ಡ್ಯಾಂನಿಂದ 3 ಪಟ್ಟಣ, 45 ಗ್ರಾಮಕ್ಕೆ ನೀರು

ಅಣೆಕಟ್ಟು ನಿರ್ಮಾಣ ಪರಿಶೀಲಿಸಿದ ಕೇಂದ್ರ ಆರ್ಥಿಕ ಇಲಾಖೆ ಜಂಟಿ ಕಾರ್ಯದರ್ಶಿ ಋತ್ವಿಕ್‌ ಪಾಂಡೆ

Team Udayavani, Jul 10, 2019, 1:06 PM IST

kolar-tdy-2..

ಬಂಗಾರಪೇಟೆ ತಾಲೂಕಿನ ಯರಗೋಳ್‌ ಜಲಾಶಯಕ್ಕೆ ಕೇಂದ್ರ ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿ ಋತ್ವಿಕ್‌ ಪಾಂಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಪಂ ಸಿಇಒ ಜಿ.ಜಗದೀಶ್‌ ಉಪಸ್ಥಿತರಿದ್ದರು.

ಬಂಗಾರಪೇಟೆ: ತಾಲೂಕು, ಕೋಲಾರ, ಮಾಲೂರು ಪಟ್ಟಣ ಮತ್ತು 40 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ 240 ಕೋಟಿ ರೂ. ವೆಚ್ಚದ ಯರಗೋಳ್‌ ಅಣೆಕಟ್ಟು ನಿರ್ಮಾಣವನ್ನು ಕೇಂದ್ರ ಆರ್ಥಿಕ ಇಲಾಖೆ ಜಂಟಿ ಕಾರ್ಯದರ್ಶಿ ಋತ್ವಿಕ್‌ ಪಾಂಡೆ ಪರಿಶೀಲನೆ ನಡೆಸಿದರು.

ಯರಗೋಳ್‌ ಅಣೆಕಟ್ಟು ಕಾಮಗಾರಿ 13 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಬಗ್ಗೆ ಪ್ರಶ್ನಿಸಿದರು. ಇದಕ್ಕೆ ಅಧಿಕಾರಿಗಳು ಕೇಂದ್ರ ಸರ್ಕಾರದ ಅನುದಾನದಲ್ಲಿ ನಿರ್ಮಾಣ ಮಾಡುತ್ತಿರುವ ಅಣೆಕಟ್ಟಿಗೆ ಅಗತ್ಯ ಜಮೀನು ವಶಪಡಿಸಿಕೊಳ್ಳಲು ವಿಳಂಬವಾಯಿತು. ವರ್ಷದಿಂದ ಕಾಮಗಾರಿ ವೇಗವಾಗಿ ನಡೆಯುತ್ತಿದ್ದು, ಮುಂದಿ 6 ತಿಂಗಳೊಳಗಾಗಿ ಮುಗಿಸುವ ಬಗ್ಗೆ ಅಧಿಕಾರಿಗಳು ಸ್ಪಷ್ಟನೆ ನೀಡಿದರು.

ಎರಡು ವರ್ಷ ಪೂರೈಕೆ: ಯರಗೋಳ್‌ ನೀರಾವರಿ ಯೋಜನೆಯಿಂದ 500 ಎಂಸಿಎಫ್ಟಿ ನೀರು ಸಿಗಲಿದೆ. ಡ್ಯಾಂ ತುಂಬಿ ಹರಿದರೆ 375 ಎಕರೆ ಭೂ ಪ್ರದೇಶವು ಮುಳಗಡೆಯಾಗಲಿದೆ. ಒಮ್ಮೆ ತುಂಬಿದರೆ ಕನಿಷ್ಠ ಎರಡು ವರ್ಷ ಕುಡಿಯುವ ನೀರು ಪೂರೈಕೆ ಮಾಡಬಹುದಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಪರಿಹಾರ ವಿತರಣೆ: ಯರಗೋಳ್‌ ಡ್ಯಾಂ ನಿರ್ಮಾಣಕ್ಕೆ 375 ಎಕರೆ ಭೂ ಪ್ರದೇಶವನ್ನು ವಶಪಡಿಸಕೊಳ್ಳಲಾಗಿದೆ. ರೈತರಿಂದ 95 ಎಕರೆ, ಅರಣ್ಯ ಇಲಾಖೆಯಿಂದ 154 ಎಕರೆ ಮತ್ತು 126 ಎಕರೆ ಸರ್ಕಾರಿ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ರೈತರಿಗೆ ಪರಿಹಾರವಾಗಿ ಒಟ್ಟು 5.19 ಕೋಟಿ ರೂ. ಬಿಡುಗಡೆ ಮಾಡಿ ಸಮಸ್ಯೆ ಬಗೆಹರಿಸಲಾಗಿದೆ ಎಂದು ವಿವರಿಸಿದರು.

