ವಾರ್ಷಿಕ ವರದಿ ಸಲ್ಲಿಕೆಗೆ ಆನ್‌ಲೈನ್‌ ಕಡ್ಡಾಯ

ಜುಲೈನಿಂದ ಇ ಆಡಳಿತ ವ್ಯವಸ್ಥೆ ಜಾರಿ• ಪಿಆರ್‌ಎಸ್‌ ಅಪ್ಲಿಕೇಷನ್‌-ಇ ಆಫೀಸ್‌ ಬಳಕೆ ಮಾಹಿತಿ

Team Udayavani, Jul 11, 2019, 1:41 PM IST

11-July-28

ಹಾವೇರಿ: ಜಿ.ಎಚ್. ಕಾಲೇಜಿನ ಪದವಿ ವಿಭಾಗದ ಪ್ರಾಚಾರ್ಯ ಡಾ| ಎಂ.ಎಸ್‌.ಯರಿಕೊಪ್ಪ ಕಾರ್ಯಾಗಾರ ಉದ್ಘಾಟಿಸಿದರು.

ಹಾವೇರಿ: ಕ‌ರ್ನಾಟಕ ಸರ್ಕಾರದ ‘ಎ’ ವೃಂದದ ಅಧಿಕಾರಿಗಳಿಗೆ ವಿದ್ಯುನ್ಮಾನ ವಾರ್ಷಿಕ ಕಾರ್ಯನಿರ್ವಹಣಾ ವರದಿ (ಇ ಪಿಆರ್‌ಎಸ್‌ ಅಪ್ಲಿಕೇಷನ್‌) ಹಾಗೂ ಇ ಆಫೀಸ್‌ ಬಳಕೆ ಕುರಿತಂತೆ ತರಬೇತಿ ಕಾರ್ಯಾಗಾರ ನಗರದ ನಗರದ ಗುದ್ಲೆಪ್ಪ ಹಳ್ಳಿಕೇರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಜಿಲ್ಲಾಡಳಿತ ಹಾಗೂ ಜಿಲ್ಲಾ ತರಬೇತಿ ಸಂಸ್ಥೆಯ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಜಿ.ಎಚ್. ಕಾಲೇಜಿನ ಪದವಿ ವಿಭಾಗದ ಪ್ರಾಚಾರ್ಯ ಡಾ| ಎಂ.ಎಸ್‌.ಯರಿಕೊಪ್ಪ ಉದ್ಘಾಟಿಸಿದರು.

ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಸಿ.ಎಸ್‌. ಭಂಗಿ ಮಾತನಾಡಿ, ಎ ವೃಂದದ ಅಧಿಕಾರಿಗಳು 2018-19ನೇ ಸಾಲಿನ ವಾರ್ಷಿಕ ಕಾರ್ಯನಿರ್ವಹಣಾ ವರದಿಯನ್ನು ಮ್ಯಾನುವಲ್ ಬದಲಾಗಿ ಆನ್‌ಲೈನ್‌ ಮೂಲಕ ವರದಿ ಮಾಡುವ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಮ್ಯಾನುವಲ್ ವಾರ್ಷಿಕ ವರದಿಯನ್ನು ಸ್ವೀಕರಿಸುವುದಿಲ್ಲ. ಈ ಕಾರಣಕ್ಕಾಗಿ ಕರ್ನಾಟಕ ಸರ್ಕಾರದ ಎ ವೃಂದದ ಸೇವೆಯಲ್ಲಿರುವ ಜಿಲ್ಲೆಯ ಎಲ್ಲ ಅಧಿಕಾರಿಗಳಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಮಾರ್ಗಸೂಚಿಯಂತೆ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಆನ್‌ಲೈನ್‌ ಮೂಲಕ ವಾರ್ಷಿಕ ಕಾರ್ಯನಿರ್ವಹಣೆಯ ವರದಿ ಜೊತೆಗೆ ಜುಲೈನಿಂದಲೇ ಜಿಲ್ಲಾಮಟ್ಟದ ಎಲ್ಲ ಕಚೇರಿಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಇ ಆಡಳಿತ ವ್ಯವಸ್ಥೆ ಜಾರಿಗೆ ತರಲು ಉದ್ದೇಶಿಸಲಾಗಿದೆ. ಈಗಾಗಲೇ ರಾಜ್ಯದಲ್ಲಿ ಇ ಆಡಳಿತ ವ್ಯವಸ್ಥೆ ಆರಂಭಗೊಂಡಿದ್ದು, ಪೂರ್ಣ ಪ್ರಮಾಣದಲ್ಲಿ ಈ ವ್ಯವಸ್ಥೆಯನ್ನು ಜಾರಿಗೊಳಿಸಲು ಆಡಳಿತ ಮತ್ತು ಸುಧಾರಣೆ ಇಲಾಖೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ತರಬೇತಿ ಆಯೋಜಿಸಲಾಗಿದ್ದು ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಆಡಳಿತ ವ್ಯವಸ್ಥೆಯಲ್ಲಿ ತಂತ್ರಜ್ಞಾನದ ಅಳವಡಿಕೆಗೆ ರಾಜ್ಯ ಸರ್ಕಾರದ ಇ ಆಡಳಿತ ಇಲಾಖೆ ಹೊಸ ಹೆಜ್ಜೆ ಇಡುತ್ತಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಕೇಂದ್ರ ನಾಗರಿಕ ಸೇವೆಗಳ ಐಎಎಸ್‌, ಐಪಿಎಸ್‌ ಅಧಿಕಾರಿಗಳು ಈಗಾಗಲೇ ತಮ್ಮ ವಾರ್ಷಿಕ ಕಾರ್ಯನಿರ್ವಹಣಾ ವರದಿಗಳನ್ನು ಇಪಿಆರ್‌ಎಸ್‌ ಮೂಲಕ ಸಲ್ಲಿಸುತ್ತಿದ್ದಾರೆ. ರಾಜ್ಯ ಸರ್ಕಾರದ ಎ ವೃಂದದ ಅಧಿಕಾರಿಗಳಿಗೂ 2018-19ನೇ ಸಾಲಿನಿಂದ ಈ ಪದ್ಧತಿ ಜಾರಿಯಾಗುತ್ತಿದೆ. ಅಧಿಕಾರಿಗಳು ಇದನ್ನು ಸರಿಯಾಗಿ ಅರಿತುಕೊಂಡರೆ ಅಳವಡಿಕೆ ಕಾರ್ಯ ಮತ್ತು ವಾರ್ಷಿಕ ಕಾರ್ಯನಿರ್ವಹಣೆ ವರದಿಗಳ ದಾಖಲೆ ಕಾರ್ಯ ಸುಲಭವಾಗುತ್ತದೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾದ ವೀರೇಶ ಹಾಗೂ ವಿದ್ಯಾ ಅಧಿಕಾರಿಗಳಿಗೆ ಪ್ರಾಯೋಗಿಕವಾಗಿ ವಿದ್ಯುನ್ಮಾನ ವಾರ್ಷಿಕ ಕಾರ್ಯನಿರ್ವಹಣಾ ವ್ಯವಸ್ಥೆಯ ಕುರಿತಂತೆ ಮಾಹಿತಿ ನೀಡಿ, ಮ್ಯಾನುವೆಲ್ ನಮೂನೆಯಲ್ಲಿರುವ ಎಲ್ಲ ಅಂಶಗಳು ವಿದ್ಯುನ್ಮಾನ ವ್ಯವಸ್ಥೆಯಲ್ಲಿ ಅಳವಡಿಸಲಾಗಿದೆ. ಪ್ರತಿ ಇಲಾಖೆಯ ಅಧಿಕಾರಿಗೆ ಯುಜರ್‌ ಐಡಿ ಹಾಗೂ ಪಾಸ್‌ವರ್ಡ್‌ ನೀಡಲಾಗುವುದು. ವಿದ್ಯುನ್ಮಾನ ಸಹಿ ಬಳಸಿ ಎನ್‌ಎಸ್‌ಐ ವೆಬ್‌ಸೈಟ್‌ನಲ್ಲಿ ಪಿಎಆರ್‌ ತಮ್ಮ ವಾರ್ಷಿಕ ವರದಿ ಆಸ್ತಿ ವಿವರಗಳನ್ನು ದಾಖಲಿಸಬೇಕು. ವರದಿ ಪ್ರಾಧಿಕಾರ, ಪರಿಶೀಲನಾ ಪ್ರಾಧಿಕಾರ ಹಾಗೂ ಸ್ವೀಕಾರ ವರದಿಗಳಿಗೆ ಪ್ರತಿ ಹಂತದಲ್ಲಿ 30 ದಿವಸ ಕಾಲಾವಕಾಶವಿದೆ. ಈ ಕಾಲಾವಧಿಯಲ್ಲಿ ವರದಿ ಕಳುಹಿಸಬೇಕಾಗುತ್ತದೆ ಹಾಗೂ ಅಂಗೀಕರಿಸಬೇಕಾಗುತ್ತದೆ ಎಂದರು. ವಿವಿಧ ಹಂತದ ಪರಿಶೀಲನೆ, ವರದಿಯ ಕ್ರಮ ಕುರಿತಂತೆ ವಿವರಿಸಿದರು.

ಉದ್ಘಾಟನಾ ಸಮಾರಂಭದಲ್ಲಿ ವಾರ್ತಾಧಿಕಾರಿ ಬಿ.ಆರ್‌.ರಂಗನಾಥ್‌, ಜಿ.ಎಚ್. ಕಾಲೇಜಿನ ಪ್ರಾಧ್ಯಾಪಕ ಪ್ರೊ| ವೆಂಕಟೇಶ್‌, ಪ್ರೊ| ದೀಪಕ ಕೊಲ್ಲಾಪುರೆ ಇದ್ದರು. ತರಬೇತಿಗೆ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಎ ವೃಂದದ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-blthangady

Belthangady: ಹೆಬ್ಬಾವು ಹಿಡಿದು ವೈರಲ್‌ ಆದ ಕುಪ್ಪೆಟ್ಟಿ ನಿವಾಸಿ ಆಶಾ!

1-gadag

Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-blthangady

Belthangady: ಹೆಬ್ಬಾವು ಹಿಡಿದು ವೈರಲ್‌ ಆದ ಕುಪ್ಪೆಟ್ಟಿ ನಿವಾಸಿ ಆಶಾ!

1-gadag

Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-blthangady

Belthangady: ಹೆಬ್ಬಾವು ಹಿಡಿದು ವೈರಲ್‌ ಆದ ಕುಪ್ಪೆಟ್ಟಿ ನಿವಾಸಿ ಆಶಾ!

1-gadag

Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.