ವಾರದೊಳಗೆ ಮಹದಾಯಿ ಅಧಿಸೂಚನೆ?

ನ್ಯಾಯಾಧಿಕರಣ ತೀರ್ಪಿನಂತೆ ನೀರು ಬಳಕೆಗೆ ಅನುಕೂಲ | ಸದಾನಂದ ಗೌಡ, ಜೋಶಿ ಕಸರತ್ತು

Team Udayavani, Jul 11, 2019, 12:47 PM IST

11-July-22

ಅಮರೇಗೌಡ ಗೋನವಾರ
ಹುಬ್ಬಳ್ಳಿ:
ಮಹದಾಯಿ ನ್ಯಾಯಾಧಿಕರಣ ತೀರ್ಪಿನ ಹಿನ್ನೆಲೆಯಲ್ಲಿ ಮಹದಾಯಿ ನದಿ ನೀರು ಬಳಕೆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಾರದೊಳಗಾಗಿ ಅಧಿಸೂಚನೆ ಹೊರಡಿಸಲು ಗಂಭೀರ ಚಿಂತನೆ ನಡೆಸಿದೆ.

ಮಹದಾಯಿ ನೀರು ವಿಚಾರವಾಗಿ ಕರ್ನಾಟಕ ಹಾಗೂ ಗೋವಾ ನಡುವೆ ಹಲವು ದಶಕಗಳ ವಿವಾದವಿತ್ತು. ನ್ಯಾ| ಜೆ.ಎಂ.ಪಾಂಚಾಲ ನೇತೃತ್ವದ ನ್ಯಾಯಾಧಿಕರಣ ನೀರು ಹಂಚಿಕೆ ತೀರ್ಪು ನೀಡಿದೆ. ಈ ಬಗ್ಗೆ ಕರ್ನಾಟಕ ಸುಪ್ರೀಂಕೋರ್ಟ್‌ಗೆ ಆಕ್ಷೇಪ ಅರ್ಜಿ ಸಲ್ಲಿಸಿದೆಯಾದರೂ ಹಂಚಿಕೆಯಾದ ನೀರು ಬಳಕೆಗೆ ಯಾವುದೇ ಅಡ್ಡಿ ಇಲ್ಲ. ನೀರು ಬಳಕೆ ಕಾಮಗಾರಿಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಬೇಕಾಗಿದೆ. ಮಹದಾಯಿ ನ್ಯಾಯಾಧಿಕರಣ 2018ರ ಆಗಸ್ಟ್‌ನಲ್ಲಿ ತೀರ್ಪು ನೀಡಿದ ನಂತರ ಅಧಿಸೂಚನೆ ವಿಚಾರದಲ್ಲಿ ರಾಜಕೀಯ ಪಕ್ಷಗಳಲ್ಲಿ ಆರೋಪ-ಪ್ರತ್ಯಾರೋಪಕ್ಕೆ ವೇದಿಕೆಯಾಗಿತ್ತು. ಇದೀಗ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಲು ಮಹತ್ವದ ಹೆಜ್ಜೆ ಇರಿಸಿದೆ.

ಸುಳಿವು ನೀಡಿದ್ದ ಜೋಶಿ: ಮಹದಾಯಿ ನದಿ ನೀರನ್ನು ರಾಜ್ಯ ಬಳಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಉತ್ಸುಕವಾಗಿದ್ದು, ಶೀಘ್ರದಲ್ಲಿಯೇ ಸಿಹಿ ಸುದ್ದಿ ನೀಡಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಇತ್ತೀಚೆಗಷ್ಟೇ ಸುಳಿವು ನೀಡಿದ್ದರು. ಇದಕ್ಕೆ ಪೂರಕ ಎನ್ನುವಂತೆ ಕೇಂದ್ರ ಸರ್ಕಾರ ಅಧಿಸೂಚನೆ ಜಾರಿಗೆ ಮುಂದಾಗಿದೆ.

