ರೆಸಾರ್ಟ್ ಮೊರೆ ಹೋದ ಬಿಜೆಪಿ ಶಾಸಕರು
Team Udayavani, Jul 13, 2019, 3:08 AM IST
ಬೆಂಗಳೂರು: ಅನಿರೀಕ್ಷಿತವೆಂಬಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಬಹುಮತ ಸಾಬೀತಿಗೆ ಅವಕಾಶ ಕೋರುವ ಬಗ್ಗೆ ಪ್ರಸ್ತಾಪಿಸುತ್ತಿದ್ದಂತೆ ಎಚ್ಚೆತ್ತ ಬಿಜೆಪಿಯು ಕಾರ್ಯತಂತ್ರ ಬದಲಾಯಿಸಿ ತನ್ನ ಶಾಸಕರನ್ನು ರೆಸಾರ್ಟ್‌ನಲ್ಲಿರಿಸಿ ಒಗ್ಗಟ್ಟು ಕಾಯ್ದುಕೊಳ್ಳಲು ಮುಂದಾಗಿದೆ. ಶುಕ್ರವಾರ ಸಂಜೆ ವಿಧಾನಸೌಧದಿಂದ ಎರಡು ಬಸ್‌ಗಳಲ್ಲಿ ಹೊರಟ ಬಿಜೆಪಿ ಶಾಸಕರು ದೊಡ್ಡಬಳ್ಳಾಪುರ ರಸ್ತೆಯಲ್ಲಿರುವ “ರಮಡಾ’ ಹೋಟೆಲ್‌ಗೆ ತೆರಳಿದ್ದು, ಸೋಮವಾರ ಬೆಳಗ್ಗೆ ಹೋಟೆಲ್‌ನಿಂದಲೇ ಅಧಿವೇಶನಕ್ಕೆ ಬರಲಿದ್ದಾರೆ.
ಅಧಿವೇಶನ ಆರಂಭಕ್ಕೂ ಮುನ್ನ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರನ್ನು ರೆಸಾರ್ಟ್‌ಗೆ ಸ್ಥಳಾಂತರಿಸುವ ಚಿಂತನೆ ಬಗ್ಗೆ ಚರ್ಚೆ ನಡೆದಿರಲಿಲ್ಲ. ಆದರೆ ಮುಖ್ಯಮಂತ್ರಿಗಳು ಬಹುಮತ ಸಾಬೀತಿಗೆ ಅವಕಾಶ ಕೋರುವ ಬಗ್ಗೆ ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಕಚೇರಿಯಲ್ಲೇ ಹಿರಿಯ ನಾಯಕರೊಂದಿಗೆ ಚರ್ಚಿಸಿ ಶಾಸಕರನ್ನು ರೆಸಾರ್ಟ್‌ನಲ್ಲಿ ಇರಿಸಲು ನಿರ್ಧರಿಸಿದರು ಎಂದು ಮೂಲಗಳು ಹೇಳಿವೆ.
ಸಂಖ್ಯಾಬಲ ಕಳೆದುಕೊಂಡಿದ್ದರೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಬಹುಮತ ಸಾಬೀತಿಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಬಿಜೆಪಿಯು ಎಚ್ಚರ ವಹಿಸಿದೆ. ಹಳೆಯ ಸ್ನೇಹ, ಬಾಂಧವ್ಯ, ರಾಜಕೀಯ ನಂಟು ಇತರೆ ನೆಪದಲ್ಲಿ ಬಿಜೆಪಿ ಶಾಸಕರನ್ನು ಕಾಂಗ್ರೆಸ್, ಜೆಡಿಎಸ್ ನಾಯಕರು ಸಂಪರ್ಕಿಸಿ ಸೆಳೆಯಬಹುದು ಎಂಬ ಭೀತಿಯೂ ಪಕ್ಷದ ನಾಯಕರನ್ನು ಕಾಡುತ್ತಿದೆ. ಅನುಮಾನವಿರುವ ಶಾಸಕರನ್ನಷ್ಟೇ ರೆಸಾರ್ಟ್‌ನಲ್ಲಿ ಇರಿಸಿದರೆ ತಪ್ಪು ಸಂದೇಶ ರವಾನೆಯಾಗಲಿದೆ ಎಂಬ ಕಾರಣಕ್ಕೆ ಎಲ್ಲ ಶಾಸಕರನ್ನೂ ಹೋಟೆಲ್‌ನಲ್ಲಿ ಇರಿಸಲು ಬಿಜೆಪಿ ನಿರ್ಧರಿಸಿತು ಎಂದು ತಿಳಿಸಿವೆ.
