ಪದವೀಧರ ಶಿಕ್ಷಕರ ಬೃಹತ್‌ ಪ್ರತಿಭಟನೆ

•ತರಗತಿ ಬಹಿಷ್ಕಾರ-ಮಕ್ಕಳಿಗೆ ಅನಧಿಕೃತ ರಜೆ-ಶಿಕ್ಷಣ ಇಲಾಖೆಗೆ ಬಿಸಿ ಮುಟ್ಟಿಸಿದರು

Team Udayavani, Jul 10, 2019, 11:45 AM IST

uk-tdy-2..

ಕಾರವಾರ: ಶಿಕ್ಷಣ ಇಲಾಖೆ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಕಾರವಾರ: ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ವೃಂದ ಮತ್ತು ನೇಮಕಾತಿ ನಿಯಮ ಬದಲಾಯಿಸಲು ಆಗ್ರಹಿಸಿ ಕಾರವಾರ ಶೈಕ್ಷಣಿಕ ಜಿಲ್ಲೆಯ ಪದವೀಧರ ಶಿಕ್ಷಕರು ಬೃಹತ್‌ ಪ್ರತಿಭಟನೆಯನ್ನು ನಡೆಸಿದರು.

ಸಾವಿರಾರು ಶಿಕ್ಷಕರು ತರಗತಿ ಬಹಿಷ್ಕರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಸಮಾವೇಶಗೊಂಡರು. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನಿಂದ ಆಗಮಿಸಿದ ಕಿಪ್ರಾ ಶಾಲಾ ಶಿಕ್ಷಕರು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಡಿ ಪದವೀಧರ ಶಿಕ್ಷಕರ ಸಂಘದವರು ವಿವಿಧ ಬೇಡಿಕೆಗಳನ್ನು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು.

ಕಾರವಾರ ಶೈಕ್ಷಣಿಕ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ಗಾಂವಕರ್‌ ಮಾತನಾಡಿ, ಶಿಕ್ಷಕರ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಶಾಲಾ ತರಗತಿ ಬಹಿಷ್ಕರಿಸಿ ಪ್ರತಿಭಟನೆ ಮಾಡಿ ಸರ್ಕಾರದ ಗಮನಸೆಳೆಯುತ್ತಿದ್ದೇವೆ. ನಮಗೆ ಅರ್ಹತೆ ಇದೆ. ಅರ್ಹತೆ ಆಧರಿಸಿ ನಾವು 7, 8ನೇ ತರಗತಿ ತನಕ ವಿದ್ಯಾರ್ಥಿಗಳಿಗೆ ಕಲಿಸಲು ಅವಕಾಶ ಕೇಳುತ್ತಿದ್ದೇವೆ. ಹಾಗೆ ಅರ್ಹತೆ ಇರುವ ಕಾರಣ ಹುದ್ದೆ ಬಡ್ತಿ, ವೇತನ ಹೆಚ್ಚಳಕ್ಕೆ ಆಗ್ರಹಿಸುತ್ತಿದ್ದೇವೆ. ಹಳೆಯ ಪಿಂಚಣಿ ಮಾದರಿ ಅನುಸರಿಲು ಸರ್ಕಾರವನ್ನು ಒತ್ತಾಯಿಸುತ್ತಿದ್ದೇವೆ. ಮೂರು ವರ್ಷದಿಂದ ಶಿಕ್ಷಕರ ವರ್ಗಾವಣೆಯಾಗಿಲ್ಲ. ಈಗ ವರ್ಗಾವಣೆ ನಡೆದಿದೆ. ಇದು ಮುಗಿದ ನಂತರ ಅಕ್ಟೋಬರ್‌ನಲ್ಲಿ ಮತ್ತೂಮ್ಮೆ ಕೇವಲ ಕೋರಿಕೆ ವರ್ಗಾವಣೆ ಮಾಡಬೇಕೆಂದು ಸರ್ಕಾರವನ್ನು ಆಗ್ರಹಿಸುತ್ತಿದ್ದೇವೆ ಎಂದರು.

ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ ಹಾಗೂ ಯುಕೆಜಿ ಆರಂಭಿಸಬೇಕು. ಹೆಚ್ಚುವರಿ ಶಿಕ್ಷಕರು ಎಂಬುದೇ ಅವೈಜ್ಞಾನಿಕ. ಪ್ರತಿ ವಿಷಯಕ್ಕೆ ಒಬ್ಬ, ತರಗತಿಗೆ ಒಬ್ಬ ಶಿಕ್ಷಕರನ್ನು ಶಾಲೆಗಳಿಗೆ ನೀಡಬೇಕು. ಶಿಕ್ಷಕ ವಿದ್ಯಾರ್ಥಿ ಅನುಪಾತ ಕೈಬಿಟ್ಟು, ಮುಖ್ಯೋಪಾಧ್ಯಾಯ, ದೈಹಿಕ ಶಿಕ್ಷಕರನ್ನು ಹೊರತುಪಡಿಸಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ಶಾಲೆಗಳಿಗೆ ನೀಡಬೇಕು. ಆಗ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ದೈಹಿಕ ಶಿಕ್ಷಕರು, ಮುಖ್ಯೋಪಾಧ್ಯಾಯರನ್ನು ಬಿಟ್ಟು ಶಾಲೆಯಲ್ಲಿರುವ ಶಿಕ್ಷಕರು ವಿಷಯವಾರು ಹೆಚ್ಚಿನ ಸಂಖ್ಯೆಯಲ್ಲಿದ್ದರೆ ಮಾತ್ರ ಹೆಚ್ಚುವರಿ ಎಂದು ಗುರುತಿಸಬೇಕು. ಆರನೇ ವೇತನ ಆಯೋಗದ ಶಿಪಾರಸ್ಸಿನಂತೆ 10, 15 ವರ್ಷಕ್ಕೊಮ್ಮೆ, 20, 25 ಮತ್ತು 30 ವರ್ಷಕ್ಕೊಮ್ಮೆ ಬಡ್ತಿ ನೀಡಬೇಕು. ಹತ್ತು ವರ್ಷ ಸೇವೆಯ ನಂತರ ಪ್ರತಿ 5 ವರ್ಷಕ್ಕೊಮ್ಮೆ ಶಿಕ್ಷಕರಿಗೆ ಬಡ್ತಿ ನೀಡಬೇಕು. ಪದವೀಧರ ಶಿಕ್ಷಕರು ಉಪ ನಿರ್ದೇಶಕ ಹುದ್ದೆ ಏರುವತನಕ ಬಡ್ತಿ ಕೊಡುವ ಪದ್ಧತಿ ಇರಬೇಕು. ಗ್ರಾಮೀಣ ಕೃಪಾಂಕ ಶಿಕ್ಷಕರ ವಜಾ ಆದ ಸೇವೆಯನ್ನು ಸತತ ಸೇವೆ ಎಂದು ಪರಿಗಣಿಸಿ ಆರ್ಥಿಕ ಸೌಲಭ್ಯ ಮತ್ತು ಇನ್ನಿತರ ಸೇವಾ ಸೌಲಭ್ಯ ನೀಡಬೇಕೆಂದು ಆಗ್ರಹಿಸಿದರು. ಇದು ನಮ್ಮ ಹಕ್ಕೊತ್ತಾಯ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎನ್‌ .ಎಸ್‌. ನಾಯ್ಕ ಹೇಳಿದರು.

ಮುಂದಿನ ಹೋರಾಟ: ಸರ್ಕಾರ ಪದವೀಧರ ಶಿಕ್ಷಕರ ಬೇಡಿಕೆಗೆ ಮಣಿಯದಿದ್ದರೆ ಸೆ.5 ರಂದು ಶಿಕ್ಷಕರ ದಿನಾಚರಣೆ ಬಹಿಷ್ಕರಿಸಲಾಗುವುದು, ಅದೇ ದಿನ ವಿಧಾನಸೌಧ ಚಲೋ ಹಮ್ಮಿಕೊಳ್ಳುವುದಾಗಿ ಶಿಕ್ಷಕರು ಪ್ರಕಟಿಸಿದರು. ಬೇಡಿಕೆಗಳ ಮನವಿ ಪತ್ರವನ್ನು ಡಿಡಿಪಿಐ ಕಚೇರಿ ಶಿಕ್ಷಣಾಧಿಕಾರಿ ನಾರಾಯಣ ನಾಯಕರಿಗೆ ಸಲ್ಲಿಸಿದರು. ನಂತರ ಜಿಲ್ಲಾಧಿಕಾರಿ ಕಚೇರಿಯ ಬಳಿ ಅಪರ ಜಿಲ್ಲಾಧಿಕಾರಿ ಎಸ್‌.ಯೋಗೇಶ್ವರ್‌ಗೆ ಸಲ್ಲಿಸಿದರು. ಬೇಡಿಕೆಗಳನ್ನು ಸರ್ಕಾರಕ್ಕೆ ಕಳುಹಿಸುವುದಾಗಿ ಹೇಳಿದರು. ಪ್ರತಿಭಟನೆಯಲ್ಲಿ ಸಾವಿರಾರು ಶಿಕ್ಷಕ ಶಿಕ್ಷಕಿಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

10

Dandeli: ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಾವು

7-

Dandeli: ವಿವಾಹಿತ ವ್ಯಕ್ತಿ ಆತ್ಮಹತ್ಯೆ

Yellapur: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ; ಪ್ರಾಣಾಪಾಯದಿಂದ ಪಾರು…!

Yellapur: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ; ಪ್ರಾಣಾಪಾಯದಿಂದ ಪಾರು…!

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

10-thirthahalli

Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?

3

Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.