ತಗ್ಗಿದ ಮಳೆ; ದೂರವಾದ ಆತಂಕ

•ನೀರಿನ ಹರಿವು 1,03,797 ಕ್ಯೂಸೆಕ್‌•ಯಕ್ಸಂಬಾ-ದಾನವಾಡ ಸೇತುವೆ ಮುಳುಗಡೆಗೆ 3 ಅಡಿ ಮಾತ್ರ ಬಾಕಿ

Team Udayavani, Jul 14, 2019, 9:53 AM IST

bg-tdy-1..

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕೊಯ್ನಾ, ಮಹಾಬಳೇಶ್ವರ, ನವಜಾ ಮತ್ತು ರಾಧಾನಗರಿ ಪ್ರದೇಶದಲ್ಲಿ ಶನಿವಾರ ಕೊಂಚ ಮಳೆ ಪ್ರಮಾಣ ತಗ್ಗಿದೆ. ಆದರೂ ಗಡಿ ಭಾಗದ ಕೃಷ್ಣಾ ಮತ್ತು ಉಪನದಿಗಳ ನೀರಿನ ಮಟ್ಟ ಒಂದು ಅಡಿಯಷ್ಟು ಏರಿಕೆ ಕಂಡಿದೆ.

ಕಳೆದ ಹದಿನೈದು ದಿನಗಳಿಂದ ಕೊಂಕಣ ಭಾಗದಲ್ಲಿ ಸತತ ಮಳೆ ಸುರಿಯುತ್ತಿರುವುದರಿಂದ ಚಿಕ್ಕೋಡಿ ತಾಲೂಕಿನ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳ ನೀರಿನ ಮಟ್ಟದಲ್ಲಿ ಭಾರಿ ಏರಿಕೆಯಾಗಿ ಅಪಾಯ ಮಟ್ಟ ಮೀರಿ ಹರಿಯುತ್ತಿವೆ.

ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ದಿಂದ ರಾಜ್ಯಕ್ಕೆ 78,629 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ದೂಧಗಂಗಾ ಮತ್ತು ವೇದ‌ಗಂಗಾ ನದಿಯಿಂದ 25,168 ಕ್ಯೂಸೆಕ್‌ ನೀರು ಹರಿದು ಕೃಷ್ಣಾ ನದಿಗೆ ಬರುತ್ತಿದ್ದು, ಇದರಿಂದ ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ ಕೃಷ್ಣಾ ನದಿಗೆ ಒಟ್ಟು 1,03,797 ಕ್ಯೂಸೆಕ್‌ ನೀರು ಹರಿದು ಬರಲಾರಂಭಿಸಿದೆ. ಜಮಖಂಡಿ ತಾಲೂಕಿನ ಹಿಪ್ಪರಗಿ ಜಲಾಶಯದಿಂದ 93,500 ಕ್ಯೂಸೆಕ್‌ ನೀರನ್ನು ಆಲಮಟ್ಟಿ ಜಲಾಶಯಕ್ಕೆ ಹರಿ ಬಿಡಲಾಗುತ್ತಿದೆ. ಮಹಾರಾಷ್ಟ್ರದಿಂದ ಬರುವ ನೀರಿನ ಪ್ರಮಾಣದಷ್ಟೇ ಹಿಪ್ಪರಗಿ ಬ್ಯಾರೇಜ್‌ ಮೂಲಕ ಆಲಮಟ್ಟಿ ಅಣೆಕಟ್ಟಿಗೆ ಹರಿಬಿಡುವುದರಿಂದ ಚಿಕ್ಕೋಡಿ ಉಪವಿಭಾಗದಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಕಡಿಮೆ ಇದೆ ಎನ್ನುತ್ತಾರೆ ತಹಶೀಲ್ದಾರ್‌ ಡಾ.ಸಂತೋಷ ಬಿರಾದಾರ.

ಕಳೆದ 2005 ಮತ್ತು 06ರಲ್ಲಿ ಕೃಷ್ಣಾ ಮತ್ತು ಉಪನದಿಗಳಿಗೆ ಉಂಟಾದ ಭಾರಿ ಪ್ರಮಾಣದ ಪ್ರವಾಹ ಈಗ ಉಂಟಾಗುವುದಿಲ್ಲ. ಜಮಖಂಡಿ ತಾಲೂಕಿನಲ್ಲಿರುವ ಹಿಪ್ಪರಗಿ ಬ್ಯಾರೇಜ್‌ ಗೇಟ್ ಹಾಕಿರುವ ಪರಿಣಾಮ ಪ್ರವಾಹ ಉಂಟಾಗಿತ್ತು. ಈಗ ಮಹಾರಾಷ್ಟ್ರದಿಂದ ಬರುವ ನೀರಿನ ಪ್ರಮಾಣ ನೋಡಿಕೊಂಡು ಆಲಮಟ್ಟಿಗೆ ನೀರು ಹರಿಬಿಡುವುದರಿಂದ ಪ್ರವಾಹ ಸಂಭವಿಸುವುದಿಲ್ಲ. ಒಂದು ವೇಳೆ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹರಿದು ನದಿಗೆ ಬಂದರೆ ಮಾತ್ರ ಉಪವಿಭಾಗದಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಹೆಚ್ಚಿದೆ ಎನ್ನುತ್ತಾರೆ ಅಧಿಕಾರಿಗಳು.

