ಬೇಡಿಕೆ ಈಡೇರಿಕೆಗೆ ಕಾರ್ಯಕರ್ತೆಯರ ಆಗ್ರಹ
ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ • ಡೀಸಿ ರಾಕೇಶ್ ಕುಮಾರ್‌ಗೆ ಮನವಿ ಸಲ್ಲಿಕೆ
Team Udayavani, Jul 11, 2019, 5:11 PM IST
ತುಮಕೂರು ನಗರದ ಟೌನ್‌ಹಾಲ್ ವೃತ್ತದಲ್ಲಿ ಸಮಾವೇಶಗೊಂಡ ಅಂಗನವಾಡಿ ಕಾರ್ಯಕರ್ತೆಯರು ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದರು.
ತುಮಕೂರು: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯ ಕರ್ತೆಯರು ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಟೌನ್‌ಹಾಲ್ ವೃತ್ತದಲ್ಲಿ ಸಮಾವೇಶ ಗೊಂಡ ಸಾವಿರಾರು ಅಂಗನ ವಾಡಿ ಕಾರ್ಯಕರ್ತೆಯರು ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.
ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಜಿ.ಕಮಲ ಮಾತನಾಡಿ, ಅಂಗನವಾಡಿ ಕೇಂದ್ರ ಗಳಲ್ಲಿಯೇ ಎಲ್ಕೆಜಿ, ಯುಕೆಜಿ ಪ್ರಾರಂಭಿಸಬೇಕು. ರಾಜ್ಯದ ಹಲವು ಕಡೆ ಮೂರ್‍ನಾಲ್ಕು ತಿಂಗಳಾದರೂ ಇನ್ನೂ ಗೌರವಧನ ನೀಡಿಲ್ಲ. ಪ್ರತಿ ತಿಂಗಳು ಗೌರವಧನ ಪಾವತಿಯಾಗುವಂತೆ ನೋಡಿ ಕೊಳ್ಳಬೇಕು ಎಂದು ಆಗ್ರಹಿಸಿದರು.
ಅಂಗನವಾಡಿ ನೌಕರರಿಗೆ ಆರೋಗ್ಯ ಕ್ಷೀಣಿಸಿದಾಗ ಅಥವಾ ಮರಣ ಹೊಂದಿದಾಗ ಬರುವ ಹಣ ಬರುತ್ತಿಲ್ಲ, ನಿವೃತ್ತಿಯಾದ ನೌಕರರಿಗೆ ಯಾವ ಸೌಲಭ್ಯವೂ ಇಲ್ಲ, ಆದರೂ ಅಂಗನವಾಡಿ ನೌಕರರು ದುಡಿಯುತ್ತಿದ್ದಾರೆ. ಸರಿಯಾಗಿ ಗ್ಯಾಸ್ ವಿತರಣೆ ಯಾಗುತ್ತಿಲ್ಲ, ಈ ಮಧ್ಯೆ ಅಂಗನವಾಡಿ ನೌಕರರ ಮೇಲೆ ಶಿಸ್ತು ಕ್ರಮ ನಡೆಯುತ್ತಲೇ ಇದೆ. ಗೌರವಧನ ಆಧಾರದಲ್ಲಿ ದುಡಿಯುವ ನೌಕರರನನ್ನು ಶೋಷಿಸಬಾರದು ಎಂದು ಹೇಳಿದರು.
ಮೇಲ್ವಿಚಾರಕಿಯರ ಹುದ್ದೆಗಳಿಗೆ ಅಂಗನವಾಡಿ ನೌಕರರಿಗೆ ಶೇ.50 ಮುಂಬಡ್ತಿ ಕೊಡಬೇಕು ಎಂಬ ಕೇಂದ್ರ ಸರ್ಕಾರದ ಆದೇಶವಿದೆ. ಆದರೆ ಈ ನಿಯಮ ವನ್ನು ರಾಜ್ಯ ಸರ್ಕಾರ ಸರಿಯಾಗಿ ಪಾಲಿಸುತ್ತಿಲ್ಲ. ಕಾಯಿಲೆಗಳು ಬಂದಾಗ ಪರ್ಯಾಯ ವ್ಯವಸ್ಥೆ ಮಾಡಬೇಕು. ವರ್ಗಾವಣೆ, ಮುಂಬಡ್ತಿ ಸಿಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಗೌರವಧನ ಹೆಚ್ಚಳವಾಗಲಿ: ಸೇವಾ ಹಿರಿತನದ ಆಧಾರದಲ್ಲಿ ಕನಿಷ್ಠ ವೇತನ ಜಾರಿ ಮಾಡಬೇಕು. ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ, ತಮಿಳು ನಾಡು, ಗೋವಾ, ಪಾಂಡಿಚೇರಿ, ಕೇರಳ ಮುಂತಾದ ರಾಜ್ಯಗಳಲ್ಲಿ 11ರಿಂದ 12 ಸಾವಿರ ರೂ. ವೇತನ ಹೆಚ್ಚಳವಾಗಿದೆ. ಆದ್ದರಿಂದ ರಾಜ್ಯದಲ್ಲಿಯೂ 18 ಸಾವಿರ ರೂ. ಗೌರವಧನ ಹೆಚ್ಚಳವಾಗಬೇಕು. ದಿನಕ್ಕೆ 6.30 ಗಂಟೆ ಕೆಲಸ ಮಾತೃಪೂರ್ಣ ಮತ್ತಿತರ ಕೆಲಸಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಮಾತೃ ಪೂರ್ಣ ಯೋಜನೆಯ ನಂತರ ಸಹಾಯಕಿಯರ ಕೆಲಸ ದುಪ್ಪಟ್ಟು ಆಗಿರುವುದರಿಂದ ಕಾರ್ಯಕರ್ತೆ ಯರಿಗೆ ನೀಡುವ ಗೌರವಧನದ ಶೇ.75 ಸಹಾಯಕಿ ಯರಿಗೆ ಕೊಡಬೇಕು ಎಂದು ಒತ್ತಾಯಿಸಿದರು.
