ವರ್ಷಕ್ಕೆ 1.20 ಕೋಟಿ ನಿರುದ್ಯೋಗ ಸೃಷ್ಟಿ: ಡಾ.ಹರೀಶ್
ಕುಟುಂಬಕ್ಕೆ ಒಂದು ಮಗು ತೀರ್ಮಾನಕ್ಕೆ ಬದ್ಧರಾಗಲು ಸಲಹೆ • ಜಿಲ್ಲಾಡಳಿತದಿಂದ ವಿಶ್ವ ಜನಸಂಖ್ಯಾ ದಿನಾಚರಣೆ
Team Udayavani, Jul 12, 2019, 12:00 PM IST
ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಗಾಯತ್ರಿ ರೇವಣ್ಣ ಉದ್ಘಾಟಿಸಿದರು.
ಮಂಡ್ಯ: ಭಾರತದಲ್ಲಿ ಜನಸಂಖ್ಯಾ ಸ್ಫೋಟ ಮಿತಿ ಮೀರುತ್ತಿದೆ. ಪ್ರತಿ ತಿಂಗಳಿಗೆ 18 ವರ್ಷ ಮೀರಿದ ಯುವಕರ ಸಂಖ್ಯೆ 10 ಲಕ್ಷಕ್ಕೆ ಹೆಚ್ಚಳವಾಗುತ್ತಿದ್ದರೆ ವಾರ್ಷಿಕ 1.20 ಕೋಟಿ ನಿರುದ್ಯೋಗಿಗಳು ಸೃಷ್ಟಿಯಾಗುತ್ತಿದ್ದಾರೆ ಎಂದು ಮಿಮ್ಸ್ ಸಮುದಾಯಶಾಸ್ತ್ರ ವೈದ್ಯ ವಿಭಾಗದ ಮುಖ್ಯಸ್ಥ ಡಾ.ಹರೀಶ್ ಆತಂಕ ವ್ಯಕ್ತಪಡಿಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕುಟುಂಬ ಕಲ್ಯಾಣ ನಿಭಾಯಿಸುವ ಜವಾಬ್ದಾರಿ, ತಾಯಿ ಮತ್ತು ಮಗುವಿನ ಆರೋಗ್ಯದ ಪೂರ್ಣ ತಯಾರಿ ಘೋಷಣೆಯೊಂದಿಗೆ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹವಾಮಾನ-ಸಂಸ್ಕೃತಿ ಪೂರಕ: ಭಾರತದ ಹವಾಮಾನ ಮತ್ತು ಸಂಸ್ಕೃತಿ ಜನಸಂಖ್ಯೆ ಹೆಚ್ಚಳಕ್ಕೆ ಅನುಕೂಲವಾಗಿದೆ. ಗ್ರಾಮೀಣ ಜನರು ಹೆಚ್ಚು ಸಂತಾನ ಮಾಡಿಕೊಳ್ಳುವತ್ತ ಆಸಕ್ತಿ ವಹಿಸಿದ್ದಾರೆ. ಬಾಲ್ಯ ವಿವಾಹ, ಸಂತಾನ ಹರಣ ಚಿಕಿತ್ಸೆ ಪಡೆಯದಿರುವುದು, ಗಂಡು ಮಕ್ಕಳ ಬಯಕೆ, ಕೃಷಿ ಮೇಲಿನ ವಿಪರೀತ ಅವಲಂಬನೆ ಹಾಗೂ ಧಾರ್ಮಿಕ ಅಪನಂಬಿಕೆ ಹೀಗೆ ಅನೇಕಾನೇಕ ಕಾರಣಗಳೂ ಕೂಡ ಜನಸಂಖ್ಯೆ ಬೆಳೆಯಲು ಕಾರಣವಾಗಿದೆ ಎಂದು ತಿಳಿಸಿದರು.
