2 ವರ್ಷ ಕಳೆದರೂ ಕಾಲೇಜು ಕಟ್ಟಡ ಅಪೂರ್ಣ

60 ಲಕ್ಷ ರೂ. ಗುತ್ತಿಗೆ ಪಡೆದಿರುವ ಭೂ ಸೇನಾ ನಿಗಮ • ಶಾಲಾ ಆವರಣದಲ್ಲೇ ಪಾಠ

Team Udayavani, Jul 13, 2019, 12:41 PM IST

mandya-tdy-2…

ಭೂ ಸೇನಾ ನಿಗಮದ ನಿರ್ಲಕ್ಷತೆಯಿಂದ ಅಪೂರ್ಣಗೊಂಡಿರುವ ಮಳವಳ್ಳಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹೆಚ್ಚುವರಿ ಕೊಠಡಿ ಕಾಮಗಾರಿ.

ಮಳವಳ್ಳಿ: ಎರಡು ವರ್ಷದ ಹಿಂದೆ ಆರಂಭಗೊಂಡ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಇನ್ನೂ ಪೂರ್ಣಗೊಂಡಿಲ್ಲ. ಅಪೂರ್ಣಗೊಂಡಿರುವ ಶಾಲಾ ಕೊಠಡಿಗಳೊಳಗೆ ವಿದ್ಯಾರ್ಥಿನಿಯರು ಪಾಠ ಕಲಿಯಲಾಗದೆ ಪರದಾಡುವ ಸ್ಥಿತಿ ಸೃಷ್ಟಿಯಾಗಿದೆ.

ಕಾಲೇಜಿಗೆ ಸೂಕ್ತ ಕಾಂಪೌಂಡ್‌ ವ್ಯವಸ್ಥೆ ಇಲ್ಲದೆ ಅನೈತಿಕ ಚಟುವಟಿಕೆಯ ತಾಣವಾಗಿ ಪರಿವರ್ತನೆಯಾಗುತ್ತಿರುವುದು ಅವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ. ರಾಜ್ಯಸರ್ಕಾರ ಶಿಕ್ಷಣಕ್ಕೆ ಕ್ಷೇತ್ರಕ್ಕೆ ಕೋಟಿಗಟ್ಟಲೆ ಅನುದಾನ ನೀಡಿದರೂ ಪ್ರಯೋಜವಾಗುತ್ತಿಲ್ಲ ಎನ್ನುವುದಕ್ಕೆ ಪಟ್ಟಣದ ಸರ್ಕಾರಿ ಬಾಲಕಿಯರ ಕಾಲೇಜು ತಾಜಾ ಉದಾಹರಣೆ.

ಪಟ್ಟಣದ ಹೃದಯಭಾಗದಲ್ಲಿರುವ ಕಾಲೇಜಿನ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಸುಮಾರು 60 ಲಕ್ಷ ರೂ.ಗೂ ಹೆಚ್ಚಿನ ಕಾಮಗಾರಿಯನ್ನು ಭೂ ಸೇನಾ ನಿಗಮ ಗುತ್ತಿಗೆ ಪಡೆದಿದೆ. ಅಧಿಕಾರಿಗಳ ನಿರ್ಲಕ್ಷದಿಂದ ಕಾಮಗಾರಿ ಕುಂಟುತ್ತಾ ತೆವಳುತ್ತಾ ಸಾಗಿದೆ. ಇದರ ಪರಿಣಾಮ ವಿದ್ಯಾರ್ಥಿನಿಯರು ಕೊಠಡಿ ಕೊರತೆಯಿಂದ ಕಾಲೇಜಿನ ವರಾಂಡದಲ್ಲಿ ಶಿಕ್ಷಣ ಪಡೆಯುವಂತಾಗಿದೆ.