ತಾಂತ್ರಿಕತೆ ಅಳವಡಿಸಿಕೊಳ್ಳಿ: ಯರಗೋಳ್‌ ಅಣೆಕಟ್ಟನ್ನು ಎರಡು ಬೆಟ್ಟಗಳ ಮಧ್ಯೆ ಅಡ್ಡಲಾಗಿ ನಿರ್ಮಾಣ ಮಾಡಲಾಗುತ್ತಿದ್ದು, 414 ಮೀಟರ್‌ ಉದ್ದ, 30 ಮೀಟರ್‌ ಎತ್ತರ ಇದೆ. ಡ್ಯಾಂ ನಿರ್ಮಾಣ ವೇಳೆಗೆ ನೀರು ಪೂರೈಕೆಗೆ ಅಗತ್ಯವಾದ ತಾಂತ್ರಿಕತೆಗಳನ್ನು ಅಳವಡಿಸಲಾಗುವುದೆಂದು ಆಧಿಕಾರಿಗಳು ತಿಳಿಸಿದರು.

ಒಟ್ಟು 240 ಕೋಟಿ ರೂ. ಅನುದಾನದಲ್ಲಿ ಪೈಪ್‌ಲೈನ್‌ 80 ಕೋಟಿ ರೂ., ಅಣೆಕಟ್ಟು ಮತ್ತು ಸೇವಾ ರಸ್ತೆ ನಿರ್ಮಾಣಕ್ಕೆ 88 ಕೋಟಿ ರೂ. ಮತ್ತು ಅಣೆಕಟ್ಟುನಿಂದ ನೀರು ಪೂರೈಕೆ ಮಾಡಲು ಯಂತ್ರೋಪಕರಣಗಳ ಅಳವಡಿಸಿ ಕ್ರಮಕೈಗೊಳ್ಳುವುದಕ್ಕೆ 72 ಕೋಟಿ ರೂ. ಮಂಜೂರಾಗಿದೆ ಎಂದು ಹೇಳಿದರು.

45 ಗ್ರಾಮಗಳಿಗೆ ನೀರು ಪೂರೈಕೆ: ಬಂಗಾರಪೇಟೆ, ಮಾಲೂರು ಮತ್ತು ಕೋಲಾರ ನಗರಕ್ಕೆ ಕುಡಿಯುವ ಪೂರೈಕೆ ಮಾಡಲು ಯೋಜನೆ ಸಿದ್ಧಪಡಿಸಲಾಗಿದ್ದು, ಕುಡಿಯುವ ನೀರು ಪೂರೈಕೆಗೆ ನಗರ ನೀರು ಪೂರೈಕೆ ಮತ್ತು ಒಳಚರಂಡಿ ಇಲಾಖೆಯು ಕ್ರಮಕೈಗೊಳ್ಳಲಿದ್ದು, ಯರಗೋಳ್‌ನಿಂದ ಬಂಗಾರಪೇಟೆ, ಅಲ್ಲಿಂದ ಮಾಲೂರು ಮತ್ತು ಕೋಲಾರಕ್ಕೆ ಹಾದುಹೋಗುವ ಮಾರ್ಗ ಮಧ್ಯೆ ಬರುವ 45 ಗ್ರಾಮಗಳಿಗೆ ನೀರು ಪೂರೈಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ಒದಗಿಸಿದರು.

ಈ ಸಂದರ್ಭದಲ್ಲಿ ಜಿಪಂ ಸಿಇಒ ಜಿ.ಜಗದೀಶ್‌, ಯೋಜನಾಧಿಕಾರಿ ರವಿಚಂದ್ರ, ಪಂಚಾಯತ್‌ ರಾಜ್‌ ಕಾರ್ಯಪಾಲಕ ಎಂಜಿನಿಯರ್‌ ಎಚ್.ಡಿ.ಶೇಷಾದ್ರಿ, ತಾಪಂ ಇಒ ಎನ್‌.ವೆಂಕಟೇಶಪ್ಪ, ಮುಳಬಾಗಿಲು ತಾಪಂ ಇಒ ಮಂಜುನಾಥ್‌, ಸಾಮಾಜಿಕ ಅರಣ್ಯಾಧಿಕಾರಿ ದೇವರಾಜ್‌ ಮುಂತಾದವರಿದ್ದರು.

ಟಾಪ್ ನ್ಯೂಸ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.