ಮಳೆಗೆ 4 ಲಕ್ಷ ಜನ ಸಂತ್ರಸ್ತ

ಅಸ್ಸಾಂನಲ್ಲಿ ಅಪಾಯ ಮಟ್ಟ ಮೀರಿ ಹರಿಯುತ್ತಿರುವ ನದಿಗಳು

Team Udayavani, Jul 13, 2019, 6:00 AM IST

f-29

ಅಸ್ಸಾಂನಲ್ಲಿ ಧಾರಾಕಾರ ಮಳೆಯಾದ್ದರಿಂದ ತಾತ್ಕಾಲಿಕ ತೆಪ್ಪದಲ್ಲಿ ನದಿ ದಾಟುತ್ತಿರುವ ತಾಯಿ-ಮಗು

ದಿಸ್‌ಪುರ: ಕಳೆದ ಕೆಲವು ದಿನಗಳಿಂದ ಎಡೆಬಿಡದೇ ಸುರಿಯುತ್ತಿರುವ ಮಳೆಗೆ ಅಸ್ಸಾಂ ತತ್ತರಿಸಿದೆ. ಸುಮಾರು 17 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, 4.23 ಲಕ್ಷ ಜನರಿಗೆ ತೊಂದರೆಯಾಗಿದೆ. ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮಳೆಯಿಂದಾಗಿ ಲುಂಬ್ಡಿಂಗ್‌-ಬದರ್‌ಪುರ ರೈಲುಗಳನ್ನು ಸ್ಥಗಿತಗೊಳಿಸಲಾಗಿದೆ. ಮಳೆಯಿಂದಾಗಿ ಮೂವರು ಸಾವನ್ನಪ್ಪಿದ್ದಾರೆ. ಬುಧವಾರ ದವರೆಗೆ ಸಾಧಾರಣ ಗತಿಯಲ್ಲಿದ್ದ ಮಳೆ ಗುರುವಾರ ದಿಂದ ತೀವ್ರಗೊಂಡಿದೆ.

ಬರ್ಪೇಟಾ ಜಿಲ್ಲೆ ಯೊಂದರಲ್ಲೇ 85 ಸಾವಿರ ಜನರು ಪ್ರವಾಹ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಇಡೀ ರಾಜ್ಯದಲ್ಲೇ ಬರ್ಪೆಟಾ ಜಿಲ್ಲೆ ವರುಣನ ರುದ್ರನರ್ತನವನ್ನು ಕಂಡಿದೆ. ಬಾಧಿತ ಜಿಲ್ಲೆಗಳಲ್ಲಿ ಸಾವಿರಾರು ನಿರಾಶ್ರಿತ ಶಿಬಿರಗಳನ್ನು ಸ್ಥಾಪಿಸಲಾಗಿದೆ. ಜನರ ಜೊತೆಗೆ ಜಾನು ವಾರುಗಳನ್ನೂ ನಿರಾಶ್ರಿತ ಶಿಬಿರ ಗಳಲ್ಲಿ ರಕ್ಷಿಸಲಾಗುತ್ತಿದೆ. ರಾಜ್ಯ ದಲ್ಲಿ ಹರಿಯುವ ಪ್ರಮುಖ ನದಿ ಬ್ರಹ್ಮಪುತ್ರಾ, ಧನಸಿರಿ, ಜಿಯಾ ಭರಾಲಿ, ಪುಥಿಮರಿ ಸೇರಿದಂತೆ ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಸಿಎಂ ಅವಲೋಕನ: ಪರಿಸ್ಥಿತಿಯನ್ನು ಸಿಎಂ ಸರ್ವಾನಂದ ಸೋನೋವಾಲ್ ಅವಲೋಕನ ನಡೆಸುತ್ತಿದ್ದು, ಬಾಧಿತ ಜಿಲ್ಲೆಗಳ ಅಧಿಕಾರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್‌ ಮೂಲಕ ಮಾತು ಕತೆ ನಡೆಸಿದ್ದಾರೆ. ನಿರಾಶ್ರಿತ ಶಿಬಿರಗಳ ಸ್ಥಾಪನೆ, ನಿರಾಶ್ರಿತರಿಗೆ ಆಹಾರ ಹಾಗೂ ಮೂಲಸೌಕರ್ಯ ಒದಗಿಸುವ ಕುರಿತು ಸಿಎಂ ಮೇಲ್ವಿಚಾರಣೆ ನಡೆಸಿದ್ದಾರೆ. ಇದರೊಂದಿಗೆ ಎಲ್ಲ ಜಿಲ್ಲೆ ಅಧಿಕಾರಿಗಳೂ ಪ್ರವಾಹ ಪರಿಸ್ಥಿತಿ ಎದುರಿಸಲು ಸಿದ್ಧವಿರಬೇಕು ಎಂದು ಸೂಚಿಸಿದ್ದಾರೆ. ಇನ್ನೊಂದೆಡೆ ಆರೋಗ್ಯ ಅಧಿಕಾರಿಗಳಿಗೂ ಸೂಚನೆ ನೀಡಿರುವ ಸಿಎಂ, ಮಳೆ ಪ್ರಮಾಣ ಇಳಿಯುತ್ತಿದ್ದಂತೆ ಹರಡ ಬಹುದಾದ ರೋಗ ರುಜಿನಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.

