“ಮಲೇರಿಯಾ, ಡೆಂಗ್ಯೂ ನಿಯಂತ್ರಣಕ್ಕೆ ವ್ಯಾಪಕ ಕ್ರಮ’
ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆ
Team Udayavani, Jul 14, 2019, 5:29 AM IST
ಮಹಾನಗರ: ಮಲೇರಿಯಾ, ಡೆಂಗ್ಯೂ ಹೆಚ್ಚುತ್ತಿರುವ ಪ್ರದೇಶಗಳಿಗೆ ಮಹಾನಗರ ಪಾಲಿಕೆಯ ಎಂ.ಪಿ.ಡಬ್ಲ್ಯು. ಕಾರ್ಮಿಕರಿಂದ ನಿರಂತರ ಸಮೀಕ್ಷೆ ಹಾಗೂ ಸೊಳ್ಳೆಗಳ ಉತ್ಪತ್ತಿ ಪ್ರದೇಶಗಳನ್ನು ನಾಶಪಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ಆರ್. ಸೆಲ್ವಮಣಿ ಮಹಾನಗರ ಪಾಲಿಕೆಗೆ ನಿರ್ದೇಶನ ನೀಡಿದರು.
ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಜರಗಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎನ್.ವಿ.ಬಿ.ಸಿ.ಪಿ. ಕಾರ್ಯಕ್ರಮದಡಿಯಲ್ಲಿ ಡೆಂಗ್ಯೂ ವಿರೋಧ ಮಾಸಾಚರಣೆ ಪ್ರಯುಕ್ತ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಾಲಾ ಮತ್ತು ಅಂಗನವಾಡಿ ಕಟ್ಟಡಗಳ ಸುತ್ತಮುತ್ತ ಸ್ವತ್ಛತೆ ಯ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಗುಜರಿ ಅಂಗಡಿಗಳ ಪ್ರದೇಶದಲ್ಲಿ ಸ್ವತ್ಛತೆಯನ್ನು ಕಾಪಾಡಿಕೊಳ್ಳಬೇಕು. ಸ್ವತ್ಛತೆ ಕಾಯ್ದುಕೊಳ್ಳದವರಿಗೆ ದಂಡ ವಿಧಿಸಬೇಕು. ಅತೀ ಹೆಚ್ಚು ಮಲೇರಿಯಾ ಹಾಗೂ ಡೆಂಗ್ಯೂ ವರದಿಯಾಗಿರುವ ಪ್ರದೇಶಗಳಿಗಲ್ಲಿ ಆರೋಗ್ಯ ಇಲಾಖಾ ಅಧಿಕಾರಿಗಳು ನಿರಂತರ ಭೇಟಿ ನೀಡಿ ಅದರ ನಿಯಂತ್ರಣದ ಬಗ್ಗೆ ಕ್ರಮಕೈಗೊಳ್ಳಬೇಕು ಎಂದವರು ಸೂಚಿಸಿದರು.
ಜಿಲ್ಲಾ ಆರೋಗ್ಯಾಗಾಧಿಕಾರಿ ಡಾ| ರಾಮಕೃಷ್ಣ ರಾವ್, ಕುಟುಂಬ ಕಲ್ಯಾಣ ಅಧಿಕಾರಿ ಡಾ| ಸಿಕಂದರ್ ಪಾಷಾ, ಡಿಡಿಪಿಐ ವೈ. ಶಿವರಾಮಯ್ಯ ಹಾಗೂ ವಿವಿಧ ಇಲಾಖೆಗಳ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.