ಮೈತ್ರಿ ಸರ್ಕಾರ ಉರುಳಿಸೋ ಯತ್ನದಲ್ಲಿ ಪಿಎಂ ಪಾತ್ರವಿದೆ
Team Udayavani, Jul 14, 2019, 3:00 AM IST
ಹೂವಿನಹಡಗಲಿ: ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆ ಆದಾಗಿನಿಂದಲೂ ಬಿಜೆಪಿ ಒಂದಲ್ಲ ಒಂದು ನೆಪ ಮಾಡಿಕೊಂಡು ವಿನಾಕಾರಣ ಸರಕಾರ ಉರುಳಿಸುವ ಕೆಲಸ ಮಾಡುತ್ತಿದೆ. ಇದರಲ್ಲಿ ಪ್ರಧಾನಿ ಮೋದಿಯವರ ಪಾತ್ರವೂ ಇದೆ ಎಂದು ರಾಜ್ಯ ಮುಜರಾಯಿ ಸಚಿವ ಪಿ.ಟಿ. ಪರಮೇಶ್ವರ್ ನಾಯ್ಕ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಆದರೆ, ಬಿಜೆಪಿ ಅಧಿ ಕಾರದಾಹದಿಂದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಪ್ರಯೋಗ ಹೊಸದೇನಲ್ಲ.
2004, 2006ರಲ್ಲಿ ಸಮ್ಮಿಶ್ರ ಸರ್ಕಾರಗಳು ರಚನೆಯಾಗಿವೆ. ಆದರೆ, ಈ ಬಾರಿ ಮೈತ್ರಿ ಸರಕಾರವನ್ನು ಉರುಳಿಸಲೇಬೇಕೆಂದು ಮೋದಿ ಹೊರಟಿದ್ದಾರೆ. ಪ್ರಧಾನಿಯವರು ದೇಶದ ಪ್ರಗತಿಗಾಗಿ ಒಳ್ಳೆಯ ಕೆಲಸ ಮಾಡಬೇಕು. ಅದನ್ನು ಬಿಟ್ಟು ಸಮ್ಮಿಶ್ರ ಸರ್ಕಾರ ಕೆಡವಲು ಪ್ರಯತ್ನಿಸುತ್ತಿರುವುದು ಅವರಿಗೆ ಶೋಭೆ ತರುವಂತಹದ್ದಲ್ಲ ಎಂದರು.
ಬಿಜೆಪಿ ರಾಜ್ಯದಲ್ಲಿ ಕೆಟ್ಟ ರಾಜಕೀಯ ಸಂಸ್ಕೃತಿ ಹುಟ್ಟು ಹಾಕಿದೆ. ಮೈತ್ರಿ ಪಕ್ಷಗಳ ಶಾಸಕರನ್ನು ಅಡ್ಡಗಟ್ಟಿ ಖರೀದಿ ಮಾಡುವ ಮೂಲಕ ಪ್ರಜಾಪ್ರಭುತ್ವಕ್ಕೆ ಅಪಚಾರ ಎಸಗುತ್ತಿದೆ. ಬಿಜೆಪಿಯವರು ಅಧಿಕಾರದ ಆಸೆಗಾಗಿ ಭ್ರಷ್ಟಾಚಾರ ಮಾಡಿ ಆ ಮೂಲಕ ಸಂವಿಧಾನದ ಆಶಯವನ್ನು ಗಾಳಿಗೆ ತೂರುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.