ಮೂಲ ಸೌಲಭ್ಯಕ್ಕೆ ಜನಸಂಖ್ಯಾ ಹೆಚ್ಚಳ ಅಡ್ಡಿ
ದೇಶದ ಜನಸಂಖ್ಯೆ ಹೆಚ್ಚಾದಂತೆ ಬಡವರು-ಅನಕ್ಷರಸ್ಥರ ಸಂಖ್ಯೆಯಲ್ಲೂ ಭಾರೀ ಏರಿಕೆ: ಅನಂತ್
Team Udayavani, Jul 12, 2019, 12:17 PM IST
ಚಿತ್ರದುರ್ಗ: ವಿಶ್ವ ಜನಸಂಖ್ಯಾ ನಿಯಂತ್ರಣ ಕಾರ್ಯಕ್ರಮದಲ್ಲಿ ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಅನಂತ್ ಮಾಹಿತಿ ಕಿರುಪತ್ರ ಬಿಡುಗಡೆ ಮಾಡಿದರು.
ಚಿತ್ರದುರ್ಗ: ದೇಶದಲ್ಲಿನ ಬಡತನ ನಿರ್ಮೂಲನೆ ಮತ್ತು ಮೂಲ ಸೌಕರ್ಯಗಳ ಅಭಿವೃದ್ಧಿ ಸೇರಿದಂತೆ ದೇಶದ ಸಮಸ್ಯೆಗಳ ಪರಿಹಾರಕ್ಕೆ ಜನಸಂಖ್ಯಾ ನಿಯಂತ್ರಣ ಅನಿವಾರ್ಯ ಎಂದು ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಅನಂತ್ ಹೇಳಿದರು.
ನಗರದ ತರಾಸು ರಂಗಮಂದಿರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಹಾಗೂ ಕುಟುಂಬ ಕಲ್ಯಾಣ ವಿಧಾನಗಳ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
2011ರ ಜನಗಣತಿ ಪ್ರಕಾರ ಭಾರತದ ಜನಸಂಖ್ಯೆ 121 ಕೋಟಿ ಇದ್ದಿದ್ದು, ಪ್ರಸ್ತುತ 136 ಕೋಟಿಗೆ ಏರಿದೆ. ಭೂಮಿ ಮಾತ್ರ ಎಷ್ಟಿತ್ತೂ ಅಷ್ಟೇ ಇದೆ. ಪ್ರತಿ ಸೆಕೆಂಡ್‌ಗೆ 4 ರಿಂದ 5 ಮಗು ಹುಟ್ಟಿದರೆ ಮರಣ ಪ್ರಮಾಣ ಶೇ. 1 ರಿಂದ 2 ರಷ್ಟಾಗಿದೆ. ಇದರಿಂದ ಪ್ರತಿ ಸೆಕೆಂಡ್‌ಗೆ 2 ರಿಂದ 3 ಮಕ್ಕಳು ಇರುವ ಜನಸಂಖ್ಯೆಗೆ ಸೇರುತ್ತಿದ್ದಾರೆ. ಜನಸಂಖ್ಯೆ ಹೆಚ್ಚಾದಂತೆ ಸೌಲಭ್ಯಗಳ ಕೊರತೆಯುಂಟಾಗಿ ಇದರಿಂದ ಬಡತನ, ಅನಕ್ಷರಸ್ಥರ ಸಂಖ್ಯೆ ಹೆಚ್ಚಾಗುತ್ತದೆ. ಅಲ್ಲದೆ ಮೂಲ ಸೌಲಭ್ಯಗಳ ಕೊರತೆ ಉಂಟಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು. ಆರೋಗ್ಯ ಇಲಾಖೆಯೊಂದಿಗೆ ಸಾರ್ವಜನಿಕರು ಸಹಕರಿಸಿ ಜನಸಂಖ್ಯೆ ನಿಯಂತ್ರಣಕ್ಕೆ ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದು ಕರೆ ನೀಡಿದರು.