ಜಮೀನುಗಳಿಗೆ ನುಗ್ಗಿದ ನೀರು: ಪ್ರತಿ ವರ್ಷ ಮಳೆಗಾಲದಲ್ಲಿ ಚಿಕ್ಕೋಡಿ ಉಪವಿಭಾಗದ ನದಿಗಳು ಉಕ್ಕಿ ಹರಿಯುತ್ತವೆ. ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಅತಿಯಾದ ಮಳೆ ಸುರಿಯುವುದರಿಂದ ನದಿಗಳ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ ಕಾಣುತ್ತದೆ. ಇದರಿಂದ ನದಿಗಳು ಅಪಾಯದ ಮಟ್ಟ ಮೀರಿ ಹರಿದು ರೈತರ ಜಮೀನುಗಳಿಗೆ ನೀರು ನುಗ್ಗುವುದರಿಂದ ರೈತರ ಕಬ್ಬು, ಸೋಯಾ, ಶೇಂಗಾ ಬೆಳೆಗಳು ಜಲಾವೃತವಾಗುತ್ತವೆ.

ಮತ್ತೆರಡು ಸೇತುವೆ ಮುಳುಗುವ ಸಾಧ್ಯತೆ: ಈಗಾಗಲೇ ಕಲ್ಲೋಳ-ಯಡೂರ ಸೇತುವೆ, ಮಲಿಕವಾಡ-ದತ್ತವಾಡ, ಕಾರದಗಾ-ಭೋಜ, ಬೋಜವಾಡಿ-ಕುನ್ನೂರ, ಸಿದ್ನಾಳ-ಅಕ್ಕೋಳ, ಜತ್ರಾಟ-ಭಿವಸಿ ಸೇರಿ ಆರು ಸೇತುವೆಗಳು ಜಲಾವೃತಗೊಂಡಿವೆ. ಸದಲಗಾ-ಬೋರಗಾಂವ ಸೇತುವೆ ಜಲಾವೃತವಾಗಲು ಎರಡು ಅಡಿ ಮಾತ್ರ ಬಾಕಿ ಉಳಿದುಕೊಂಡಿದೆ. ಯಕ್ಸಂಬಾ-ದಾನವಾಡ ಸೇತುವೆ ಮುಳುಗಡೆಯಾಗಲು ಮೂರು ಅಡಿ ಮಾತ್ರ ಬಾಕಿ ಇದೆ.

ಸೇತುವೆಗಳ ನೀರಿನ ಮಟ್ಟ: ಕೃಷ್ಣಾ ನದಿಯ ಅಂಕಲಿ-ಮಾಂಜರಿ ಸೇತುವೆ ಅಪಾಯ ಮಟ್ಟ 537 ಮೀಟರ್‌, ಇಂದಿನ ನೀರಿನ ಮಟ್ಟ 531.41 ಮೀಟರ್‌. ದೂಧಗಂಗಾ ನದಿಯ ಸದಲಗಾ-ಬೋರಗಾಂವ ಸೇತುವೆ ಅಪಾಯ ಮಟ್ಟ 538 ಮೀಟರ್‌, ಇಂದಿನ ನೀರಿನ ಮಟ್ಟ 535ಮೀ. ಹಿಪ್ಪರಗಿ ಬ್ಯಾರೇಜ್‌ ಅಪಾಯ ಮಟ್ಟ 524 ಮೀ, ಇಂದಿನ ನೀರಿನ ಮಟ್ಟ 521.50.

ಮಹಾರಾಷ್ಟ್ರದಲ್ಲಿ ಮಳೆ ಪ್ರಮಾಣ: ಕೊಯ್ನಾ-39 ಮಿಮೀ, ವಾರಣಾ-13 ಮಿಮೀ, ಕಾಳಮ್ಮವಾಡಿ-12 ಮಿಮೀ, ನವಜಾ-23 ಸಾಂಗ್ಲಿ-4 ಮಿಮೀ, ರಾಧಾನಗರಿ-46 ಮಿಮೀ, ಪಾಟಗಾಂವ-57 ಮಿಮೀ, ಮಹಾಬಲೇಶ್ವರ-13 ಮಿಮೀ, ಕೊಲ್ಲಾಪುರ-3 ಮಿಮೀ.

ಚಿಕ್ಕೋಡಿ ಮಳೆ ವಿವರ: ಚಿಕ್ಕೋಡಿ-1.2 ಮಿಮೀ, ನಾಗರಮುನ್ನೋಳ್ಳಿ-3.4 ಮಿಮೀ, ಸದಲಗಾ-3.3 ಮಿಮೀ, ಜೋಡಟ್ಟಿ-1.6, ನಿಪ್ಪಾಣಿ ಪಿಡಬ್ಲುಡಿ-2.6. ನಿಪ್ಪಾಣಿ ಎಆರ್‌ಎಸ್‌-2.4 ಮಿಮೀ, ಸೌಂದಲಗಾ-1.2 ಮಿಮೀ. ಮಳೆ ಆಗಿದೆ.

ಟಾಪ್ ನ್ಯೂಸ್

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.