ಅಪ್ಪಣೆ ಇಲ್ಲದ ಭವನಗಳಿಗೆ ನೀರು-ವಿದ್ಯುತ್ ಕಟ್
ಮಹಾನಗರ ಪಾಲಿಕೆ ಆಯುಕ್ತೆ ತುಷಾರಮಣಿ ಎಚ್ಚರಿಕೆ •ಪಾಲಿಕೆಯಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆ
Team Udayavani, Jul 11, 2019, 11:19 AM IST
ಬಳ್ಳಾರಿ ;ಮಹಾನಗರ ಪಾಲಿಕೆಯಲ್ಲಿ ಬುಧವಾರ ನಡೆದ ಸಾರ್ವಜನಿಕ ಕುಂದುಕೊರತೆಗಳ ಸಭೆಯಲ್ಲಿ ಆಯುಕ್ತೆ ಎಂ.ವಿ. ತುಷಾರಮಣಿ ಮಾತನಾಡಿದರು.
ಬಳ್ಳಾರಿ: ಪರವಾನಗಿ ಪಡೆಯದೇ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಭವನಗಳಿಗೆ ಕೂಡಲೇ ನೀರು, ವಿದ್ಯುತ್ ಸಂಪರ್ಕ ಹಾಗೂ ಇನ್ನಿತರೆ ಸೌಲಭ್ಯಗಳಿಗೆ ಕತ್ತರಿ ಹಾಕಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತೆ ತುಷಾರಮಣಿ ಎಚ್ಚರಿಸಿದರು.
ಇಲ್ಲಿನ ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿಯಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು.
ನಗರದಲ್ಲಿ 53 ಸಮುದಾಯ ಭವನಗಳು ಇದ್ದು, ಇದರಲ್ಲಿ ಎರಡು ಅಥವಾ ಮೂರು ಸಮುದಾಯ ಭವನಗಳು ಮಾತ್ರ ಪರವನಾಗಿ ಪಡೆದುಕೊಂಡು ಕಾರ್ಯನಿರ್ವಹಿಸುತ್ತಿವೆ. ಇನ್ನುಳಿದ ಸಮುದಾಯ ಭವನಗಳು ಪರವನಾಗಿ ಇಲ್ಲದೇ ಮದುವೆ ಇನ್ನಿತರೆ ಕಾರ್ಯಕ್ರಮಗಳು ನಡೆಸುತ್ತಿವೆ. ಇದರಿಂದಾಗಿ ಪಾಲಿಕೆಗೆ ತೆರಿಗೆ ವಿಷಯದಲ್ಲಿ ನಷ್ಟ ಉಂಟಾಗುತ್ತಿದೆ. ಆದಕಾರಣ ಅನುಮತಿ ಪಡೆಯದೆ ಹಾಗೂ ಪÃವಾನಗಿ ಇಲ್ಲದೇ ನಡೆಸುವ ಸಮುದಾಯ ಭವನಗಳಿಗೆ ನೀರು, ವಿದ್ಯುತ್ ಕಡಿತಗೊಳಿಸಿ ನೋಟಿಸ್ ನೀಡಲಾಗುವುದು. ಪರವಾನಗಿ ಪಡೆದ ನಂತರ ಸೌಲಭ್ಯಗಳು ಕಲ್ಪಿಸಲಾಗುವುದು ಎಂದರು.
ಶುದ್ಧ ಕುಡಿಯುವ ನೀರು, ಒಳ ಚರಂಡಿ ವ್ಯವಸ್ಥೆ, ಸಿಸಿ ರಸ್ತೆ ಹಾಗೂ ನಗರದಲ್ಲಿ ಸಾರ್ವಜನಿಕ ಶೌಚಾಲಯಗಳ ಕಾಮಗಾರಿಗಳು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ನಿಗದಿಪಡಿಸಿದ ಅವಧಿಯಲ್ಲಿ ಗುತ್ತಿಗೆದಾರರು ಗುಣಮಟ್ಟದ ಕೆಲಸಗಳನ್ನು ಮಾಡಿ ಪೂರ್ಣಗೊಳಿಸಬೇಕು ಎಂದು ತುಷಾರಮಣಿ ಅವರು ಹೇಳಿದರು.
ನಗರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಸಮುದಾಯ ಭವನಗಳ ನಿರ್ಮಾಣವು ತ್ವರಿತಗತಿಯಲ್ಲಿ ಸಾಗುತ್ತಿಲ್ಲ. ಕೆಲವೊಂದು ಕಡೆ ಸರಿಯಾದ ಕಾಮಗಾರಿ ನಿರ್ವಹಿಸಿರುವುದಿಲ್ಲ ಎಂಬ ದೂರುಗಳು ನಮ್ಮ ಗಮನಕ್ಕೆ ಬಂದಿದೆ. ಆ ರೀತಿಯ ಕಾಮಗಾರಿಗಳ ಪಟ್ಟಿಯನ್ನು ತರಿಸಿಕೊಳ್ಳಲಾಗುವುದು ಮತ್ತು ಅವುಗಳನ್ನು ನಿರ್ವಹಿಸುತ್ತಿರುವ ಗುತ್ತಿಗೆದಾರರನ್ನು ಕರೆಸಿ ಗುಣಮಟ್ಟದ ವಿಷಯದಲ್ಲಿ ಯಾವುದೇ ರೀತಿಯಿಂದ ರಾಜಿಯಾಗದಂತೆ ಕೂಡಲೇ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಲಾಗುವುದು ಎಂದರು.
