ಸ್ಪೀಕರ್ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ನಕಾರ; ಸ್ಪೀಕರ್ ವಾದವೇನು?
Team Udayavani, Jul 11, 2019, 2:58 PM IST
ನವದೆಹಲಿ: ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ಹತ್ತು ಮಂದಿ ಅತೃಪ್ತ ಶಾಸಕರು ನೀಡಿರುವ ರಾಜೀನಾಮೆ ಪತ್ರವನ್ನು ಗುರುವಾರ ಸಂಜೆಯೊಳಗೆ ಪರಿಶೀಲಿಸಿ ನಿರ್ಧಾರ ಪ್ರಕಟಿಸಬೇಕೆಂದು ಸುಪ್ರೀಂಕೋರ್ಟ್ ಸ್ಪೀಕರ್ ರಮೇಶ್ ಕುಮಾರ್ ಗೆ ನೀಡಿರುವ ಆದೇಶದ ಬಗ್ಗೆ ಸ್ಪೀಕರ್ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ.
ಸ್ಪೀಕರ್ ಸಲ್ಲಿಸಿರುವ ಅರ್ಜಿಯ ವಾದವೇನು?
ಇಂದು ಸಂಜೆ 6ಗಂಟೆಯೊಳಗೆ ಅತೃಪ್ತ ಶಾಸಕರ ಅರ್ಜಿ ಪರಿಶೀಲಿಸಿ, ನಿರ್ಧಾರ ಪ್ರಕಟಿಸಲು ಅಸಾಧ್ಯ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ 12ಗಂಟೆವರೆಗೆ ಅವಕಾಶ ನೀಡಬೇಕು.
ಸ್ಪೀಕರ್ ಗೆ ಈ ರೀತಿ ಸುಪ್ರೀಂಕೋರ್ಟ್ ನಿರ್ದೇಶನ ನೀಡಲು ಸಾಧ್ಯವಿಲ್ಲ.
ಶಾಸಕರು ಸ್ವ ಇಚ್ಚೆಯಿಂದ ರಾಜೀನಾಮೆ ನೀಡಿದ್ದಾರೋ, ಇಲ್ಲವೋ ಎಂಬುದನ್ನು ಪರಿಶೀಲನೆ ನಡೆಸಬೇಕು.
ಮೊದಲು ಶಾಸಕರ ಅನರ್ಹತೆ ಬಗ್ಗೆ ಪರಿಶೀಲನೆ ನಡೆಸಬೇಕು, ನಂತರ ರಾಜೀನಾಮೆ ಬಗ್ಗೆ ಪರಿಶೀಲನೆ ನಡೆಸಬೇಕಾಗುತ್ತದೆ.
ಹೀಗಾಗಿ ಇಂದು ಸಂಜೆ 6ಗಂಟೆಯೊಳಗೆ ರಾಜೀನಾಮೆ ಪರಿಶೀಲಿಸಿ, ನಿರ್ಧಾರ ಪ್ರಕಟಿಸಲು ಸಾಧ್ಯವಿಲ್ಲ. ಈ ಅರ್ಜಿಯ ತುರ್ತು ವಿಚಾರಣೆ ನಡೆಸಿ ಆದೇಶ ನೀಡಬೇಕೆಂದು ಸ್ಪೀಕರ್ ರಮೇಶ್ ಕುಮಾರ್ ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಿದ್ದಾರೆ.
ಸುಪ್ರೀಂ ಹೇಳಿದ್ದೇನು?
ಇಂದು ಸಂಜೆ ಆರು ಗಂಟೆಯೊಳಗೆ ಸ್ಪೀಕರ್ ಯಾವುದೇ ನಿರ್ಧಾರ ಕೈಗೊಳ್ಳಬಹುದು.
ನಿಮ್ಮ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಲು ಸಾಧ್ಯವಿಲ್ಲ
ನಾಳೆ ಅತೃಪ್ತ ಶಾಸಕರ ಅರ್ಜಿಯ ಜೊತೆ ನಿಮ್ಮ ವಾದವನ್ನು ಆಲಿಸುತ್ತೇವೆ.
ಸ್ಪೀಕರ್ ಪರ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದು, ಸ್ಪೀಕರ್ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಳೆಗೆ ಮುಂದೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
ರಿಲ್ಯಾಕ್ಸ್ ಮೂಡ್ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಕೊಕೇನ್, ಚರಸ್ ಸೇವನೆ; ಮೂವರ ಬಂಧನ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Brahmavar: ಕಂಟೈನರ್ ಢಿಕ್ಕಿ; ಬೈಕ್ ಸಹಸವಾರೆ ಸಾವು
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.