ಪಿಜಿ, ಸರ್ವಿಸ್ ಅಪಾರ್ಟ್‌ಮೆಂಟ್ ನೋಂದಣಿ ಕಡ್ಡಾಯ: ಪೊಲೀಸ್ ಆಯುಕ್ತ
Team Udayavani, Jul 13, 2019, 10:26 AM IST
ಮಂಗಳೂರು: ನಗರದಲ್ಲಿ ಹಾಸ್ಟೆಲ್, ಪೇಯಿಂಗ್ ಗೆಸ್ಟ್, ಸರ್ವಿಸ್ ಅಪಾರ್ಟ್‌ಮೆಂಟ್ ನಡೆಸುವವರು ಕಡ್ಡಾಯ ವಾಗಿ ನೋಂದಣಿ ಮಾಡಿಸಿ ಕೊಳ್ಳಬೇಕು. ಇವುಗಳ ನಿವಾಸಿಗಳು ಕೂಡ ತಮ್ಮ ಗುರುತಿನ ಪೂರ್ಣ ವಿವರಗಳನ್ನು ಸಂಬಂಧಪಟ್ಟವರಿಗೆ ನೀಡಬೇಕು ಎಂಬುದಾಗಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಮಂಗಳೂರಿಗೆ ಹೊರ ಜಿಲ್ಲೆ ಮತ್ತು ದೇಶ, ವಿದೇಶಗಳಿಂದ ವಿದ್ಯಾರ್ಥಿಗಳು ಮತ್ತು ಜನರು ಬಂದು ಹಾಸ್ಟೆಲ್, ಪೇಯಿಂಗ್ ಗೆಸ್ಟ್, ಸರ್ವಿಸ್ ಅಪಾರ್ಟ್ ಮೆಂಟ್ ಮತ್ತು ಶಿಕ್ಷಣ ಸಂಸ್ಥೆಗಳ ವಸತಿಗೃಹಗಳಲ್ಲಿ ವಾಸ್ತವ್ಯವಿರುತ್ತಾರೆ. ಇತ್ತೀಚೆಗೆ ಡ್ರಗ್ಸ್ ಮಾಫಿಯಾ ಮತ್ತು ಇತರ ಕಾನೂನುಬಾಹಿರ ಚಟುವಟಿಕೆ ಗಳು ಹೆಚ್ಚುತ್ತಿವೆ. ಅವುಗಳನ್ನು ನಿಯಂತ್ರಣಕ್ಕೆ ತರಲು ಈ ಆದೇಶ ಹೊರಡಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಸಿಸಿ ಕೆಮರಾ: ಗಡುವು
ಹಾಸ್ಟೆಲ್, ಪೇಯಿಂಗ್ ಗೆಸ್ಟ್ ಗಳಲ್ಲಿ ಸಿಸಿ ಟಿವಿ ಕೆಮರಾ ಅಳವಡಿಸ ಬೇಕು. ಒಂದು ಸಿಸಿ ಕೆಮರಾವನ್ನು ಮುಖ್ಯ ಪ್ರವೇಶ ದ್ವಾರಕ್ಕೆ ರಸ್ತೆಗೆ ಮುಖ ಮಾಡಿ ಅಳವಡಿಸಬೇಕು. ಇವುಗಳ ಫೂಟೇಜ್ ಕನಿಷ್ಠ 30 ದಿನಗಳ ಅವಧಿಗೆ ವೀಕ್ಷಣೆಗೆ ಲಭ್ಯವಿರು ವಂತೆ ಡಿವಿಆರ್‌ಗಳಲ್ಲಿ ಶೇಖರವಾಗಿರಬೇಕು.
ನಿಯಮ ಅನುಸರಿಸದಿದ್ದರೆ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ಕಮಿಷನರ್ ತಿಳಿಸಿದ್ದಾರೆ.
ಆದೇಶದಲ್ಲೇನಿದೆ?
* ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಹಾಸ್ಟೆಲ್, ಪೇಯಿಂಗ್ ಗೆಸ್ಟ್, ಸರ್ವಿಸ್ ಅಪಾರ್ಟ್‌ಮೆಂಟ್ ಮತ್ತು ಶಿಕ್ಷಣ ಸಂಸ್ಥೆಗಳ ವಸತಿ ಗೃಹಗಳ ಮಾಲಕರು, ಪಾಲುದಾರರು ಮತ್ತು ಆಡಳಿತ ಮಂಡಳಿಯವರು ಕಡ್ಡಾಯವಾಗಿ ಸಂಬಂಧಿಸಿದ ಇಲಾಖೆಗಳಿಂದ ಅನುಮತಿ ಪಡೆಯಬೇಕು.
* ಹಾಸ್ಟೆಲ್, ಪೇಯಿಂಗ್ ಗೆಸ್ಟ್ ಮಾಲಕರು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗೆ ಸಲ್ಲಿಸಬೇಕು.
* ವಾಸ್ತವ್ಯವಿರುವ ವಿದ್ಯಾರ್ಥಿಗಳ ಹೆಸರು, ದೂರವಾಣಿ ಸಂಖ್ಯೆ, ಗುರುತಿನ ಚೀಟಿಯನ್ನು ಪೊಲೀಸ್ ಠಾಣೆಗೆ ನೀಡಬೇಕು.
*ವಿದೇಶದ ವಿದ್ಯಾರ್ಥಿಗಳಾಗಿದ್ದಲ್ಲಿ ಅವರು ವಾಸ್ತವ್ಯಕ್ಕೆ ಬಂದ 15 ದಿನಗಳೊಳಗೆ ಪೂರ್ಣ ಮಾಹಿತಿಯೊಂದಿಗೆ ಪಾಸ್ ಪೋರ್ಟ್, ವೀಸಾ ವಿವರಗಳನ್ನು ಠಾಣೆಗೆ ಸಲ್ಲಿಸಬೇಕು. ವಾಸ್ತವ್ಯ ತೆರವುಗೊಳಿಸದಿದ್ದರೆ ಅದರ ವಿವರವನ್ನೂ ಆಯಾ ಠಾಣಾಧಿಕಾರಿಗೆ ಸಲ್ಲಿಸಬೇಕು.
* ಹಾಸ್ಟೆಲ್, ಪೇಯಿಂಗ್ ಗೆಸ್ಟ್ ಮಾಲಕರು ಅಪರಿಚಿತರ ಪ್ರವೇಶ ನಿಯಂತ್ರಿಸಲು ಸೂಕ್ತ ವ್ಯವಸ್ಥೆಯನ್ನು ಮಾಡಬೇಕು.
* ಅಪರಾಧ ಕೃತ್ಯಗಳು, ಕಾನೂನುಬಾಹಿರ ಚಟುವಟಿಕೆಗಳು, ಅನೈತಿಕ ಚಟುವಟಿಕೆ ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್ ಹೇಳಿದ್ದೇನು?
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.