ನಮ್ಮ ನಿರ್ಧಾರ ಅಚಲ: ವಿಶ್ವನಾಥ್
Team Udayavani, Jul 14, 2019, 3:04 AM IST
ಬೆಂಗಳೂರು: ವಿಶ್ವಾಸಮತಕ್ಕೆ ಮುಂದಾಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ನಿರ್ಧಾರ ತಂತ್ರಗಾರಿಕೆಯ ಒಂದು ಭಾಗ. ಆದರೆ, ನಾವ್ಯಾರೂ ತೀರ್ಮಾನ ಬದಲಿಸುವುದಿಲ್ಲ ಎಂದು ಜೆಡಿಎಸ್ ಶಾಸಕ ಎಚ್.ವಿಶ್ವನಾಥ್ ಖಡಕ್ ಆಗಿ ನುಡಿದಿದ್ದಾರೆ.
ಮುಂಬೈನಲ್ಲಿ ಅತೃಪ್ತ ಶಾಸಕರ ಜತೆ ದೇವಾಲಯಗಳ ಭೇಟಿಯಲ್ಲಿರುವ ಅವರು, ಸಮ್ಮಿಶ್ರ ಸರ್ಕಾರ ಪತನದ ನಂತರವೇ ನಾವು ವಾಪಸ್ಸಾಗುತ್ತೇವೆ. ನಮ್ಮ ನಿರ್ಧಾರ ಅಚಲ ಎಂದು ತಿಳಿಸಿದರು.
ಹಣಕಾಸು ವಿಧೇಯಕ ಮಂಡನೆಯಾದರೂ ಸಂಖ್ಯಾಬಲ ಇಲ್ಲದ ಕಾರಣ ಬಿದ್ದು ಹೋಗುತ್ತದೆ. ಆಗ ಸರ್ಕಾರ ತನ್ನಿಂತಾನೆ ಬೀಳುತ್ತದೆ. ಹೊಸ ಸರ್ಕಾರ ಬಂದ ನಂತರ ಹಣಕಾಸು ಮಸೂದೆ ಅಂಗೀಕಾರವಾಗಲಿದೆ ಎಂದರು.
ಸರ್ಕಾರಕ್ಕೆ ಯಾವುದೇ ಸಮಸ್ಯೆ ಇಲ್ಲ: ಈ ಮಧ್ಯೆ, ದೇವನಹಳ್ಳಿಯ ರೆಸಾರ್ಟ್‌ನಲ್ಲಿ ಮಾತನಾಡಿದ ಸಚಿವ ಬಂಡೆಪ್ಪ ಕಾಶೆಂಪೂರ್, ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಎಲ್ಲವೂ ಸುಸೂತ್ರವಾಗಿದೆ. ಮುಖ್ಯಮಂತ್ರಿಯವರು ವಿಶ್ವಾಸಮತ ಕೇಳಿದ್ದಾರೆ. ನಮಗೆ ಜಯ ಲಭಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.