ಅದರಂತೆ ಸಂಜೆ 6 ಗಂಟೆ ಹೊತ್ತಿಗೆ ಎರಡು ಬಸ್‌ಗಳಲ್ಲಿ 70ಕ್ಕೂ ಹೆಚ್ಚು ಶಾಸಕರು ರೆಸಾರ್ಟ್‌ನತ್ತ ಹೊರಟರು. ಯಲಹಂಕದಿಂದ ರೆಸಾರ್ಟ್‌ವರೆಗೆ ಶಾಸಕರಿದ್ದ ಬಸ್‌ಗಳಿಗೆ ಪೊಲೀಸರು ಭದ್ರತೆ ಒದಗಿಸಿದರು. ಶನಿವಾರ ಹಾಗೂ ಭಾನುವಾರ ಹೋಟೆಲ್‌ನಲ್ಲೇ ವಾಸ್ತವ್ಯ ಹೂಡಲಿರುವ ಶಾಸಕರು ಸೋಮವಾರ ವಿಧಾನಸೌಧಕ್ಕೆ ಬರಲಿದ್ದಾರೆ.
ಶಾಸಕರು ರೆಸಾರ್ಟ್‌ಗೆ ತೆರಳುವ ಮುನ್ನ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಅತೃಪ್ತ ಶಾಸಕರ ರಾಜೀನಾಮೆಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಸಮಂಜಸವಾದ ತೀರ್ಪು ನೀಡಿದೆ. ಗುರುವಾರ ಸ್ಪೀಕರ್ ಭೇಟಿಯಾಗಿ ರಾಜೀನಾಮೆ ಸಲ್ಲಿಸಿ ಹೋದ ಶಾಸಕರಿಗೆ ಇದರಿಂದ ನೈತಿಕ ಶಕ್ತಿ ಬಂದಂತಾಗಿದೆ. ಮುಂಬೈನಲ್ಲಿರುವ ಶಾಸಕರನ್ನು ನಮ್ಮ ಸ್ನೇಹಿತರು ಸಂಪರ್ಕಿಸಿದಾಗ ಸುಪ್ರೀಂ ಕೋರ್ಟ್ ಆದೇಶ ಸಮಾಧಾನ ತಂದಿದೆ ಎಂದು ಹೇಳಿದ್ದಾರೆ ಎಂದು ಹೇಳಿದರು.
ಸುಪ್ರೀಂ ಕೋರ್ಟ್ ಆದೇಶದಿಂದಾಗಿ ಸ್ಪೀಕರ್ 10 ಮಂದಿಯನ್ನು ಅನರ್ಹಗೊಳಿಸುವಂತಿಲ್ಲ ಹಾಗೂ ಆ ವಿಚಾರ ಕುರಿತು ಚರ್ಚೆ ನಡೆಸುವಂತಿಲ್ಲ. ವಿಪ್ ಜಾರಿ ಮಾಡಿದರೂ ಅದು ಅನ್ವಯವಾಗುವುದಿಲ್ಲ. ರಾಜೀನಾಮೆ ಕುರಿತು ವಿಚಾರಣೆ ಕೂಡ ನಡೆಸುವಂತಿಲ್ಲ. ಸುಪ್ರೀಂ ಕೋರ್ಟ್ ಮಂಗಳವಾರ ನೀಡುವ ಆದೇಶವನ್ನು ಕಾದು ನೋಡಲಾಗುವುದು. ಮುಖ್ಯಮಂತ್ರಿಗಳು ವಿಶ್ವಾಸ ಮತ ಯಾಚಿಸುವ ಇಂಗಿತ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಮುಂದಿನ ನಡೆಯನ್ನು ನಿರ್ಧರಿಸಲಾಗಿದೆ.
ವಿಶ್ವಾಸ ಮತ ಯಾಚನೆಯನ್ನು ನಾವು ಎದುರಿಸುವ ಪ್ರಶ್ನೆಯೇ ಇಲ್ಲ. ಶಾಸಕರೆಲ್ಲಾ ಒಟ್ಟಿಗೆ ಇರುವುದಾಗಿ ಹೇಳಿದ್ದರಿಂದ ಒಟ್ಟಿಗೆ ಇರಲು ಸೂಚಿಸಿದ್ದೇನೆ. ಅದರಂತೆ ರೆಸಾರ್ಟ್‌ಗೆ ಹೋಗುತ್ತಿದ್ದಾರೆ ಎಂದು ತಿಳಿಸಿದರು. ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಮುಖ್ಯಮಂತ್ರಿಗಳು ಅಗತ್ಯಬಿದ್ದರೆ ಬಹುಮತ ಸಾಬೀತುಪಡಿಸಲು ಅವಕಾಶ ಕೋರುವುದಾಗಿ ಹೇಳಿರುವುದು ಸರಿಯಲ್ಲ. ಅವರಿಗೆ ಧೈರ್ಯವಿದ್ದರೆ ಇಂದೇ ಬಹುಮತ ಸಾಬೀತಿಗೆ ಅವಕಾಶ ಮಾಡಿಕೊಡಿ ಎಂದು ಕೇಳಬೇಕಿತ್ತು.
