪದವೀಧರ ಶಿಕ್ಷಕರೆಂದು ಪರಿಗಣಿಸಲು ಪ್ರಾಥಮಿಕ ಶಿಕ್ಷಕರ ಮನವಿ
Team Udayavani, Jul 10, 2019, 11:11 AM IST
ಬಳ್ಳಾರಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಬಳ್ಳಾರಿ: ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಬೇಕು ಸೇರಿದಂತೆ ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ವೇತನ ಶ್ರೇಣಿ ನಿಗದಿಪಡಿಸಬೇಕು. ರಾಜ್ಯದ ಎಲ್ಲ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿ ಆರಂಭಿಸಬೇಕು. ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಮುಂದುವರಿಸಬೇಕು. ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಯಲ್ಲಿರುವ ನ್ಯೂನತೆ ಸರಿಪಡಿಸಬೇಕು. ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ಪರಿಗಣಿಸಬೇಕು. 6ನೇ ವೇತನ ಆಯೋಗದ ಅಂತಿಮ ವರದಿಯ ಶಿಫಾರಸಿನ ಪ್ರಕಾರ ಮುಖ್ಯಶಿಕ್ಷಕರಿಗೆ ಬಡ್ತಿ ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಉಪನಿರ್ದೇಶಕರ ಹುದ್ದೆಯವರೆಗೆ ಬಡ್ತಿ ನೀಡಬೇಕು. ಗ್ರಾಮೀಣ ಕೃಪಾಂಕ ಶಿಕ್ಷಕರ ವಜಾ ಆದ ಸೇವೆಯನ್ನು ಸತತ ಸೇವೆ ಎಂದು ಪರಿಗಣಿಸಿ ಆರ್ಥಿಕ ಹಾಗೂ ಇತರೆ ಸೌಲಭ್ಯ ಒದಗಿಸಬೇಕು ಎಂದು ಪ್ರತಿಭಟನಾ ನಿರತ ಶಿಕ್ಷಕರು ಆಗ್ರಹಿಸಿದರು.
ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರು ನಗರದ ಡಿಡಿಪಿಐ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ಮೂಲಕ ಆಗಮಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸಂಘದ ಜಿಲ್ಲಾಧ್ಯಕ್ಷ ಸಿ.ನಿಂಗಪ್ಪ, ಎನ್.ನಂದೀಶ್ವರ ನಾಯ್ಕ, ಜಗದೀಶ, ಗೀತಾ, ಪ್ರಭುಗೌಡ, ಕೊಟ್ರಮ್ಮ, ವೆಂಕಟೇಶ್, ಕವಿತಾ ಸೇರಿದಂತೆ ನೂರಾರು ಶಿಕ್ಷಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.