327 ಪ್ರಕರಣ ಇತ್ಯರ್ಥ-6.41 ಕೋಟಿ ಪರಿಹಾರ
Team Udayavani, Jul 14, 2019, 2:39 PM IST
ಕಲಬುರಗಿ: ರಾಷ್ಟ್ರೀಯ ಮೆಗಾ ಲೋಕ ಅದಾಲತ್ ಅಂಗವಾಗಿ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ, ನ್ಯಾ| ಅಶೋಕ ಜಿ. ನಿಜಗಣ್ಣನವರ್, ನ್ಯಾ| ಶಾಮಪ್ರಸಾದರ ಏಕಸದಸ್ಯ ಪೀಠವು 327 ಪ್ರಕರಣಗಳನ್ನು ಇತ್ಯರ್ಥಪಡಿಸಿತು.
ಕಲಬುರಗಿ: ರಾಷ್ಟ್ರೀಯ ಮೆಗಾ ಲೋಕಅದಾಲತ್ ಅಂಗವಾಗಿ ನಗರದ ಹೈಕೋರ್ಟ್ ಪೀಠದಲ್ಲಿ ವಿಮಾ ಪ್ರಕರಣ, ರಸ್ತೆ ಅಪಘಾತ, ಕೌಟುಂಬಿಕ, ಸಿವಿಲ್ ಸೇರಿದಂತೆ ಇನ್ನಿತರ ಪ್ರಕರಣಗಳ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಲಯವು ರಾಜಿ ಸಂಧಾನದ ಮೂಲಕ 327 ಪ್ರಕರಣ ಇತ್ಯರ್ಥಪಡಿಸಿ 6.41 ಕೋಟಿ ರೂ. ಪರಿಹಾರ ಮೊತ್ತ ಪಾವತಿಸುವಂತೆ ಆದೇಶ ನೀಡಿದೆ.
ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ, ನ್ಯಾಯಮೂರ್ತಿ ಅಶೋಕ ಜಿ. ನಿಜಗಣ್ಣನವರ್ ಹಾಗೂ ನ್ಯಾಯಮೂರ್ತಿ ಶ್ಯಾಮ್ ಪ್ರಸಾದ್ ಅವರುಗಳ ಏಕ ಸದಸ್ಯ ಪೀಠವು ಪ್ರತ್ಯೇಕವಾಗಿ ಪ್ರಕರಣಗಳ ವಿಚಾರಣೆ ನಡೆಸಿ ತೀರ್ಪು ನೀಡಿತು.
ರಾಷ್ಟ್ರೀಯ ಲೋಕ ಅದಾಲತ್ ನಿಮಿತ್ಯ ಕಳೆದ ಜು. 1 ರಿಂದ ಪ್ರಕರಣಗಳನ್ನು ವಿಚಾರಣೆ ನಡೆಸಿದ ನ್ಯಾಯಾಧೀಶರು ಶನಿವಾರ ಅಂತಿಮ ಆದೇಶ ಪ್ರಕಟಿಸಿದರು. ಲೋಕ ಅದಾಲತ್‌ನಲ್ಲಿ ದಾಖಲಾದ ಒಟ್ಟಾರೆ 452 ಪ್ರಕರಣಗಳನ್ನು ವಿಚಾರಣೆಗೆ ಕೈಗೆತ್ತಿಕೊಂಡು 327 ಪ್ರಕರಣ ಇತ್ಯರ್ಥ ಪಡಿಸಲಾಗಿದೆ. ಇದರಲ್ಲಿ ವಾಹನ ಅಫಘಾತದ 321 ಪ್ರಕರಣಗಳಲ್ಲಿ 6,41,51,610 ರೂ. ಪರಿಹಾರ ಮೊತ್ತ ಪಾವತಿಸುವಂತೆ ಸಂಬಂಧಿಸಿದ ವಿಮಾ ಸಂಸ್ಥೆಗಳಿಗೆ ಆದೇಶ ಮಾಡಿದೆ.
ಮೂರು ಸಿವಿಲ್ ಪ್ರಕರಣಗಳು, ಒಂದು ರಿಟ್ ಪಿಟಿಷನ್ ಸೇರಿದಂತೆ ಎರಡು ವಿಚ್ಚೇದನ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿ ಸತಿ-ಪತಿಗಳನ್ನು ನ್ಯಾಯಲಯವು ಒಂದು ಮಾಡಿದೆ.