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ| ರಂಗನಾಥ್ ಮಾತನಾಡಿ, ಗ್ರಾಮ ಹಾಗೂ ನಗರಗಳಲ್ಲಿ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರು ಸಾರ್ವಜನಿಕರಿಗೆ ಜನಸಂಖ್ಯೆ ನಿಯಂತ್ರಣದ ಬಗ್ಗೆ ಅರಿವು ಮೂಡಿಸಬೇಕು. ಜನರ ಆರೋಗ್ಯ ಸುಧಾರಣೆ ಜೊತೆಗೆ ಜನಸಂಖ್ಯಾ ನಿಯಂತ್ರಣಕ್ಕೆ ಒತ್ತು ನೀಡಬೇಕೆಂದು ಮನವಿ ಮಾಡಿದರು.
ಡಾ| ರವೀಂದ್ರ ಸನ್ಮಾನ ಸ್ವೀಕರಿಸಿ ಮಾತನಾಡಿ, ಸ್ತ್ರೀ ಸಂತಾನಹರಣ ಶಸ್ತ್ರಚಿಕಿತ್ಸೆಗಿಂತ ಪುರುಷ ಸಂತಾನಹರಣ ಶಸ್ತ್ರಚಿಕಿತ್ಸೆ ಅತಿ ಸಣ್ಣ ಮತ್ತು ಸರಳವಾಗಿದೆ. ಆದ್ದರಿಂದ ಪುರುಷರು ಸಂತಾನಹರಣ ಚಿಕಿತ್ಸೆ ಮಾಡಿಸಿಕೊಳ್ಳಲು ಮುಂದೆ ಬರಬೇಕು. ಪುರುಷರಲ್ಲಿ ಸಂತಾನಹರಣ ಶಸ್ತ್ರಚಿಕಿತ್ಸೆ ಬಗ್ಗೆ ತಪ್ಪು ಕಲ್ಪನೆ ಇದೆ. ಇದನ್ನು ಹೋಗಲಾಡಿಸಿ ಅರಿವು ಮೂಡಿಸಬೇಕೆಂದರು.
ಜಿಲ್ಲಾ ಕೀಟಜನ್ಯ ರೋಗಗಳ ನಿಯಂತ್ರಣಾಧಿಕಾರಿ ಡಾ| ಜಯಮ್ಮ ಮಾತನಾಡಿ, ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶಗಳಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ದೇಶದ ಬಹುತೇಕ ಸಮಸ್ಯೆಗಳಿಗೆ ಏರುತ್ತಿರುವ ಜನಸಂಖ್ಯೆಯೇ ಕಾರಣ. ಇದರ ನಿಯಂತ್ರಣಕ್ಕೆ ಎಲ್ಲರ ಸಹಭಾಗಿತ್ವ ಅವಶ್ಯಕ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕುಟುಂಬ ಕಲ್ಯಾಣ ವಿಧಾನಗಳ, ಜನಸಂಖ್ಯಾ ನಿಯಂತ್ರಣಕ್ಕೆ ಶ್ರಮಿಸಿದ ವೈದ್ಯರು, ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಒಟ್ಟು 39 ಜನರನ್ನು ಸನ್ಮಾನಿಸಲಾಯಿತು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಜಯಪ್ರಕಾಶ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ| ಸಿ.ಒ. ಸುಧಾ, ಚಿತ್ರದುರ್ಗ ತಾಲೂಕು ಆರೋಗ್ಯಾಧಿಕಾರಿ ಡಾ| ಬಿ.ಎ. ಗಿರೀಶ್ ಮತ್ತಿತರರರು ಇದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸಿ.ಎಲ್. ಪಾಲಾಕ್ಷ ಸ್ವಾಗತಿಸಿದರು. ಮೂಗಪ್ಪ ನಿರೂಪಿಸಿದರು. ಆರೋಗ್ಯ ಶಿಕ್ಷಣಾಧಿಕಾರಿ ಮಂಜುನಾಥ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.