600ಕ್ಕೂ ಹೆಚ್ಚು ಮಕ್ಕಳು ಕಲಿಕೆ:ಈ ಕಾಲೇಜು ಪಕ್ಕದಲ್ಲೇ ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲೆ ಇದ್ದು, ಸುಮಾರು 600ಕ್ಕೆ ಹೆಚ್ಚು ಹೆಣ್ಣು ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಇದಲ್ಲದೆ ಒಂದು ಗುರುಭವನವೂ ಇದೆ. ಶಾಲಾ-ಕಾಲೇಜು ಸೂಕ್ತ ಕಾಂಪೌಂಡ್‌ ವ್ಯವಸ್ಥೆ ಇಲ್ಲ. ಗೂಡ್ಸ್‌ಅಟೋ, ರಸ್ತೆ ಬದಿ ವ್ಯಾಪಾರಿಗಳು ಮಾರಾಟ ಮಾಡುವ, ಪುಂಡ-ಪೋಕರಿಗಳ ಅನೈತಿಕ ತಾಣವಾಗಿ ರೂಪಾಂತರಗೊಳ್ಳುತ್ತಿದೆ.

ಹೆಣ್ಣು ಮಕ್ಕಳು ನಿರ್ಭಯವಾಗಿ ಆಟವಾಡಲು ತೊಂದರೆಯಾಗಿದ್ದು, ಸದಾ ಜನರು ಸಂಚರಿಸುತ್ತಿರುತ್ತಾರೆ. ಅಲ್ಲದೆ ಗುರುಭವನವನ್ನು ವಾಣಿಜ್ಯ ಉದ್ದೇಶಕ್ಕೆ ಬಾಡಿಗೆ ನೀಡಿರುವುದರಿಂದ ಅಲ್ಲಿ ಹಾಕಲಾಗುವ ವಸ್ತುಗಳ ಪ್ರದರ್ಶನಕ್ಕೆ ಜನರು ಬರುವುದರಿಂದ ಇಲ್ಲಿ ಆಟವಾಡುವ ಹೆಣ್ಣು ಮಕ್ಕಳಿಗೆ ಸಮಸ್ಯೆಯಾಗಿದೆ. ನಿರಾತಂಕವಾಗಿ ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ.

ಬಯಲು ಶೌಚಾಲಯ: ಸ್ಥಳೀಯವಾಗಿರುವ ಪುಂಡ ಪೋಕರಿಗಳು ಕಾಂಪೌಂಡ್‌ ಇಲ್ಲದ ಶಾಲಾ-ಕಾಲೇಜು ಜಾಗವನ್ನು ಬಯಲು ಶೌಚಾಲಯ ಮಾಡಿಕೊಂಡಿದ್ದಾರೆ. ಇದರಿಂದ ಅಲ್ಲಲ್ಲಿ ಗಬ್ಬು ವಾಸನೆ ಬರುತ್ತಿದ್ದು ಶಿಕ್ಷಕರು ಹಾಗೂ ವಿದ್ಯಾರ್ಥಿನಿಯರು ರೋಸಿ ಹೋಗಿದ್ದಾರೆ. ಶಾಲಾ-ಕಾಲೇಜಿನ ಶಿಕ್ಷಕ ವೃಂದ ಈ ಪ್ರದೇಶದ ಸುತ್ತ ಕಾಂಪೌಂಡ್‌ ಹಾಕಿ ಒಳಗೆ ಯಾರೂ ಒಳಗೆ ಬರದಂತೆ ಕ್ರಮ ವಹಿಸಲು ಕೋರಿ ಸಂಬಂಧಿಸಿದ ಅಧಿಕಾರಿ ಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸುತ್ತುಗೋಡೆ ಅವಶ್ಯ: ಈ ಪ್ರದೇಶದಲ್ಲಿ ಹೆಚ್ಚಾಗಿ ಹೆಣ್ಣು ಮ್ಕಕಳು ಶಿಕ್ಷಣ ಪಡೆಯು ತ್ತಿರುವುದರಿಂದ ಇವರ ಶಿಕ್ಷಣಕ್ಕೆ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ತೊಂದರೆ ಯಾಗ ದಂತೆ ತಾಲೂಕು ಆಡಳಿತ ಕ್ರಮವಹಿಸಿ ಶಾಲಾ ಪ್ರದೇಶದ ಸುತ್ತಲೂ ಸುತ್ತುಗೋಡೆ ಹಾಕಿಸಿದರೆ ಇವರಿಗೆ ಸೂಕ್ತ ಭದ್ರತೆ ನೀಡಿದಂತಾಗುತ್ತದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಿ ಹೆಣ್ಣು ಮಕ್ಕಳಿಗೆ ರಕ್ಷಣೆ ಒದಗಿಸಲು ಮುಂದಾಗುವರೋ ಎಂಬುದನ್ನು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.