ಭಾರೀ ಮಳೆಗೆ ನಾಗರಹೊಳೆ ಸಫಾರಿ ರದ್ದು

Team Udayavani, Jul 15, 2019, 3:00 AM IST

bhari-male

ಹುಣಸೂರು: ಕೊಡಗಿನಲ್ಲಿ ಬ್ರಹ್ಮಗಿರಿ ತಪ್ಪಲು, ಇಪುì ಸುತ್ತಮುತ್ತ ಜೊತೆಗೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಬೀಳುತ್ತಿರುವ ವ್ಯಾಪಕ ಮಳೆಯಿಂದಾಗಿ ವಿಶ್ವ ವಿಖ್ಯಾತ ನಾಗರಹೊಳೆಯ ವನ್ಯಜೀವಿ ದರ್ಶನದ ಸಫಾರಿಯನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.

ಕಳೆದೊಂದು ತಿಂಗಳಿನಿಂದ ನಾಗರಹೊಳೆ ಉದ್ಯಾನವನದಲ್ಲಿ ಸಾಕಷ್ಟು ಮಳೆ ಬೀಳುತ್ತಿದ್ದು, ಉದ್ಯಾನದೊಳಗೆ ಸಫಾರಿ ವಾಹನಗಳು ಮಣ್ಣಿನ ರಸ್ತೆಯಲ್ಲಿ ತೆರಳಲು ಸಾಧ್ಯವಾಗದ ಕಾರಣ, ಕೊಡಗಿನ ಕುಟ್ಟ ಬಳಿಯ ನಾಣಚ್ಚಿಗೇಟ್‌, ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗೇಟ್‌ ಹಾಗೂ ಎಚ್‌.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಬಳಿಯಿಂದ ಹೊರಡುತ್ತಿದ್ದ ಸಫಾರಿ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಉದ್ಯಾನದಲ್ಲಿ ಹರಿಯುವ ಲಕ್ಷ್ಮಣತೀರ್ಥ, ನಾಗರಹೊಳೆ ನದಿಗಳು ತುಂಬಿವೆ. ಅಲ್ಲದೇ ಅರಣ್ಯದೊಳಗಿನ ತೋಡುಗಳಲ್ಲಿ ಸಹ ನೀರು ಹರಿದು ಕೆರೆ ಕಟ್ಟೆ ಸೇರುತ್ತಿದೆ. ಇದರಿಂದಾಗಿ ಉದ್ಯಾನವನದೊಳಗೆ ವಾಹನಗಳು ಓಡಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಸಫಾರಿ ವಾಹನವು ನಾಗರಹೊಳೆ ವಲಯದೊಳಗಿರುವ ಸಫಾರಿ ಪ್ರದೇಶದಲ್ಲೇ ತೆರಳಬೇಕಿರುವುದರಿಂದ ಮೂರು ಕಡೆಗಳಿಂದಲೂ ಸಫಾರಿ ರದ್ದುಗೊಳಿಸಲಾಗಿದೆ. ಹುಲಿ ಸಂರಕ್ಷಣೆಯಲ್ಲಿ ವಿಶ್ವದಲ್ಲೇ ವಿಖ್ಯಾತವಾಗಿರುವ ನಾಗರಹೊಳೆ ಉದ್ಯಾನದಲ್ಲಿ ಸಫಾರಿ ಮೂಲಕ ವನ್ಯಜೀವಿಗಳನ್ನು ಕಣ್ತುಂಬಿಕೊಳ್ಳಲು ದೇಶ, ವಿದೇಶಗಳ ವನ್ಯಜೀವಿ ಪ್ರೇಮಿಗಳು ಇಲ್ಲಿಗೆ ಆಗಮಿಸುತ್ತಾರೆ.

ಆದರೆ, ಮಳೆ ಇವರ ವನ್ಯಪ್ರೇಮಕ್ಕೆ ಅಡ್ಡಿಯಾಗಿದ್ದು, ಹಲವು ಮಂದಿ ವೀರನಹೊಸಹಳ್ಳಿ ಗೇಟ್‌ನಿಂದ ನಾಣಚ್ಚಿ ಗೇಟ್‌, ಬಾಳೆಲೆವರೆಗಿನ ಮುಖ್ಯರಸ್ತೆಯಲ್ಲೇ ತೆರಳಿ ರಸ್ತೆ ಆಜುಬಾಜಿನ ಮುಖ್ಯರಸ್ತೆಯಲ್ಲೇ ಸಿಗುವ ಪ್ರಾಣಿಗಳನ್ನು ನೋಡಿ ಸಂತಸ ಪಡುತ್ತಿದ್ದಾರೆ.
ಈ ನಡುವೆ ಮಳೆ ನಿಂತು ಒಣಹವೆ ಉಂಟಾದಲ್ಲಿ ಮಾತ್ರ ಸಫಾರಿಗೆ ಅನುವು ಮಾಡಿಕೊಡಲಾಗುತ್ತಿದೆ.

ನಾಗರಹೊಳೆ ಉದ್ಯಾನದ ಬಹುತೇಕ ಕಡೆ ಉತ್ತಮ ಮಳೆಯಾಗಿದ್ದು, ಅರಣ್ಯದೊಳಗೆ ಸಫಾರಿ ವಾಹನಗಳು ಓಡಾಡಲಾಗದ ಪರಿಸ್ಥಿತಿ ಇದೆ. ಮೂರೂ ಕಡೆಯೂ ತಾತ್ಕಾಲಿಕವಾಗಿ ಸಫಾರಿ ರದ್ದುಪಡಿಲಾಗಿದೆ. ಮಳೆ ಕಡಿಮೆಯಾದಲ್ಲಿ ಮಾತ್ರ ಸಫಾರಿಗೆ ಅವಕಾಶ ಕಲ್ಪಿಸಲಾಗುವುದು.
-ನಾರಾಯಣಸ್ವಾಮಿ. ನಾಗರಹೊಳೆ ಉದ್ಯಾನವನದ ನಿರ್ದೇಶಕ

ಟಾಪ್ ನ್ಯೂಸ್

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.