ಅರ್ಜಿ ಹಾಕಿದವರಿಗೆಲ್ಲ ಇಲ್ಲ ಕಿಸಾನ್ ಸಮ್ಮಾನ್
•ಕುಟುಂಬಕ್ಕೊಂದೇ ಕಿಸಾನ್ ಸಮ್ಮಾನ್ ನಿಧಿ•ಜು.17ರವರೆಗೂ ಅರ್ಜಿ ಸಲ್ಲಿಸಲು ಅವಕಾಶ
Team Udayavani, Jul 14, 2019, 10:56 AM IST
ಕಿಸಾನ್ ಸಮ್ಮಾನ್ ಅರ್ಜಿ ಸಲ್ಲಿಸಲು ಸಾಲುಗಟ್ಟಿ ನಿಂತಿರುವ ರೈತರು. (ಸಾಂದರ್ಭಿಕ ಚಿತ್ರ)
ಗಂಗಾವತಿ: ದೇಶದ ರೈತರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಬಜೆಟ್‌ನಲ್ಲಿ ಪ್ರಕಟಿಸಿರುವಂತೆ ಪ್ರತಿ ತಾಲೂಕಿನಲ್ಲಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಅರ್ಜಿ ಸ್ವೀಕರಿಸಲಾಗುತ್ತಿದ್ದು, ಜು.17ರವರೆಗೂ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ರೈತರು ಅರ್ಜಿ ಸಲ್ಲಿಸುತ್ತಿದ್ದಾರೆ. ಆದರೆ ಅರ್ಜಿ ಸಲ್ಲಿಸಿದವರಿಗೆಲ್ಲ ಈ ಯೋಜನೆಯ ಫಲ ಸಿಗಲ್ಲ. ಕುಟುಂಬದಲ್ಲಿರುವ ಪತ್ನಿ, ಮಕ್ಕಳ ಹೆಸರಿನಲ್ಲಿ ಭೂಮಿ ಇದ್ದರೆ ಮುಖ್ಯಸ್ಥನಿಗೆ ಮಾತ್ರ ಯೋಜನೆ ಲಾಭ ಸಿಗಲಿದೆ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ವಾರ್ಷಿಕ 6 ಸಾವಿರ ರೂ.ಗಳನ್ನು ಮೂರು ಕಂತುಗಳಲ್ಲಿ ರೈತರ ಬ್ಯಾಂಕ್ ಖಾತೆ ಕೇಂದ್ರ ಸರಕಾರ ನೇರವಾಗಿ ಜಮಾ ಮಾಡಲಿದೆ.
ಅರ್ಜಿಗಳನ್ನು ಗ್ರಾಪಂ ಗ್ರಾಮಲೆಕ್ಕಾಧಿಕಾರಿ, ಕಂದಾಯ ನಿರೀಕ್ಷಕ ಕಚೇರಿ, ನಾಡಕಚೇರಿಗಳಲ್ಲಿ ರೈತರು ನಿಗದಿತ ಅರ್ಜಿಯೊಂದಿಗೆ ಭೂಮಿ, ಬ್ಯಾಂಕ್, ಆಧಾರ್ ಕಾರ್ಡ್ ಹಾಗೂ ಕುಟುಂಬದ ವಿವರ ಸಲ್ಲಿಸಬೇಕಿದೆ. ಈಗಾಗಲೇ ಅರ್ಜಿ ಸಲ್ಲಿಸುವ ದಿನಾಂಕವನ್ನು ಸರಕಾರ ಎರಡು ಭಾರಿ ಮುಂದೂಡಿದ್ದು ಜು. 17 ಕೊನೆಯ ಅವಕಾಶವಾಗಿದೆ. ಸಾಮಾನ್ಯವಾಗಿ ಒಂದು ಕುಟುಂಬದಲ್ಲಿ ಪತಿ, ಪತ್ನಿ ಮಕ್ಕಳ ಹೆಸರಿನಲ್ಲಿ ಭೂಮಿಯ ಪಹಣಿ ಮಾಡಿಸಲಾಗಿರುತ್ತದೆ. ಇವರೆಲ್ಲ ಒಂದೇ ಕುಟುಂಬ ಹಾಗೂ ಒಂದೇ ಮನೆಯಲ್ಲಿ ವಾಸವಾಗಿದ್ದರೆ ಅಂತಹವರು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ ಆ ಕುಟುಂಬದಲ್ಲಿ ಒಬ್ಬರನ್ನು ಯೋಜನಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇದುವರೆಗೂ ತಮ್ಮ ಹೆಸರಿನಲ್ಲಿ ಭೂಮಿ ಇದ್ದವರೆಲ್ಲರೂ ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಮೇಲಾಧಿಕಾರಿಗಳ ಮೌಖೀಕ ಆದೇಶದಂತೆ ಎಲ್ಲಾ ಅರ್ಜಿಗಳನ್ನು ಪರಿಷ್ಕರಿಸಿ ಒಂದು ಕುಟುಂಬಕ್ಕೆ ಒಂದರಂತೆ ಅರ್ಜಿಗಳನ್ನು ಕ್ರೋಢೀಕರಿಸುವ ಕಾರ್ಯವನ್ನು ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹಗಲು ರಾತ್ರಿ ಮಾಡುತ್ತಿದ್ದಾರೆ. ಅರ್ಜಿ ಸ್ವೀಕಾರಕ್ಕೂ ಮೊದಲೇ ರೈತ ಕುಟುಂಬದಲ್ಲಿ ಒಬ್ಬರು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿದ್ದರೆ ಗೊಂದಲವುಂಟಾಗುತ್ತಿರಲಿಲ್ಲ.
•ಕೆ. ನಿಂಗಜ್ಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.