ಪಾಕ್ ದುಸ್ಸಾಹಸಕ್ಕೆ ಕಠಿಣ ಪ್ರತ್ಯುತ್ತರ
ಭೂಸೇನಾ ಮುಖ್ಯಸ್ಥ ಜ.ಬಿಪಿನ್ ರಾವತ್ ಖಡಕ್ ಎಚ್ಚರಿಕೆ
Team Udayavani, Jul 14, 2019, 5:00 AM IST
ಹೊಸದಿಲ್ಲಿ: “ಪಾಕಿಸ್ಥಾನಿ ಸೇನೆ ನಡೆಸುವ ಯಾವುದೇ ದುಸ್ಸಾಹಸಕ್ಕೂ ನಾವು ಪ್ರತ್ಯುತ್ತರ ನೀಡುತ್ತೇವೆ. ಉಗ್ರವಾದಕ್ಕೆ ಸಂಬಂಧಿಸಿದ ಯಾವುದೇ ಕೃತ್ಯವನ್ನೂ ಸುಮ್ಮನೆ ಬಿಡಲ್ಲ.’ ಹೀಗೆಂದು ಪಾಕಿಸ್ಥಾನ ಮತ್ತು ಪಾಕ್ ಪ್ರೇರಿತ ಉಗ್ರಗಾಮಿಗಳಿಗೆ ಖಡಕ್ ಎಚ್ಚರಿಕೆ ನೀಡಿರುವುದು ಭೂಸೇನಾ ಮುಖ್ಯಸ್ಥ ಜ| ಬಿಪಿನ್ ರಾವತ್.
ಕಾರ್ಗಿಲ್ ಯುದ್ಧಕ್ಕೆ 20 ವರ್ಷಗಳು ಸಂದ ಹಿನ್ನೆಲೆಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಜ| ರಾವತ್ ಈ ಮಾತುಗಳನ್ನಾಡಿದ್ದಾರೆ. “ಭಾರತೀಯ ಸಶಸ್ತ್ರ ಪಡೆಗಳು ನಮ್ಮ ಗಡಿ ಪ್ರದೇಶದ ಸಮಗ್ರತೆ ಕಾಪಾಡಿಕೊಳ್ಳಲು ಬದ್ಧತೆಯಿಂದ ನಿಂತಿವೆ. ಆಗಾಗ ದುಸ್ಸಾಹಸಕ್ಕೆ ಕೈಹಾಕುವ ಪಾಕಿಸ್ಥಾನಕ್ಕೆ ಸೂಕ್ತ ಪ್ರತಿಕ್ರಿಯೆ ನೀಡಲಾಗುತ್ತದೆ. ಉರಿ ದಾಳಿ ಬಳಿಕ ನಡೆದ ಸರ್ಜಿಕಲ್ ಸ್ಟ್ರೈಕ್ ಹಾಗೂ ಬಾಲಕೋಟ್‌ನಲ್ಲಿ ನಡೆಸಲಾದ ದಾಳಿಯು ಭಯೋತ್ಪಾದನೆ ವಿರುದ್ಧದ ನಮ್ಮ ರಾಜಕೀಯ ಹಾಗೂ ಸೇನಾ ಬದ್ಧತೆಯನ್ನು ಪ್ರದರ್ಶಿಸಿದೆ’ ಎಂದು ರಾವತ್ ಹೇಳಿದ್ದಾರೆ.
ಅತಿಕ್ರಮಣ ಆಗಿಲ್ಲ: ಇದೇ ವೇಳೆ ಲಡಾಖ್‌ನ ಡೆಮ್‌ಚೋಕ್ ವಲಯದಲ್ಲಿ ಚೀನ ಸೇನೆ ಅತಿಕ್ರಮಣ ಮಾಡಿಲ್ಲ ಎಂದೂ ರಾವತ್ ಸ್ಪಷ್ಟಪಡಿಸಿದ್ದಾರೆ. ಜು. 6ರಂದು ದಲೈ ಲಾಮಾ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಕೆಲವು ಟಿಬೆಟಿಯನ್ನರು ಟಿಬೆಟಿಯನ್ ಧ್ವಜ ಹಾರಿಸಿದ ಬೆನ್ನಲ್ಲೇ, ಕಳೆದ ವಾರ ಚೀನ ಯೋಧರು ವಾಸ್ತವಿಕ ಗಡಿ ನಿಯಂತ್ರಣ ರೇಖೆ ದಾಟಿ ಬಂದಿದ್ದಾರೆ ಎಂದು ಸುದ್ದಿಯಾಗಿತ್ತು. ಈ ಹಿನ್ನೆಲೆಯಲ್ಲಿ ರಾವತ್ ಸ್ಪಷ್ಟನೆ ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.