ಒಂದು ಮಗುವಿಗೆ ಬದ್ಧ: ವಿಶ್ವದ 770 ಕೋಟಿ ಜನಸಂಖ್ಯೆಯಲ್ಲಿ 137 ಕೋಟಿ ಭಾರತೀಯರೇ ಇದ್ದಾರೆ. ಪ್ರಪಂಚದ ಪ್ರತಿ ನಾಲ್ಕು ಮಕ್ಕಳ ಜನನದಲ್ಲಿ ಒಂದು ಭಾರತೀಯ ಮಗು ಇದೆ. ಜನಸಂಖ್ಯಾ ಬೆಳವಣಿಗೆ ಅಭಿವೃದ್ಧಿಗೆ ಮಾರಕವಾಗಿದೆ. ಹೀಗಾಗಿ ಒಂದು ಕುಟುಂಬಕ್ಕೆ ಒಂದು ಮಗು ಪಡೆಯುವ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗುವುದು ಅನಿವಾರ್ಯವಾಗಿದೆ ಎಂದು ಹೇಳಿದರು.
ವಿಶ್ವದಲ್ಲಿ ಎರಡನೇ ಸ್ಥಾನ: ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಪಿ.ಕೆ.ಗಾಯತ್ರಿ ಮಾತನಾಡಿ, ವಿಶ್ವದ ಜನಸಂಖ್ಯೆಯಲ್ಲಿ ನಮ್ಮ ದೇಶ ಎರಡನೇ ಸ್ಥಾನದಲ್ಲಿದೆ. ಇದರಿಂದ ದೇಶದ ಅಭಿವೃದ್ಧಿಗೆ ತೊಡಕಾಗಿದ್ದು, ನಿರು ದ್ಯೋಗ, ಬಡತನ, ಆಹಾರ ಸೇರಿ ಮೂಲ ಸೌಕರ್ಯದ ಕೊರತೆಯಾಗಿದೆ. ಯುವಜನತೆ ಹೆಚ್ಚಾಗಿದ್ದರೂ ದುಡಿಯುವ ಕೈಗಳಿಗೆ ಕೆಲಸವಿಲ್ಲದಂತಾಗಿದೆ. ಹೀಗಾಗಿ ಜನಸಂಖ್ಯೆ ನಿಯಂತ್ರಣ ಅಗತ್ಯವಾಗಿದ್ದು, ಜಿಲ್ಲಾಡಳಿತ ಈ ಕುರಿತು ಅಗತ್ಯ ಕ್ರಮ ಕೈಗೊಂಡು ದೇಶದ ಅಭಿವೃದ್ಧಿಗೆ ಪೂರಕ ವಾತಾವರಣ ಸೃಷ್ಟಿಸಬೇಕು ಎಂದು ಹೇಳಿದರು.
ಜಾಗೃತಿ ಜಾಥಾ: ನಗರದ ಸರ್ ಎಂ.ವಿಶ್ವೇಶ್ವರಯ್ಯ ಬಳಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಯಾಲಕ್ಕಿಗೌಡ ಅವರು ಜನಸಂಖ್ಯಾ ದಿನಾಚರಣೆ ಕುರಿತು ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ಆಶಾ ಕಾರ್ಯಕರ್ತರು, ಶುಶ್ರೂಷಕಿಯರು, ನರ್ಸಿಂಗ್ ವಿದ್ಯಾರ್ಥಿಗಳು ಡಾ.ಬಿ.ಆರ್.ಅಂಬೇಡ್ಕರ್ ಭವನ ದವರೆಗೆ ಜಾಗೃತಿ ಜಾಥಾ ಮೆರವಣಿಗೆ ನಡೆಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಪಿ.ಮಂಚೇಗೌಡ, ಭಾರತೀಯ ರೆಡಾಸ್ ಸಂಸ್ಥೆ ಜಿಲ್ಲಾ ಘಟಕದ ಉಪಾಧ್ಯಕ್ಷೆ ಮೀರಾಶಿವಲಿಂಗಯ್ಯ, ವೈದ್ಯಾಧಿಕಾರಿಗಳಾದ ಡಾ.ಸುಭಾಷ್, ಡಾ.ಕೆ.ಆರ್.ಶಶಿಧರ್, ಡಾ.ಜವರೇ ಗೌಡ, ಡಾ.ಭವಾನಿ ಶಂಕರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪಿ.ಶಿವಾನಂದ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.