ವಿಂಡೀಸ್ ಪ್ರವಾಸಕ್ಕೆ ಧೋನಿ ಇಲ್ಲ?
ಕೊಹ್ಲಿ ಅನುಪಸ್ಥಿತಿ; ರೋಹಿತ್ ಶರ್ಮ ನಾಯಕ
Team Udayavani, Jul 13, 2019, 5:30 AM IST
ಹೊಸದಿಲ್ಲಿ: ಇನ್ನು ಎರಡು ವಾರ ಕಳೆದರೆ ಭಾರತ ಕ್ರಿಕೆಟ್ ತಂಡದ ವೆಸ್ಟ್ ಇಂಡೀಸ್ ಪ್ರವಾಸ ಆರಂಭವಾಗಲಿದೆ. ಕೊಹ್ಲಿ ಅವರ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮ ಅವರು ತಂಡವನ್ನು ಮುನ್ನಡೆಸುವ ಸಾಧ್ಯತೆಯಿದೆ. ಕೊಹ್ಲಿ, ಬುಮ್ರಾ ಮತ್ತು ಧೋನಿ ಅವರು ವಿಂಡೀಸ್ ಪ್ರವಾಸಕ್ಕೆ ಇರುವ ಸಾಧ್ಯತೆಯಿಲ್ಲ.
ಪೂರ್ಣ ಪ್ರಮಾಣದ ಸರಣಿ
ವಿಂಡೀಸ್ ಪ್ರವಾಸದ ವೇಳೆ ಭಾರತೀಯ ತಂಡವು ಎರಡು ಟೆಸ್ಟ್, ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನಾಡಲಿದೆ. ಆ. 3ರಂದು ಮೂರು ಪಂದ್ಯಗಳ ಟ್ವೆಂಟಿ20 ಸರಣಿಯ ಮೊದಲ ಪಂದ್ಯ ನಡೆಯಲಿದೆ. ಮೊದಲೆರಡು ಪಂದ್ಯಗಳು ಫ್ಲೋರಿಡಾದಲ್ಲಿ ನಡೆಯಲಿದೆ. ಟಿ20 ಸರಣಿಯ ಬಳಿಕ ಏಕದಿನ ಮತ್ತು ಟೆಸ್ಟ್ ಸರಣಿ ನಡೆಯಲಿದೆ. ಕೊಹ್ಲಿ ಅವರಿಗೆ ದೀರ್ಘ ಅವಧಿಗೆ ವಿಶ್ರಾಂತಿ ನೀಡಿದರೆ ಟೆಸ್ಟ್ ಸರಣಿಗೆ ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸುವ ಸಾಧ್ಯತೆಯಿದೆ.
ಜು. 14ರ ಬಳಿಕ ಆಯ್ಕೆ
ವಿಶ್ವಕಪ್‌ನಲ್ಲಿ ಸೆಮಿಫೈನಲ್‌ನಲ್ಲಿ ಸೋತ ಭಾರತೀಯ ತಂಡವು ಜೂ. 14ರಂದು ಭಾರತಕ್ಕೆ ಆಗಮಿಸಲಿದೆ. ಆಬಳಿಕ ವಿಂಡೀಸ್ ಸರಣಿಗೆ ಭಾರತೀಯ ತಂಡವನ್ನು ಆಯ್ಕೆ ಮಾಡಲಾಗುತ್ತದೆ. ವಿಶ್ವಕಪ್ ಫೈನಲ್ ಮುಗಿದ ಬಳಿಕ ಎಲ್ಲ ಆಟಗಾರರು ಲಂಡನ್‌ನಿಂದ ಭಾರತಕ್ಕೆ ಆಗಮಿಸುವ ಸಾಧ್ಯತೆಯಿದೆ.
ಕೊಹ್ಲಿ, ಬುಮ್ರಾಗೆ ವಿಶ್ರಾಂತಿ
ಕಳೆದ ಎರಡು ವರ್ಷಗಳಿಂದ ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಅವಿತರವಾಗಿ ಆಡಿದ ಕೊಹ್ಲಿ ಮತ್ತು ಜಸ್‌ಪ್ರೀತ್ ಬುಮ್ರಾ ಅವರಿಗೆ ಟಿ20 ಮತ್ತು ಏಕದಿನ ಸರಣಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಮೊದಲ ಎರಡು ಟೆಸ್ಟ್‌ಗೂ ಅವರಿಗೆ ವಿಶ್ರಾಂತಿ ನೀಡಲು ಚಿಂತನೆ ನಡೆಸಲಾಗುತ್ತಿದೆ. ಅವರಿಬ್ಬರು ತಂಡದ ಪ್ರಮುಖ ಆಟಗಾರರಾದ ಕಾರಣ ಮುಂದಿನ ತವರಿನ ಸರಣಿಗೆ ಸಿದ್ಧರಾಗಲು ವಿಶ್ರಾಂತಿಯ ಅಗತ್ಯ ಅವರಿಗಿದೆ ಎಂದು ತಂಡ ವ್ಯವಸ್ಥಾಪಕರು ಹೇಳಿದ್ದಾರೆ. ಆದರೆ ಧೋನಿ ಅವರ ಲಭ್ಯತೆ ಬಗ್ಗೆ ಖಚಿತ ಮಾಹಿತಿ ಸಿಕ್ಕಿಲ್ಲ. ಅವರು ವಿಂಡೀಸ್ ಸರಣಿಗೆ ಲಭ್ಯರಿರುತ್ತಾರೆಯೇ ಅಥವಾ ವಿಶ್ರಾಂತಿ ಪಡೆಯುತ್ತಾರೆಯೇ ಎಂಬುದು ಖಚಿತವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC ಪಿಚ್ ರೇಟಿಂಗ್: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ
ICC Bowling Ranking: ಐಸಿಸಿ ಬೌಲಿಂಗ್ ರ್‍ಯಾಂಕಿಂಗ್… ಬುಮ್ರಾ ಅಗ್ರಸ್ಥಾನ ಗಟ್ಟಿ
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್
Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.