ಲೋಕ ಅದಾಲತ್; 1793 ಕೇಸ್ ರಾಜಿ
38 ನ್ಯಾಯಪೀಠಗಳಲ್ಲಿ ನಡೆಯಿತು ಸಂಧಾನ
Team Udayavani, Jul 14, 2019, 9:28 AM IST
ಧಾರವಾಡ: ಜಿಲ್ಲಾ ನ್ಯಾಯಾಲಯದಲ್ಲಿ ರಾಜಿ ಮೂಲಕ ಪ್ರಕರಣ ಇತ್ಯರ್ಥಪಡಿಸಲಾಯಿತು.
ಧಾರವಾಡ: ಜಿಲ್ಲೆಯಲ್ಲಿ ಶನಿವಾರ ಜರುಗಿದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ 1793 ಪ್ರಕರಣಗಳಲ್ಲಿ ರಾಜಿ ಸಂಧಾನ ಮಾಡಿಸಲಾಗಿದ್ದು, ಸುಮಾರು 11,33,27,528 ರೂ. ಪರಿಹಾರ ಚೆಕ್ ವಿತರಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಈಶಪ್ಪ ಕೆ. ಭೂತೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ಕಕ್ಷಿದಾರರ ಒಪ್ಪಿಗೆ ಮೇರೆಗೆ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ ತೀರ್ಪು ಪ್ರಕಟಿಸಲು ಧಾರವಾಡದಲ್ಲಿ 14, ಹುಬ್ಬಳ್ಳಿಯಲ್ಲಿ 18 ಮತ್ತು ಕಲಘಟಗಿ 2, ಕುಂದಗೋಳ 2, ನವಲಗುಂದ 2 ಸೇರಿದಂತೆ ವಿವಿಧ ತಾಲೂಕುಗಳಲ್ಲಿರುವ ಎಲ್ಲ ನ್ಯಾಯಾಲಯಗಳಲ್ಲಿ ಒಟ್ಟು 38 ನ್ಯಾಯಪೀಠಗಳನ್ನು ಸ್ಥಾಪಿಸಲಾಗಿತ್ತು. ಅದರಂತೆ 38 ಜನ ನ್ಯಾಯಾಧಿಧೀಶರು ಕಾರ್ಯ ನಿರ್ವಹಿಸಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿದ್ದಾರೆ ಎಂದರು.
ಎಲ್ಲೆಲ್ಲಿ ಎಷ್ಟೆಷ್ಟು ಪ್ರಕರಣ ಇತ್ಯರ್ಥ?: ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ 704, ಹುಬ್ಬಳ್ಳಿ ನ್ಯಾಯಾಲಯಗಳಲ್ಲಿ 834, ನವಲಗುಂದ ನ್ಯಾಯಾಲಯಗಳಲ್ಲಿ 139, ಕಲಘಟಗಿ ನ್ಯಾಯಾಲಯಗಳಲ್ಲಿ 70 ಮತ್ತು ಕುಂದಗೊಳ ನ್ಯಾಯಾಲಯಗಳಲ್ಲಿ 46 ಪ್ರಕರಣಗಳು ರಾಜಿ ಸಂಧಾನದಲ್ಲಿ ಮುಕ್ತಾಯಗೊಂಡಿವೆ. ಈ ಪೈಕಿ ವಿವಿಧ ಬ್ಯಾಂಕ್ ವಸೂಲಾತಿಯ 213 ಪ್ರಕರಣಗಳಲ್ಲಿ 28,85,557 ರೂ., ವಿದ್ಯುತ್ ಬಾಕಿ ವಸೂಲಾತಿಯ ಆರು ಪ್ರಕರಣಗಳಲ್ಲಿ 10,700 ರೂ., ಮೋಟಾರ್ ವಾಹನ ಅಪಘಾತ ವಿಮೆಯ 142 ಪ್ರಕರಣಗಳಲ್ಲಿ 3,53,47000 ರೂ., ಚೆಕ್ ಅಮಾನ್ಯ ಕುರಿತ 558 ಪ್ರಕರಣಗಳಲ್ಲಿ 2,93,85,907 ರೂ., 418 ದಿವಾನಿ ಪ್ರಕರಣಗಳಲ್ಲಿ 1,95,94,841 ರೂ., 493 ಅಪರಾಧ ಪ್ರಕರಣಗಳಲ್ಲಿ 3,16,000 ರೂ. ಮತ್ತು ಕೌಟುಂಬಿಕ ನ್ಯಾಯಾಲಯದ 105 ಪ್ರಕರಣಗಳು ಸೇರಿದಂತೆ ಒಟ್ಟು 1793 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.