ದಾಖಲೆ ಪ್ರಮಾಣದಲ್ಲಿ ಪ್ರಕರಣಗಳ ಇತ್ಯರ್ಥ: ಅದಾಲತ್‌ನಲ್ಲಿ ದಾಖಲಾದ ಪ್ರಕರಣಗಳ ಕುರಿತು ತೀರ್ಪು ನೀಡುವ ಮುನ್ನ ವಕೀಲರು ಮತ್ತು ಕಕ್ಷಿದಾರರನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಲೋಕ ಅದಾಲತ್ ಅಂಗವಾಗಿ ಕಲಬುರಗಿ ಪೀಠದಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ಎರಡು ಪಟ್ಟು ಹೆಚ್ಚಿನ ಪ್ರಕರಣಗಳನ್ನು ದಾಖಲೆ ಪ್ರಮಾಣದಲ್ಲಿ ಇತ್ಯರ್ಥಗೊಳಿಸಲಾಗಿದೆ ಎಂದರು.
ರಾಜಿ ಸಂಧಾನ ಮೂಲಕ ಶೀಘ್ರವಾಗಿ ನ್ಯಾಯ ಒದಗಿಸುವುದೇ ಮೆಗಾ ಅದಾಲತ್ ಮುಖ್ಯ ಉದ್ದೇಶವಾಗಿದೆ. ತಾವು ಕಳೆದ ಆರೂವರೆ ವರ್ಷದಿಂದ ಈ ಪೀಠದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ವರ್ಷದಿಂದ ವರ್ಷಕ್ಕೆ ರಾಜಿ ಸಂಧಾನದ ಇತ್ಯರ್ಥಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣ ದಾಖಲಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಹೇಳಿದ ನ್ಯಾಯಮೂರ್ತಿಗಳು, ಮೆಗಾ ಅದಾಲತ್‌ಗೆ ಸಹಕಾರ ನೀಡಿದ ನ್ಯಾಯವಾದಿಗಳಿಗೆ ಮತ್ತು ಕಕ್ಷಿದಾರರಿಗೆ ಅಭಾರಿಯಾಗಿದ್ದೇನೆ ಎಂದರು.
ಉಚ್ಛ ನ್ಯಾಯಾಲಯದ ಹೆಚ್ಚುವರಿ ರಿಜಿಸ್ಟ್ರಾರ್ ಜನರಲ್ ಕೆ.ವಿ.ಅಸೋಡೆ, ನ್ಯಾಯಿಕ ರಿಜಿಸ್ಟ್ರಾರ್ ಶ್ರೀನಿವಾಸ ಸುವರ್ಣಾ, ಕಲಬುರಗಿ ಹೈಕೋರ್ಟ್ ಪೀಠದ ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಗೋಮತಿ ರಾಘವೇಂದ್ರ, ಹೈಕೋರ್ಟ್ ಘಟಕದ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಅರುಣ ಕುಮಾರ ಕಿಣ್ಣಿ, ಉಪಾಧ್ಯಕ್ಷ ಸುಧೀರಸಿಂಗ್ ವಿಜಯಪುರ, ಕಾರ್ಯದರ್ಶಿ ಬಿ.ಸಿ. ಜಾಕಾ ಹಾಗೂ ನೂರಾರು ಸಂಖ್ಯೆಯಲ್ಲಿ ನ್ಯಾಯವಾದಿಗಳು, ಕಕ್ಷಿದಾರರು, ನ್ಯೂ ಇಂಡಿಯಾ ಇನುÏರೆನ್ಸ್, ಓರಿಯಂಟಲ್ ಇನ್ಸೂರೆನ್ಸ್, ಯುನೈಟೆಡ್ ಇಂಡಿಯಾ ಇನುÏರೆನ್ಸ್, ಎನ್.ಇ.ಕೆ.ಆರ್.ಟಿ.ಸಿ. ಅಧಿಕಾರಿಗಳು, ಹೈಕೋರ್ಟ್ ಸಿಬ್ಬಂದಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.