ರಾಜೀನಾಮೆ ಅಂಗೀಕಾರವಾದರೆ ರಾಜಕೀಯ ನಿವೃತ್ತಿ


Team Udayavani, Jul 13, 2019, 3:00 AM IST

raji-angi

ಹೊಸಕೋಟೆ: ಶಾಸಕ ಸ್ಥಾನಕ್ಕೆ ಸಲ್ಲಿಸಿರುವ ರಾಜೀನಾಮೆ ಅಂಗೀಕಾರವಾದರೆ ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ ಎಂದು ಸಚಿವ ಎನ್‌.ನಾಗರಾಜ್‌ ಸವಾಲೆಸೆದರು.

ಸಚಿವ ನಾಗರಾಜ್‌, ರಾಜೀನಾಮೆ ಸಲ್ಲಿಸಿದ ಬಳಿಕ ನಗರಕ್ಕೆ ಆಗಮಿಸಿ, ಕುವೆಂಪು ನಗರದ ರಸ್ತೆ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದರು. ನಂತರ ಪ್ರವಾಸಿ ಮಂದಿರದ ಮುಖಂಡರು, ಕಾರ್ಯಕರ್ತರನ್ನು ಭೇಟಿ ಮಾಡಿ ಮಾತನಾಡಿದರು.

ಅಭಿವೃದ್ಧಿ ಮಾಡಲು ಸಾಧ್ಯವಾಗದಂತಹ ಅಧಿಕಾರ ಏಕೆ ಬೇಕು? 70 ಶಾಸಕರಿರುವ ಕಾಂಗ್ರೆಸ್‌ನವರೇ ಮುಖ್ಯಮಂತ್ರಿಯಾಗಬೇಕಿತ್ತು ಎಂಬುದಾಗಿ ಹಿಂದೆಯೇ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೂ ತಿಳಿಸಲಾಗಿತ್ತು.

ಜೆಡಿಎಸ್‌ ಈಗಾಗಲೇ ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲು ಮುಂದಾಗಿರುವ ಪರಿಸ್ಥಿತಿಯಲ್ಲಿ ಸರ್ಕಾರದೊಂದಿಗೆ ಮುಂದುವರಿಯುವುದು ಸೂಕ್ತವಲ್ಲ. ಅಭಿವೃದ್ಧಿ ವಿಚಾರದಲ್ಲಿ ಬಹಳಷ್ಟು ತಾರತಮ್ಯ ಮಾಡಿರುವ ಕಾರಣದಿಂದ ಬೇಸತ್ತು ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದರು.

ಕಡಿಮೆ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗದೆ ಜನರಿಗೆ ಉತ್ತರಿಸಲು ಆಗುತ್ತಿಲ್ಲ. ವಸತಿ ಇಲಾಖೆಗೆ 2019ರ ಬಜೆಟ್‌ನಲ್ಲಿ 400 ಕೋಟಿ ರೂ.ಗಳ ಅನುದಾನಕ್ಕೆ ಮನವಿ ಸಲ್ಲಿಸಲಾಗಿತ್ತು.

ರಾಜ್ಯದಲ್ಲಿ ಲಕ್ಷಾಂತರ ಮಂದಿ ವಸತಿ ಹೀನರಿದ್ದು 15 ಲಕ್ಷ ಮನೆ ನಿರ್ಮಾಣ ಮಾಡುವುದಾಗಿ ಮುಖ್ಯಮಂತ್ರಿಗಳೇ ಬಜೆಟ್‌ನಲ್ಲಿ ತಿಳಿಸಿದ್ದರು. ಆದರೆ ಇದುವರೆಗೆ ಹಣ ಬಿಡುಗಡೆಯಾಗಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳ ಬಳಿ ಹಲವಾರು ಬಾರಿ ಚರ್ಚಿಸಿದರೂ ಸಹ ಸಕಾರಾತ್ಮಕವಾದ ಸ್ಪಂದನೆ ದೊರಕಿಲ್ಲ.

ನಿಗಮ, ಮಂಡಳಿ, ಸಮಿತಿಗಳ ನೇಮಕಾತಿಯಲ್ಲೂ ಸಹ ಸಮತೋಲನಕ್ಕೆ ತೀರ್ಮಾನಿಸಲಾಗಿತ್ತು. ಅಧಿಕಾರಿಗಳ ನೇಮಕ, ವರ್ಗಾವಣೆ ಬಗ್ಗೆ ಸ್ಥಳೀಯ ಶಾಸಕರ ಅಭಿಪ್ರಾಯಗಳಿಗೆ ಕಿಮ್ಮತ್ತಿಲ್ಲದಂತಾಗಿದೆ ಎಂದು ದೂರಿದರು.

ಕಲಾಪದಲ್ಲಿ ಪ್ರಶ್ನೆ: ಬಜೆಟ್‌ನಲ್ಲಿ ನಿಗದಿಪಡಿಸಿರುವ ಹಣ ಬಿಡುಗಡೆಯಾಗದ ಬಗ್ಗೆ ಶುಕ್ರವಾರ ಆರಂಭವಾದ ಕಲಾಪದಲ್ಲಿ ಪ್ರಶ್ನಿಸಲು ಯೋಜಿಸಿದ್ದೆ. ರಾಜೀನಾಮೆ ಸಂಬಂಧವಾಗಿ ಸ್ಪೀಕರ್‌ ಜು.17ರಂದು ತಿಳಿಸಿರುವಂತೆ ವಿಚಾರಣೆಗೆ ಹಾಜರಾಗಲಾಗುವುದು.

ನಂತರ ತಾಲೂಕಿನ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ಗೊಳ್ಳಲಾಗುವುದು ಎಂದು ತಿಳಿಸಿದರು. ಮುಖಂಡರಾದ ನಾರಾಯಣಗೌಡ, ಶಶಿಧರ್‌, ರಾಮಾಂಜಿನಿ, ಅರುಣ್‌ಕುಮಾರ್‌, ಎಚ್‌.ಜೆ. ಮೋಹನ್‌ ಮುಂತಾದವರು ಭಾಗವಹಿಸಿದ್ದರು. ಪ್ರವಾಸಿ ಮಂದಿರದಲ್ಲಿ ಸುಮಾರು 3 ಗಂಟೆಗಳ ಕಾಲ ಚರ್ಚಿಸಿ ನಂತರ ಹಿಂದಿರುಗುವ ಸಂದರ್ಭದಲ್ಲಿ ಕೆಲವು ಕಾರ್ಯಕರ್ತರು ರಾಜೀನಾಮೆ ನೀಡಬಾರದು.

ಇದರಿಂದ ಕಾರ್ಯಕರ್ತರು ತೊಂದರೆ ಅನುಭವಿಸಬೇಕಾಗುತ್ತಿದೆ ಎಂದು ಮನವಿ ಮಾಡಿಕೊಂಡರು. ಸರ್ಕಾರಿ ನಾಮಫಲಕ ಹೊಂದಿದ್ದ ಕಾರನ್ನು ಬಳಸದೆ ಸ್ವಂತ ಕಾರಿನಲ್ಲಿ ಆಗಮಿಸಿದ್ದ ಕಾರಿಗೆ ಪೊಲೀಸ್‌ ಬೆಂಗಾವಲು ಇರಲಿಲ್ಲ. ಸ್ಥಳದಲ್ಲಿ ಹಿಂದಿನಂತೆ ಹಾಜರಿರುತ್ತಿದ್ದ ಪೊಲೀಸ್‌ ಸಿಬ್ಬಂದಿ ಕಂಡುಬರಲಿಲ್ಲ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.