ಗಣತಿ ಕಾರ್ಯ ಯಶಸ್ವಿಯಾಗಿ ನಿರ್ವಹಿಸಿ
•ಪ್ರತಿ ಹಳ್ಳಿಯಲ್ಲೂ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದು ನವೀಕರಿಸಲು ಸೂಚನೆ
Team Udayavani, Jul 13, 2019, 3:23 PM IST
ರಾಯಚೂರು: ಪಂ| ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಏಳನೇ ಆರ್ಥಿಕ ಜನಗಣತಿ ತರಬೇತುದಾರರಿಗೆ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಸಿದರು.
ರಾಯಚೂರು: ಏಳನೇ ಆರ್ಥಿಕ ಗಣತಿಯಲ್ಲಿ ಸಮಗ್ರ ಮಾಹಿತಿ ದಾಖಲಿಸುವ ಮೂಲಕ ದೇಶದ ಪ್ರಗತಿಗೆ ಸಹಕರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಏಳನೇ ಆರ್ಥಿಕ ಜನಗಣತಿ-2019ರ ತರಬೇತುದಾರರಿಗೆ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಮೊದಲ ಹಂತದ ತರಬೇತಿ ಕಾರ್ಯಾಗಾರ ಇದಾಗಿದ್ದು, ಸಿಎಸ್‌ಸಿ ತರಬೇತುದಾರರು ಚೆನ್ನಾಗಿ ತಿಳಿದುಕೊಂಡು ತಮಗೆ ವಹಿಸಿದ ಕಾರ್ಯ ಯಶಸ್ಸುಗೊಳಿಸಬೇಕು ಎಂದು ಹೇಳಿದರು.
ಪ್ರತಿ ಹಳ್ಳಿಯಲ್ಲೂ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದು ದಿನನಿತ್ಯ ನವೀಕರಿಸಬೇಕು. ಹತ್ತನೆ ತರಗತಿವರೆಗೆ ಶಿಕ್ಷಣ ಪಡೆದವರು ಹಾಗೂ ಆಂಡ್ರಾಯ್ಡ ಫೋನ್ ಹೊಂದಿರುವವರು ಗಣತಿಯಲ್ಲಿ ಕಾರ್ಯದಲ್ಲಿ ಪಾಲ್ಗೊಳ್ಳಬಹುದು ಎಂದು ಹೇಳಿದರು.
ತರಬೇತಿಯಲ್ಲಿ ಮೊದಲು ಜಿಲ್ಲಾ ಮಟ್ಟದಲ್ಲಿ ನಂತರ ತಾಲೂಕು ಮಟ್ಟದಲ್ಲಿ ಆಯೋಜಿಸಲಾಗುತ್ತದೆ. ಇದರಲ್ಲಿ ಸರಿಯಾಗಿ ಮಾಹಿತಿ ತಿಳಿದು ನಿಮ್ಮ ಗೆಳೆಯರಿಗೆ ಸಂದೇಶ ರವಾನಿಸಬೇಕು. ಸರ್ವೆ ತರಬೇತುದಾರರು ಕೆಲಸ ಕಾರ್ಯನಿರ್ವಹಿಸಿದ ಬಳಿಕ ನಿಮ್ಮ ಖಾತೆಗೆ ನೇರವಾಗಿ ಹಣ ಸಂಗ್ರಹವಾಗುತ್ತದೆ. ಏಳನೇ ಆರ್ಥಿಕ ಗಣತಿ ಜವಾಬ್ದಾರಿಯುತವಾಗಿ ನಿರ್ವಹಿಸಿದರೆ ಮುಂದಿನ ದಿನಗಳಲ್ಲಿ ಸರ್ಕಾರದ ಯೋಜನೆಗಳು ನಿಮ್ಮ ವ್ಯಾಪ್ತಿಗೆ ಬರುತ್ತವೆ. ಅದಕ್ಕಾಗಿ ಎಲ್ಲ ಸಂಖ್ಯಾ ಸಂಗ್ರಹಣಾಧಿಕಾರಿ ಹಾಗೂ ತರಬೇತುದಾರರು ಗಣತಿ ಕಾರ್ಯ ಯಶಸ್ವಿಯಾಗಿ ಕೈಗೊಂಡು ರಾಯಚೂರು ಜಿಲ್ಲೆಯನ್ನು ಪ್ರಥಮ ಸ್ಥಾನದಲ್ಲಿ ತರಲು ಪ್ರಯತ್ನಿಸಬೇಕು ಎಂದು ಹೇಳಿದರು.
