ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ
ಹೊಳಲಿ ಗ್ರಾಮದ ಬಳಿ 16 ಎಕರೆ ಗೋಮಾಳದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಕ್ರಮ: ಡೀಸಿ ಮಂಜುನಾಥ್
Team Udayavani, Jul 11, 2019, 3:50 PM IST
ಕೋಲಾರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಸುದ್ದಿಗೋಷ್ಠಿ ನಡೆಸಿ ಹೊಳಲಿ ಸಮೀಪ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಮಾಡುವ ಕುರಿತು ವಿವರಿಸಿದರು.
ಕೋಲಾರ: ಕ್ರೀಡೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದರು.
ನಗರದ ಕಚೇರಿ ನ್ಯಾಯಾಂಗ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವದಲ್ಲೇ ದೊಡ್ಡ ಕ್ರೀಡೆಗಳಲ್ಲಿ ಹೊಂದಾಗಿರುವ ಕ್ರಿಕೆಟ್, ಭಾರತೀಯರ ಅಚ್ಚುಮೆಚ್ಚು. ಇದನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲೆಯ ಹುತ್ತೂರು ಹೋಬಳಿ, ಹೊಳಲಿ ಗ್ರಾಮದ ಬಳಿ 16 ಎಕರೆ ಸರ್ಕಾರಿ ಗೋಮಾಳ ಲಭ್ಯವಿದೆ. ಸರ್ಕಾರವು ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಬೆಂಗಳೂರು ಅವರ ಸಹಯೋಗದೊಂದಿಗೆ ಇಲ್ಲಿ ಕ್ರೀಡಾಂಗಣ ಸ್ಥಾಪನೆ ಮಾಡಲು ನಿರ್ಧರಿಸಿದೆ ಎಂದು ತಿಳಿಸಿದರು.
ಕ್ರೀಡಾಭಿಮಾನಿಗಳಿಗೆ ಅನುಕೂಲ: ಕರ್ನಾಟಕ ಭೂ ಮಂಜೂರಾತಿ 1969 ನಿಯಮ 22(ಎ) 1, 6ರ ಅನ್ವಯ ಮಾರ್ಗಸೂಚಿ ಬೆಲೆಯ ಶೇ.5 ವಾರ್ಷಿಕ ಗುತ್ತಿಗೆ ದರವನ್ನು ನಿಗದಿಪಡಿಸಿ, ಎರಡು ವರ್ಷಕ್ಕೊಮ್ಮೆ ಶೇ.10 ಗುತ್ತಿಗೆ ದರವನ್ನು ಹೆಚ್ಚಿಸಿಕೊಂಡು ಹೋಗುವಂತಹ ಷರತ್ತಿಗೆ ಒಳಪಟ್ಟು 30 ವರ್ಷಗಳ ಗುತ್ತಿಗೆ ಆಧಾರದ ಮೇಲೆ ಜಮೀನನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ಗೆ ಮಂಜೂರು ಮಾಡಲಾಗಿದೆ. ಇದರಿಂದ ಜಿಲ್ಲೆಯ ಕ್ರೀಡಾಪಟುಗಳು ಹಾಗೂ ಕ್ರೀಡಾಭಿಮಾನಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
3.90 ಲಕ್ಷ ರೂ.: ಹೊಳಲಿ ಗ್ರಾಮದಲ್ಲಿರುವ ಒಂದು ಎಕರೆ ಜಮೀನಿನ ಬೆಲೆ 3.90 ಲಕ್ಷ ರೂ. ಇದೆ. ಕ್ರಿಕೆಟ್ ಕ್ರೀಡಾಂಗಣದ 16 ಎಕರೆ ಜಮೀನಿಗೆ ವಾರ್ಷಿಕವಾಗಿ 3,17,600 ರೂ. ಅನ್ನು ಶೇ.5ರ ದರದಲ್ಲಿ ನಿಗದಿಮಾಡಲಾಗಿದೆ. ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಈ ಹಣವನ್ನು ಸರ್ಕಾರಕ್ಕೆ ಪಾವತಿ ಮಾಡಬೇಕಾಗುತ್ತದೆ ಎಂದು ವಿವರಿಸಿದರು.
ಕ್ರೀಡೆಗೆ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಇದು ದೊಡ್ಡ ಹೆಜ್ಜೆಯಾಗಿದೆ. ಕ್ರಿಕೆಟ್ ಕ್ರೀಡಾಂಗಣದ ಕರಡು ಪ್ರತಿ ಸಿದ್ಧವಾಗಿದ್ದು, ಸರ್ವೆ ಇಲಾಖೆಯ ತಹಶೀಲ್ದಾರ್‌ರ ಸಲಹೆ ಮೇರೆಗೆ ಕ್ರೀಡಾಂಗಣದ ಸ್ಥಳಕ್ಕೆ ಬೌಂಡರಿ ನಿರ್ಮಿಸಲಾಗುವುದು. ರಾಷ್ಟ್ರೀಯ ಹೆದ್ದಾರಿಯಿಂದ ಹೊಳಲಿ ಗ್ರಾಮಕ್ಕೆ ರಸ್ತೆ ಸಂಪರ್ಕ ಕಲ್ಪಿಸಲಾಗುವುದು ಹಾಗೂ ಗ್ರಾಮದ ರಸ್ತೆಯನ್ನು ಅಗಲೀಕರಣ ಮಾಡಲು ನಿರ್ಧರಿಸಲಾಗಿದೆ. ಕ್ರೀಡಾಂಗಣ ನಿರ್ಮಾಣಕ್ಕೆ ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರು, ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್, ಜಿಲ್ಲಾ ಪ್ರತಿನಿಧಿಗಳ ಪಾತ್ರ ಬಹುಮುಖ್ಯವಾಗಿದೆ ಎಂದು ತಿಳಿಸಿದರು. ಗೋಷ್ಠಿಯಲ್ಲಿ ಸಹಾಯಕ ಆಯುಕ್ತ ಸೋಮಶೇಖರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.