ಸ್ಮಶಾನ ಭೂಮಿ ಮಂಜೂರಿಗೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ
Team Udayavani, Jul 10, 2019, 2:43 PM IST
ಬೆಳಗಾವಿ: ಪರಿಶಿಷ್ಟ ಜಾತಿ-ಪಂಗಡದವರಿಗೆ ಸ್ಮಶಾನ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಹುಕ್ಕೇರಿ ತಾಲೂಕಿನ ಹಂಚಿನಾಳ ಗ್ರಾಮಸ್ಥರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಬೆಳಗಾವಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಸ್ಮಶಾನ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಹುಕ್ಕೇರಿ ತಾಲೂಕಿನ ಹಂಚಿನಾಳ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಹಂಚಿನಾಳ ಗ್ರಾಮದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕೊರವರ, ಬೇಡರ ಮತ್ತು ಮಾದರ ಸಮುದಾಯದ ಸುಮಾರು 150 ಮನೆಗಳ ಕುಟುಂಬಸ್ಥರು ವಾಸವಾಗಿದ್ದಾರೆ. ಈ ಕುಟುಂಬಗಳಿಗೆ ನಿಗದಿತ ಸ್ಮಶಾನ ಜಾಗ ಇಲ್ಲವಾಗಿದೆ ಎಂದು ಅಳಲು ತೋಡಿಕೊಂಡರು.
ಸುಮಾರು ನಾಲ್ಕು ತಲೆಮಾರುಗಳಿಂದಲೂ ಗ್ರಾಮದ ಶಂಕರ ಬಡಕುಂದ್ರಿ ಮತ್ತು ಬಾಬು ಬಡಕುಂದ್ರಿ ಎನ್ನುವವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸುತ್ತಾ ಬರಲಾಗಿದೆ. ಆದರೆ ಇದೀಗ ಜಮೀನಿನ ಮಾಲೀಕರು ಅವರ ಜಮೀನಿನಲ್ಲಿ ಶವಸಂಸ್ಕಾರ ಮಾಡಲು ತಕರಾರು ಮಾಡುತ್ತಿದ್ದಾರೆ. ಹೀಗಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕೊರವರ, ಬೇಡರ ಮತ್ತು ಮಾದರ ಸಮುದಾಯದ ಜನರಿಗೆ ಶವಸಂಸ್ಕಾರ ಮಾಡಲು ಸ್ಥಳ ಇಲ್ಲದಿರುವುದರಿಂದ ಸಮಸ್ಯೆ ಎದುರಾಗಿದೆ. ಹೀಗಾಗಿ ಸಮುದಾಯಕ್ಕೆ ಸ್ಮಶಾನ ಜಮೀನು ಕೊಡಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Bailhongal: ಯುವಕನಿಗೆ ಚಾಕು ಇರಿದು ಬರ್ಬರವಾಗಿ ಕೊ*ಲೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.