ಶಾಸಕರ ಮೇಲಿನ ಹಲ್ಲೆ ಖಂಡನೀಯ: ಈಶ್ವರಪ್ಪ
Team Udayavani, Jul 11, 2019, 3:02 AM IST
ಬೆಂಗಳೂರು: ವಿಧಾನಸೌಧದಲ್ಲೇ ಸಚಿವರು, ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ ಶಾಸಕರ ಮೇಲೆ ಹಲ್ಲೆ ನಡೆಸಿ ದಬ್ಟಾಳಿಕೆ ನಡೆಸಿರುವುದು ಖಂಡನೀಯ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಬುಧವಾರ ಮಾತನಾಡಿದ ಅವರು, ವಿಧಾನಸೌಧದಲ್ಲಿ ಹಲ್ಲೆ ಘಟನೆ ನಡೆದಿರುವುದು ಗೊತ್ತಿದ್ದರೂ ಸ್ಪೀಕರ್ ಅವರು ಹಲ್ಲೆಗೆ ಒಳಗಾದವರಿಗೆ ರಕ್ಷಣೆಗೆ ಧಾವಿಸದಿರುವುದು ಅಚ್ಚರಿ ಮೂಡಿಸಿದೆ. ಸುಧಾಕರ್ ಅವರನ್ನು ಎಳೆದಾಡಿ ಕರೆದೊಯ್ದು ಕೊಠಡಿಯಲ್ಲಿ ಕೂಡಿ ಹಾಕಿರುವ ದೃಶ್ಯ, ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದು, ಕೂಡಲೇ ಸಂಬಂಧಪಟ್ಟವರ ವಿರುದ್ಧ ಕ್ರಮ ಜರುಗಿಸಬೇಕು.
ರಾಜೀನಾಮೆ ನೀಡುವವರಿಗೆ ಸ್ಪೀಕರ್ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು. ಬಿಜೆಪಿ ಶಾಸಕರನ್ನು ಸೆಳೆಯುತ್ತಿದೆ ಎಂದು ಕಾಂಗ್ರೆಸ್, ಜೆಡಿಎಸ್ ನಾಯಕರು ಆರೋಪಿಸುತ್ತಿದ್ದಾರೆ. ಆದರೆ, ಕಾಂಗ್ರೆಸ್, ಜೆಡಿಎಸ್‌ನ ನಿಷ್ಠಾವಂತ ಶಾಸಕರೇ ಅವರ ಪಕ್ಷದವರ ವಿರುದ್ಧ ಸಿಡಿದೆದ್ದಿದ್ದಾರೆ. ಹಿರಿಯ ನಾಯಕರು ಮನವಿ ಮಾಡಿದರೂ ವಾಪಸ್ಸಾಗಿಲ್ಲ. ಹಾಗಾಗಿ, ಎಚ್.ಡಿ.ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರು ಬಿಜೆಪಿ ಹಾಗೂ ರಾಜ್ಯದ ಜನರ ಕ್ಷಮೆ ಯಾಚಿಸಬೇಕು ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.