ಮೆಡಿಕಲ್ ಕಾಲೇಜಿಗಾಗಿ ಯಾದಗಿರಿ ಬಂದ್
Team Udayavani, Jul 11, 2019, 3:05 AM IST
ಯಾದಗಿರಿ: ಜಿಲ್ಲೆಯ ಚಂಡರಕಿ ಗ್ರಾಮ ವಾಸ್ತವ್ಯಕ್ಕೆ ಆಗಮಿಸಿದ್ದ ವೇಳೆ ಸಿಎಂ ಕುಮಾರಸ್ವಾಮಿಯವರು ಯಾದಗಿರಿಗೆ ಮೆಡಿಕಲ್ ಕಾಲೇಜು ಉಪಯೋಗವಾಗಲ್ಲ, ಬೇರೆಯವರು ಬಂದು ಓದುತ್ತಾರೆ ಎಂದು ಹೇಳಿದ್ದನ್ನು ಖಂಡಿಸಿ ಬಿಜೆಪಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನೇತೃತ್ವದಲ್ಲಿ ಬುಧವಾರ ಕರೆ ನೀಡಿದ್ದ ಯಾದಗಿರಿ ಬಂದ್ ಸಂಪೂರ್ಣವಾಗಿತ್ತು.
ಸ್ವಯಂಪ್ರೇರಿತವಾಗಿ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ ಸಾರ್ವಜನಿಕರು, ಪ್ರತಿಭಟನೆಯಲ್ಲೂ ಭಾಗವಹಿಸಿದರು. ಅಂಗಡಿ ಮುಂಗಟ್ಟುಗಳು ಮುಚ್ಚಿದ್ದರಿಂದ ವ್ಯಾಪಾರ ವಹಿವಾಟು ಸ್ಥಗಿತಗೊಂಡಿತ್ತು. ಆದರೆ, ತುರ್ತುಸೇವೆಗೆ ಯಾವುದೇ ವ್ಯತ್ಯಯವಾಗಲಿಲ್ಲ.
ಈ ವೇಳೆ ಮಾತನಾಡಿದ ಶಾಸಕ ವೆಂಕಟರೆಡ್ಡಿ ಮುದ್ನಾಳ, ಯಾರದೋ ಮಾತು ಕೇಳಿ ರಾಜಕೀಯ ದುರುದ್ದೇಶದಿಂದ ಮುಖ್ಯಮಂತ್ರಿಗಳು ಮೆಡಿಕಲ್ ಕಾಲೇಜು ರದ್ದುಪಡಿಸುವ ವಿಚಾರ ಮಾತನಾಡಿದ್ದಾರೆ. ಸರ್ಕಾರ ಹಿಂದುಳಿದ ಭಾಗದ ಅಭಿವೃದ್ಧಿಗೆ ಕಾಳಜಿ ವಹಿಸುತ್ತಿಲ್ಲ ಎಂದು ಆರೋಪಿಸಿದರು. ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ಬಳಿಕ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan: ದರ್ಶನ್ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Ration Card: ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ
Session: ವಕ್ಫ್ ಜೊತೆ ಬಿಪಿಎಲ್ ಹೋರಾಟಕ್ಕೆ ಬಿಜೆಪಿ ಸಜ್ಜು
Operation Fear: ಕಾಂಗ್ರೆಸ್ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Viral Video: ಟಿಕ್‌ಟಾಕ್ ಸ್ಟಾರ್ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್
Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್ ಎನ್‌ಕೌಂಟರ್ ಬಗ್ಗೆ ಡಿಐಜಿ ಹೇಳಿದ್ದೇನು ?
Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ
Udupi: ವಿಸಿಲ್ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್ ನಿರ್ವಹಣೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.