ಗ್ರಾಮ ಪಂಚಾಯಿತಿ ಆಸ್ತಿ ತೆರಿಗೆ ಪರಿಷ್ಕರಿಸಿ
ಪಿಡಿಒಗಳಿಗೆ ಜಿಪಂ ಸಿಇಒ ಶುಭ ಕಲ್ಯಾಣ್ ಸೂಚನೆ • ಆಂದೋಲನ ಮಾದರಿ ಅನುಸರಿಸಿ
Team Udayavani, Jul 11, 2019, 4:44 PM IST
ತುಮಕೂರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬುಧವಾರ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭ ಕಲ್ಯಾಣ್ ಮಾತನಾಡಿದರು
ತುಮಕೂರು: ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿ ಗಳಲ್ಲಿ ವಸೂಲಿ ಮಾಡುವ ಆಸ್ತಿ ತೆರಿಗೆಯನ್ನು ಕೂಡಲೇ ಪರಿಷ್ಕರಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭ ಕಲ್ಯಾಣ್ ಪಿಡಿಒಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬುಧವಾರ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು, ಅಂಗನವಾಡಿ ಕಟ್ಟಡ, ಶೌಚಗೃಹ ಹಾಗೂ ದುರಸ್ತಿಗೆ ಸಂಬಂಧಿಸಿದಂತೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತ ನಾಡಿದರು. ಗ್ರಾಮ ಪಂಚಾಯತಿಗಳ ಆಸ್ತಿ ತೆರಿಗೆ ಪರಿ ಷ್ಕರಣೆಯನ್ನು ಜುಲೈ ಮಾಹೆಯಲ್ಲಿ ಆಂದೋಲನದ ಮಾದರಿಯಲ್ಲಿ ಪ್ರಾರಂಭಿಸುವಂತೆ ಸೂಚಿಸಿದರು.
ತ್ಯಾಜ್ಯ ವಿಲೇವಾರಿ ಗುರಿ: ಸರ್ಕಾರದಿಂದ ಸ್ವಚ್ಛ ಭಾರತ್ ಯೋಜನೆಯಡಿ ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿಗಾಗಿ ಪ್ರಥಮ ಹಂತದಲ್ಲಿ 50 ಗ್ರಾಮಗಳ ಗುರಿ ನಿಗದಿಪಡಿಸಲಾಗಿದೆ. ಈ ಪೈಕಿ ಅನು ಮೋದನೆಯಾಗಿರುವ 14 ಗ್ರಾಮಗಳಲ್ಲಿ ಕಾಮಗಾರಿ ಗಳನ್ನು ಪ್ರಾರಂಭಿಸಲು ತಿಳಿಸಿದರಲ್ಲದೇ, ಗ್ರಾಮ ವಿಕಾಸ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಜುಲೈ ಮಾಹೆಯ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಕೆಆರ್‌ಐಡಿಎಲ್ ಇಂಜಿನಿಯರ್‌ಗೆ ಸೂಚನೆ ನೀಡಿದರು.
450 ಅಂಗನವಾಡಿ ಕಟ್ಟಡ ಮಂಜೂರು: ನರೇಗಾ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗಳ ಒಗ್ಗೂಡಿಸುವಿಕೆ ಕಾರ್ಯಕ್ರಮದಡಿ ಜಿಲ್ಲೆಗೆ 450 ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲು ಮಂಜೂ ರಾತಿ ದೊರೆತಿದ್ದು, ಈ ಪೈಕಿ 208 ಅಂಗನವಾಡಿ ಕಟ್ಟಡಗಳು ಪೂರ್ಣಗೊಂಡಿವೆ. ಉಳಿದ ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾರ್ಯವನ್ನು ಆಗಸ್ಟ್ ಮಾಹೆ ಯೊಳಗೆ ಪೂರ್ಣಗೊಳಿಸಬೇಕೆಂದು ಪಿಆರ್‌ಇಡಿ ಕಾರ್ಯಪಾಲಕ ಇಂಜಿನಿಯರ್‌ಗೆ ಸೂಚಿಸಿದರು.
241 ಅಂಗನವಾಡಿ ಶೌಚಗೃಹ ನಿರ್ಮಾಣ: ಜಿಲ್ಲೆಯಲ್ಲಿ 241 ಅಂಗನವಾಡಿ ಶೌಚಗೃಹಗಳ ನಿರ್ಮಾಣಕ್ಕಾಗಿ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸ ಲಾಗಿದ್ದು, ದುರಸ್ತಿಗಾಗಿ ಗುರುತಿಸಲಾಗಿರುವ 337 ಅಂಗನವಾಡಿ ಶೌಚಗೃಹಗಳನ್ನು ಒಂದು ವಾರದೊಳಗೆ ದುರಸ್ತಿ ಕಾರ್ಯ ಕೈಗೊಳ್ಳಬೇಕು. ಮಧುಗಿರಿ ತಾಲೂಕಿನಲ್ಲಿ ಗುರುತಿಸಲಾಗಿರುವ 37 ಅಂಗನವಾಡಿ ಶೌಚಗೃಹಗಳ ದುರಸ್ತಿಗೆ ಅಂದಾಜು ವೆಚ್ಚಕ್ಕನುಗುಣ ವಾಗಿ ನಿಯಮಾನುಸಾರ ಕೂಡಲೇ ಟೆಂಡರ್ ಕರೆಯುವಂತೆ ಮಧುಗಿರಿ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಕೃಷ್ಣಪ್ಪ, ಯೋಜನಾ ನಿರ್ದೇಶಕ ಬಾಲರಾಜ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಸ್.ನಟರಾಜ್, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.