ಸದಾನಂದ ಗೌಡ ಮುತುವರ್ಜಿ: ಮಹದಾಯಿ ವಿಷಯವಾಗಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೆಚ್ಚಿನ ಮುತುವರ್ಜಿ ವಹಿಸಿದ್ದಾರೆ. ಅಧಿಸೂಚನೆ ನಂತರ ಕಾಮಗಾರಿಗೆ ಹೆಚ್ಚಿನ ಅಡ್ಡಿಯುಂಟಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳೊಂದಿಗೆ ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಅವರು ಕೇಂದ್ರ ಸಚಿವರು, ರಾಜ್ಯದ ಸಂಸದರು, ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಇನ್ನಿತರರೊಂದಿಗೆ ಸಮಗ್ರ ರೀತಿಯಲ್ಲಿ ಸಮಾಲೋಚನೆ ನಡೆಸಿದ್ದಾರೆ. ಅಧಿಸೂಚನೆ ವಿಷಯವಾಗಿ ಸದಾನಂದಗೌಡ ಅವರು ದೆಹಲಿಯಲ್ಲಿನ ತಮ್ಮ ನಿವಾಸದಲ್ಲಿ ಮಹತ್ವದ ಚರ್ಚೆಗಳನ್ನು ನಡೆಸಿದ್ದಾರೆ ಎನ್ನಲಾಗಿದೆ.

ಹಂಚಿಕೆಯಾದ ನೀರು ಎಷ್ಟು?: 2010ರಲ್ಲಿ ರಚನೆಗೊಂಡಿದ್ದ ನ್ಯಾ| ಜೆ.ಎಂ.ಪಾಂಚಾಲ ನೇತೃತ್ವದ ಮಹದಾಯಿ ನ್ಯಾಯಾಧಿಕರಣ ಸುಮಾರು 8 ವರ್ಷಗಳ ನಂತರ ಅಂದರೆ, 2018ರ ಆಗಸ್ಟ್‌ನಲ್ಲಿ ಮಹದಾಯಿ ನದಿ ನೀರು ಹಂಚಿಕೆ ತೀರ್ಪು ನೀಡಿತ್ತು. ನ್ಯಾಯಾಧಿಕರಣ ಕರ್ನಾಟಕಕ್ಕೆ ಒಟ್ಟು 13.5 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿತ್ತು. ಇದರಲ್ಲಿ 5.5 ಟಿಎಂಸಿ ಅಡಿ ನೀರು ಮುಂಬೈ ಕರ್ನಾಟಕ ಭಾಗಕ್ಕೆ ಕುಡಿಯುವ ನೀರಿನ ಉದ್ದೇಶಕ್ಕೆ, 8.2 ಟಿಎಂಸಿ ಅಡಿ ನೀರು ವಿದ್ಯುತ್‌ ಉತ್ಪಾದನೆಗೆಂದು ಹಂಚಿಕೆ ಮಾಡಿತ್ತು. ಕಳಸಾದಿಂದ 1.12 ಟಿಎಂಸಿ ಅಡಿ, ಬಂಡೂರಿಯಿಂದ 2.18 ಟಿಎಂಸಿ ಅಡಿ ನೀರು ಬಳಕೆಗೆ ಅವಕಾಶ ನೀಡಲಾಗಿದೆ. ಅದೇ ರೀತಿ, ಗೋವಾಕ್ಕೆ 24 ಟಿಎಂಸಿ ಅಡಿ, ಮಹಾರಾಷ್ಟ್ರಕ್ಕೆ 1.33 ಟಿಎಂಸಿ ಅಡಿ ನೀರು ಹಂಚಿಕೆ ಮಾಡಲಾಗಿದೆ.

ಟಾಪ್ ನ್ಯೂಸ್

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Amparu: ಬೈಕ್‌ ಸ್ಕಿಡ್‌; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು

Amparu: ಬೈಕ್‌ ಸ್ಕಿಡ್‌; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು

KAUP: ಸಂವಿಧಾನ ಉಳಿಸಿ ಬೃಹತ್‌ ಜಾಥಾ ಮತ್ತು ಸಾರ್ವಜನಿಕ ಸಭೆ

KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್‌ ರಾಜ್‌ ಮೌರ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

15-uv-fusion

Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.