ಕಾಜಿರಂಗಾ ಮುಳುಗಡೆ: ಅಸ್ಸಾಂನಲ್ಲಿರುವ ಜನಪ್ರಿಯ ಕಾಜಿರಂಗಾ ರಾಷ್ಟ್ರೀಯ ಉದ್ಯಾನವನಕ್ಕೂ ನೀರು ನುಗ್ಗಿದೆ. ಶೇ. 40ರಷ್ಟು ಭಾಗ ನೀರಿನಲ್ಲಿ ಮುಳುಗಿವೆ. ಎತ್ತರದ ಸ್ಥಳದಲ್ಲಿ ಪ್ರಾಣಿಗಳು ಆಸರೆ ಪಡೆದಿವೆ. ಪಾರ್ಕ್‌ನ ಗಡಿಯಲ್ಲಿರುವ ರಸ್ತೆಗಳಲ್ಲಿ ವಾಹನಗಳ ವೇಗ ಮಿತಿಗೆ ಅಧಿಕಾರಿಗಳು ಬ್ರೇಕ್‌ ಹಾಕಿದ್ದು, ಆಸರೆಗಾಗಿ ರಸ್ತೆ ದಾಟಿ ಹೊರಗೆ ಬರುವ ಪ್ರಾಣಿಗಳು ವಾಹನಕ್ಕೆ ಸಿಲುಕಿಕೊಳ್ಳದಿರುವಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.

ಮಳೆ ಮುಂದುವರಿಕೆ: ಜುಲೈ 14 ರವರೆಗೂ ಮಳೆ ಭಾರಿ ಪ್ರಮಾಣದಲ್ಲಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶದಲ್ಲಿ ಮಳೆ ತೀಕ್ಷ್ಣವಾಗಿರಲಿದೆ.

ಉತ್ತರ ಪ್ರದೇಶದಲ್ಲಿ 14 ಜನ ಸಾವು: ಉತ್ತರ ಪ್ರದೇಶದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕಳೆದ 9 ದಿನಗಳಲ್ಲಿ 14 ಜನರು ಸಾವನ್ನಪ್ಪಿದ್ದಾರೆ. ಉತ್ತರಪ್ರದೇಶದ ಪೂರ್ವಭಾಗಗಳಲ್ಲಿ ಭಾರಿ ಮಳೆಯಾಗಿದ್ದರೆ, ಇತರೆಡೆ ಮಧ್ಯಮ ಪ್ರಮಾಣದಲ್ಲಿ ಮಳೆಯಾಗಿದೆ. ಮಿಂಚು, ಗೋಡೆ ಕುಸಿತ ಹಾಗೂ ಇತರ ಪ್ರಕರಣಗಳಲ್ಲಿ ಸಾವು ಸಂಭವಿಸಿದೆ. ಹಲವು ನದಿಗಳ ನೀರಿನ ಪ್ರಮಾಣ ಏರಿಕೆಯಾಗುತ್ತಿದ್ದರೂ, ಪರಸ್ಥಿತಿ ನಿಯಂತ್ರಣದಲ್ಲಿದೆ ಎಂದು ಕೇಂದ್ರೀಯ ಜಲ ಆಯೋಗ ಹೇಳಿದೆ.

ಟಾಪ್ ನ್ಯೂಸ್

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

Hospitalised: ಚಂದ್ರಬಾಬು ನಾಯ್ಡು ಸಹೋದರನ ಆರೋಗ್ಯ ಸ್ಥಿತಿ ಗಂಭೀರ… ಆಸ್ಪತ್ರೆಗೆ ದಾಖಲು

Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hospitalised: ಚಂದ್ರಬಾಬು ನಾಯ್ಡು ಸಹೋದರನ ಆರೋಗ್ಯ ಸ್ಥಿತಿ ಗಂಭೀರ… ಆಸ್ಪತ್ರೆಗೆ ದಾಖಲು

Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

Hospitalised: ಚಂದ್ರಬಾಬು ನಾಯ್ಡು ಸಹೋದರನ ಆರೋಗ್ಯ ಸ್ಥಿತಿ ಗಂಭೀರ… ಆಸ್ಪತ್ರೆಗೆ ದಾಖಲು

Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.