ಸರ್ಕಾರಕ್ಕೆ ಬಹುಮತವಿಲ್ಲ ಎಂಬುದು ಜಗಜ್ಜಾಹೀರಾಗಿದೆ. ಅವರಿಗೊಂದು ಸವಾಲು ಹಾಕುತ್ತೇನೆ. ಅವರ ಶಾಸಕರನ್ನು ಕರೆದು ಒಂದು ಸಭೆ ಮಾಡಲಿ. ಆ ಮೇಲೆ ಅವರು ಬಹುಮತದ ಬಗ್ಗೆ ಯೋಚಿಸಲಿ. ಸರ್ಕಾರಕ್ಕೆ ಬಹುಮತ ಇಲ್ಲದಿರುವ ಬಗ್ಗೆ ಸೋಮವಾರ ಸದನದಲ್ಲಿ ಹೋರಾಟ ನಡೆಸಲಾಗುವುದು ಎಂದು ಹೇಳಿದರು.
ಸುಪ್ರೀಂ ಕೋರ್ಟ್‌ನ ಶುಕ್ರವಾರದ ಆದೇಶದಿಂದ ಮೈತ್ರಿ ಸರ್ಕಾರ ನಿರಾಳವಾಗಿದೆ ಎನ್ನಲಾಗುತ್ತಿದೆ. ಸುಪ್ರೀಂ ಕೋರ್ಟ್‌ಗೆ ಯಾರು ಬೇಕಾದರೂ ಹೋಗಬಹುದು. ಹಾಗಿದ್ದರೂ ಸ್ಪೀಕರ್ ರಾಜೀನಾಮೆ ನೀಡಿದ ಶಾಸಕರನ್ನು ಸುಪ್ರೀಂ ಕೋರ್ಟ್‌ಗೆ ಯಾಕೆ ಹೋಗಿದ್ದೀರಿ ಎಂದು ಕೇಳಿದ್ದಾರಂತೆ. ಇದು ಒಂದು ರೀತಿಯಲ್ಲಿ ಧಮ್ಕಿ ಹಾಕಿದ್ದಾರೆ ಎನಿಸುತ್ತದೆ ಎಂದು ತಿಳಿಸಿದರು.
ಬಿಜೆಪಿ ಶಾಸಕರನ್ನು ಸಂಪರ್ಕಿಸುತ್ತಿದ್ದಾರೆ!: ಮುಖ್ಯಮಂತ್ರಿಗಳು ವಿಶ್ವಾಸ ಮತ ಯಾಚನೆಗೆ ಮುಂದಾದರೆ ನಾವೂ ಸಿದ್ಧರಿದ್ದೇವೆ. ಕಳೆದ ಒಂದು ತಿಂಗಳಿನಿಂದ ಮೈತ್ರಿ ಪಕ್ಷಗಳ ಕೆಲವರು ನಮ್ಮ ಶಾಸಕರನ್ನು ಸಂಪರ್ಕ ಮಾಡುತ್ತಿದ್ದಾರೆ. ವಿಶ್ವಾಸ ಮತ ಯಾಚನೆ ವೇಳೆಗೆ ನಮ್ಮ ಎಲ್ಲ ಶಾಸಕರು ಸರಿಯಾದ ಸಮಯಕ್ಕೆ ಹಾಜರಿರಬೇಕು. ಸಮಯ ಪಾಲನೆಗಾಗಿ ಒಟ್ಟಿಗೆ ಇರಲು ರೆಸಾರ್ಟ್‌ಗೆ ಹೋಗುತ್ತಿದ್ದೇವೆ. ಪಕ್ಷೇತರ ಶಾಸಕರ ಬೆಂಬಲವೂ ನಮಗಿದೆ. ನಾನು ಮುಂಬೈಗೆ ಹೋಗಿದ್ದು ಪಕ್ಷೇತರರ ಭೇಟಿಗೆ ಹೊರತು ಬೇರೆ ಯಾರನ್ನೂ ಭೇಟಿಯಾಗಲು ಹೋಗಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಹೇಳಿದರು.
ದಿಢೀರ್ ನಿರ್ಧಾರ: ಪಕ್ಷದ ಶಾಸಕರನ್ನು ರೆಸಾರ್ಟ್‌ನಲ್ಲಿರಿಸುವ ಉದ್ದೇಶವಿರಲಿಲ್ಲ. ಮುಖ್ಯಮಂತ್ರಿಗಳ ಅನಿರೀಕ್ಷಿತ ನಡೆಯಿಂದಾಗಿ ಪಕ್ಷದ ಶಾಸಕರನ್ನೆಲ್ಲಾ ಒಟ್ಟಿಗೆ ಇರಿಸಿ ಒಗ್ಗಟ್ಟು ಕಾಯ್ದುಕೊಳ್ಳಲು ನಿರ್ಧರಿಸಲಾಗಿದೆ. 75ಕ್ಕೂ ಹೆಚ್ಚು ಶಾಸಕರು ಬಸ್‌ನಲ್ಲಿ ಬಂದಿದ್ದಾರೆ. ಹಿರಿಯ ನಾಯಕರನ್ನು ಹೊರತುಪಡಿಸಿ ಉಳಿದ ಶಾಸಕರು ರೆಸಾರ್ಟ್‌ನಲ್ಲಿ ಇರಲಿದ್ದಾರೆ ಎಂದು ರಾಜ್ಯ ಬಿಜೆಪಿ ಪದಾಧಿಕಾರಿಯೊಬ್ಬರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.