ವಿದ್ಯಾರ್ಥಿಗಳು ಸಮಾಜವನ್ನು ಅರಿಯಲು ಪ್ರಯತ್ನಿಸಿ: ನಿತೀಶ್ ನಾರಾಯಣನ್
Team Udayavani, Jul 11, 2019, 5:20 AM IST
ಮಹಾನಗರ: ವಿದ್ಯಾರ್ಥಿಗಳು ಜನರನ್ನು ಮತ್ತು ಸಮಾಜ ವನ್ನು ಅರಿಯುವ ಗುಣವನ್ನು ಮೈಗೂಡಿಸಿ ಕೊಳ್ಳಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್‌ನ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ನಿತೀಶ್ ನಾರಾಯಣನ್ ಅಭಿಪ್ರಾಯಪಟ್ಟರು.
ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ, ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆಗಾಗಿ ಮತ್ತು ವಿದ್ಯಾರ್ಥಿಗಳ ಏಕತೆ ಗಾಗಿ ನಡೆದ ಎಸ್‌ಎಫ್‌ಐನ ಜಿಲ್ಲಾ ಮಟ್ಟದ ಸಂಘಟನ ಕಾರ್ಯಾಗಾರದ ಸಮಾರೋಪದಲ್ಲಿ ಅವರು ಮಾತಾನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಮಾಧುರಿ ಬೋಳಾರ್, ಈ ಜಿಲ್ಲೆಯಲ್ಲಿ ವಿದ್ಯಾರ್ಥಿ ಏಕತೆ ಉಳಿಸುವ ನಿಟ್ಟಿನಲ್ಲಿ, ವಿದ್ಯಾರ್ಥಿಗಳ ಮೂಲಭೂತ ಹಕ್ಕುಗಳ ರಕ್ಷಣಿಗಾಗಿ ನಾವು ಹೋರಾಡಬೇಕು ಎಂದರು.
ಹಲವು ವರ್ಷಗಳಿಂದ ವಿದ್ಯಾರ್ಥಿ ಚಳವಳಿಯಲ್ಲಿ ಸಕ್ರಿಯರಾಗಿದ್ದ ಎಸ್‌ಎಫ್ ಐ ಮಾಜಿ ನಾಯಕರಾದ ಮಯೂರಿ ಬೋಳಾರ್, ಹಂಝ ಕಿನ್ಯಾ, ಹನುಮಂತ್ ಪಂಜಿಮೊಗರು ಮತ್ತು ಚರಣ್ ಶೆಟ್ಟಿ ಅವರನ್ನು ವಿದ್ಯಾರ್ಥಿ ಸಮಿತಿಯಿಂದ ಬಿಡುಗಡೆಗೊಳಿಸಲಾಯಿತು.
ಎಸ್‌ಎಫ್‌ಐನ ರಾಜ್ಯ ಕಾರ್ಯದರ್ಶಿ ಗುರುರಾಜ್ ದೇಸಾಯಿ, ಜಿಲ್ಲಾ ಕಾರ್ಯ ದರ್ಶಿ ವಿಕಾಸ್ ಕುತ್ತಾರ್, ಚರಣ್ ಶೆಟ್ಟಿ ಪಂಜಿಮೊಗರು ಉಪಸ್ಥಿತರಿದ್ದರು.
ನೂತನ ಜಿಲ್ಲಾ ಸಮಿತಿ
ಕಾರ್ಯಾ ಗಾರದಲ್ಲಿ ಎಸ್‌ಎಫ್‌ಐನ ನೂತನ ಸಮಿತಿ ಯನ್ನು ಆಯ್ಕೆ ಮಾಡಲಾಯಿತು. ಮಾಧುರಿ ಬೋಳಾರ್ (ಅಧ್ಯಕ್ಷೆ), ವಿಕಾಸ್ ಕುತ್ತಾರ್ (ಕಾರ್ಯದರ್ಶಿ), ಚಸ್ಮಿತಾ, ಶಮಾಝ್, ಸಿನಾನ್ ಬೆಂಗ್ರೆ (ಉಪಾಧ್ಯಕ್ಷರು), ಸಂಜಯ್ ಬಜಾಲ್, ಸಾಗರ್ (ಜತೆ ಕಾರ್ಯದರ್ಶಿಗಳು) ಆಯ್ಕೆಯಾದರು. ಒಟ್ಟು 23 ಸದಸ್ಯರ ನೂತನ ಸಮಿತಿಯನ್ನು ರಚಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.