ಸಹಾಯಕ ಆಯುಕ್ತೆ ಶಿಲ್ಪಾ ಶರ್ಮಾ ಮಾತನಾಡಿ, ದೇಶಾದ್ಯಂತ 7ನೇ ಆರ್ಥಿಕ ಜನಗಣತಿ ಕಾರ್ಯಾಗಾರ ನಡೆಯುತ್ತಿದ್ದು, ಇದು ದೇಶದ ಎಲ್ಲ ಸಾಮಾನ್ಯ ಜನರಿಂದ ಹಿಡಿದು ವ್ಯವಹಾರ ಮಾಡುವವರಿಗೆ ಅನ್ವಯಿಸುತ್ತದೆ. ಆದ್ದರಿಂದ ತರಬೇತಿದಾರರು ಮನೆ ಮನೆಗೆ ಭೇಟಿ ನೀಡಿ ಸೂಕ್ತ ಮಾಹಿತಿ ದತ್ತಾಂಶದಲ್ಲಿ ಸಂಗ್ರಹಿಸಿ ಮೇಲಧಿಕಾರಿಗಳಿಗೆ ಒಪ್ಪಿಸಬೇಕು ಎಂದು ಹೇಳಿದರು.
ಬಳ್ಳಾರಿಯಿಂದ ಆಗಮಿಸಿದ್ದ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿ ಚನ್ನಬಸವ ಮಾತನಾಡಿ, ಆರ್ಥಿಕ ಚಟುವಟಿಕೆಗೆ ಸಂಬಂಧಿಸಿದ ಜನಗಣತಿ ಇದಾಗಿದೆ. ಯಾವ ಯಾವ ರಾಜ್ಯಗಳು ಹಾಗೂ ಜಿಲ್ಲೆಗಳು ಆರ್ಥಿಕವಾಗಿ ಹಿಂದುಳಿದ ಪ್ರದೇಶವಾಗಿವೆ ಎಂಬುದನ್ನು ಗಣತಿಯಲ್ಲಿ ನೋಡಬಹುದು. ಕುಟುಂಬದಲ್ಲಿ ವಾಸಿಸುವ ಮನೆಗಳು. ಜನವಸತಿ ಇಲ್ಲದ ಮನೆಗಳು ಮತ್ತು ವಾಣಿಜ್ಯ ಮನೆಗಳಿರುತ್ತವೆ. ಅದಕ್ಕಾಗಿ ತರಬೇತಿಯಲ್ಲಿ ಚನ್ನಾಗಿ ಮಾಹಿತಿ ಪಡೆದು ಸರ್ವೆ ಮಾಡಬೇಕು ಎಂದು ಹೇಳಿದರು.
ಪ್ರೋಬೇಶನರಿ ಐಎಎಸ್ ಅಧಿಕಾರಿ ರಿತೇಶಕುಮಾರ, ರಾಯಚೂರು ತಾಲೂಕು ತಹಶೀಲ್ದಾರ್ ಡಾ| ಹಂಪಣ್ಣ, ಕಾರ್ಮಿಕ ನಿರೀಕ್ಷಕ ವೆಂಕಟಸ್ವಾಮಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಶ್ರೀನಿವಾಸ, ಜಿಲ್ಲಾ ಮಟ್ಟದ ಅಧಿಕಾರಿ ನಾಗರಾಜ ಸೇರಿ ತರಬೇತಿಗೆ ಆಗಮಿಸಿದ ಅಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸದಸ್ಯರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.