ವಿವಿಧ ಬಡಾವಣೆ, ನಗರ ಪ್ರದೇಶಗಳಲ್ಲಿ ಡ್ರೈನೇಜ್ ಬ್ಲಾಕ್ ಆಗಿರುವುದರಿಂದ ಸಾಕಷ್ಟು ದೂರುಗಳು ಬಂದಿದೆ. ಪ್ರಸ್ತುತ ಮಳೆಗಾಲ ಆರಂಭವಾಗಿರುವುದರಿಂದ ತೊಂದರೆಗಳು ಅಧಿಕವಾಗುತ್ತಿವೆ. ಇದರ ಕುರಿತು ಮಹಾನಗರ ಪಾಲಿಕೆ ಸಿಬ್ಬಂದಿ ಖುದ್ದಾಗಿ ಪರಿಶೀಲನೆ ನಡೆಸಿ ಮತ್ತು ನಗರದಲ್ಲಿ ನಿರ್ಮಿಸಿರುವ ಸಾರ್ವಜನಿಕರ ಶೌಚಾಲಯಗಳನ್ನು ಪಟ್ಟಿ ಮಾಡಿ ಅದರ ನಿರ್ವಹಣೆ ಹಾಗೂ ಗುಣಮಟ್ಟವನ್ನು ಅರಿಯಬೇಕು ಎಂದರು.
ಟ್ರೇಡ್ ಲೈಸೆನ್ಸ್ ಪಡೆಯಿರಿ:1996ರ ಕಾಯ್ದೆಯ ಪ್ರಕಾರ ನಗರದಲ್ಲಿ ಇರುವ ಅಂಗಡಿ, ಮುಂಗಟ್ಟುಗಳು ಕಡ್ಡಾಯವಾಗಿ ಟ್ರೇಡ್ ಲೈಸೆನ್ಸ್ ಪಡೆಯಬೇಕು ಎಂಬ ನಿಯಮವಿದೆ. ಬಳ್ಳಾರಿ ನಗರದಲ್ಲಿ 10 ಸಾವಿರಕ್ಕೂ ಅಧಿಕ ವಿವಿಧ ರೀತಿಯ ಅಂಗಡಿಗಳು ಇವೆ. ಇದರಲ್ಲಿ ಅಲ್ಪ ಅಂಗಡಿಗಳು ಮಾತ್ರ ಟ್ರೇಡ್ ಲೈಸೆನ್ಸ್ ಪಡೆದಿದ್ದು, ಇನ್ನುಳಿದವರಿಗೆ ಟ್ರೇಡ್ ಲೈಸೆನ್ಸ್ ಪಡೆದುಕೊಳ್ಳವಂತೆ ಜಾಗೃತಿ ಮೂಡಿಸಿದ್ದೇವೆ. ಆದರೂ, ಟ್ರೇಡ್ ಲೈಸೆನ್ಸ್ ಪಡೆಯದೆ ಹೋದರೆ ಅಂಥ ಅಂಗಡಿಗಳ ಬಾಗಿಲು ಮುಚ್ಚಲಾಗುತ್ತದೆ ಎಂದು ಎಚ್ಚರಿಕೆ ಕೊಟ್ಟರು.
ಮಹಾನಗರ ಪಾಲಿಕೆಯು ನಗರದ ಸಾರ್ವಜನಿಕರಿಗೆ ವಿವಿಧ ರೀತಿಯ ಸೌಲಭ್ಯಗಳನ್ನು ಕಲ್ಪಿಸುತ್ತಿದ್ದು, ಪಾಲಿಕೆ ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಿದ್ದಲ್ಲಿ ಬಾಕಿ ಉಳಿಸಿಕೊಂಡಿರುವವರು ತೆರಿಗೆ ಭರಿಸಬೇಕು ಮತ್ತು ಇನ್ನು ಮುಂದೆಯೂ ನಿರಂತರವಾಗಿ ಕಟ್ಟುತ್ತಾ ಸಲಹೆ-ಸೂಚನೆಗಳನ್ನು ನೀಡಬೇಕು ಎಂದು ಕೋರಿದರು. ಸಾರ್ವಜನಿಕರು ಇದೇ ಸಂದರ್ಭದಲ್ಲಿ ವಿವಿಧ ರೀತಿಯ ದೂರುಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಎಂಜನಿಯರ್‌ಗಳು ಸೇರಿದಂತೆ ವಿವಿಧ ಶಾಖೆಗಳ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.