ಹಣ ಜಮೆ ತಡ:ಅಂಗನವಾಡಿ ಸಹಾಯಕಿ ಕಾರ್ಯ ಕರ್ತೆಗಾಗಿ ಮುಂಬಡ್ತಿ ಪಡೆಯಲು ಇರುವ ವಯಸ್ಸಿನ, ಭೌಗೋಳಿಕ ವಿಸ್ತೀರ್ಣದ ಮಿತಿ ಸಡಿಲಿಸ ಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಹಿಂದೆ ಗ್ಯಾಸ್ ಸಿಲಿಂಡರ್ ಹಣವನ್ನು ನಮ್ಮ ಖಾತೆಗೆ ಒಂದೇ ಬಾರಿ ಜಮಾ ಮಾಡಲಾಗುತಿತ್ತು. ಗ್ಯಾಸ್ ಸಿಲಿಂಡರ್‌ಗೆ ಕಾರ್ಯಕರ್ತೆಯು ಹಣ ನೀಡಿ ಪಡೆದ ನಂತರ, ಬಿಲ್ಲುಗಳನ್ನು ಕಚೇರಿಗೆ ಸಲ್ಲಿಸಬೇಕು. ನಂತರ ಆರು ತಿಂಗಳಿಗೋ ಅಥವಾ ವರ್ಷದ ನಂತರ ಕಾರ್ಯಕರ್ತೆ ಖಾತೆ ಹಣ ಜಮೆ ಮಾಡಲಾಗುತ್ತಿದೆ ಎಂದು ಬೇಸರಿಸಿದರು.
ಮಾನಸಿಕ ಹಿಂಸೆ ನಿಲ್ಲಿಸಿ: ಮೊಟ್ಟೆ, ತರಕಾರಿ ಬಿಲ್ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಜಿಲ್ಲೆಯಲ್ಲಿ ಕೆಲವು ಮೇಲ್ವಿಚಾರಕಿಯರು ಅಂಗನವಾಡಿ ಕಾರ್ಯ ಕರ್ತೆಯರು ಮತ್ತು ಸಹಾಯಕಿಯರಿಗೆ ನೀಡುತ್ತಿರುವ ಕಿರುಕುಳ, ಮಾನಸಿಕ ಹಿಂಸೆ ನಿಲ್ಲಬೇಕು, ಹಾಗೂ ಭಾಗ್ಯಲಕ್ಷ್ಮೀ ಅರ್ಜಿ ಪಡೆಯುವಾಗ, ಬಾಂಡ್ ನೀಡುವಾಗ ಮತ್ತು ಸಹಾಯಕಿಯರಿಗೆ ಮುಂಬಡ್ತಿ, ಅನುಕಂಪದ ಆಧಾರದಲ್ಲಿ ಆಯ್ಕೆ ಯಾದವರ ಹತ್ತಿರ ಹಣ ವಸೂಲಿ, ನ್ಯೂಟ್ರಿಕ್ಲಬ್ ನಡೆಸುತ್ತಿರುವವರ ಮೇಲೆ ಕೂಡಲೇ ಶಿಸ್ತು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ಸಂಘದ ಖಜಾಂಚಿ ಬಿ.ಎಸ್.ಅನುಸೂಯ ಮಾತನಾಡಿ, ಅಂಗನವಾಡಿ ನೌಕರರು ಇಲಾಖೆ ಕೆಲಸಗಳಿಗೆ ಓಡಾಡುವಾಗ ಆಗುವ ಅಪ ಘಾತಗಳಿಗೆ ಪರಿಹಾರ ನೀಡಬೇಕು. ಮಾತೃಪೂರ್ಣ ಯೋಜನೆಗೆ ಬೇಕಾಗುವ ಅಗತ್ಯ ಪಾತ್ರೆ, ಡಬಲ್ ಸಿಲಿಂಡರ್ ಮತ್ತು ದಾಖಲಾತಿ ಪುಸ್ತಕ ತುರ್ತಾಗಿ ಒದಗಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಗ್ಯಾಸ್ ಸಿಲಿಂಡರ್ ಸರಬರಾಜು ಮಾಡಬೇಕು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು.
ಪ್ರತಿಭಟನೆ ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಸಾವಿರಾರು ಅಂಗನವಾಡಿ ಕಾರ್ಯಕರ್ತೆ ಯರು, ಸಹಾಯಕಿಯರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.