ನೀರಿನ ಮೂಲ ಸಂರಕ್ಷಿಸಿ
Team Udayavani, Jul 15, 2019, 3:00 AM IST
ಚಿಂತಾಮಣಿ: ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೋಟ್ಯಂತರ ರೂ. ಅನುದಾನ ಕೇಂದ್ರ ಸರ್ಕಾರ ನೀಡುತ್ತಿದ್ದು, ಬಯಲುಸೀಮೆಯಲ್ಲಿ ನೀರಿಗೆ ಹಾಹಾಕಾರವಿರುವುದರಿಂದ ಉದ್ಯೋಗ ಖಾತ್ರಿ ಯೋಜನೆಯಡಿ ನೀರಿನ ಮೂಲಗಳನ್ನು ಸಂರಕ್ಷಣೆ ಮಾಡಿ ಅಂತರ್ಜಲ ಮಟ್ಟವನ್ನು ವೃದ್ಧಿಗೊಳಿಸಿ ಎಂದು ಕೇಂದ್ರ ಸರ್ಕಾರದ ಪರಿವೀಕ್ಷಣಾ ತಂಡದ ಅಧಿಕಾರಿಗಳು ತಿಳಿಸಿದರು.
ತಾಲೂಕಿನಲ್ಲಿ ನರೇಗಾ ಯೋಜನೆ ಕೈಗೊಂಡಿರುವ ಕಾಮಗಾರಿ ವೀಕ್ಷಣೆ ಮಾಡಿ ಮಾತನಾಡಿದ ಅವರು, ಬಯಲು ಸೀಮೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಯತ್ತೇತ್ಛವಾಗಿರುವುದರಿಂದ ನೀರಿನ ಸಮಸ್ಯೆಯನ್ನು ನೀಗಿಸುವ ಸಲುವಾಗಿ ಯಾವ ಯೋಜನೆಗಳನ್ನು ಕೈಗೊಳ್ಳಬೇಕು ಎಂಬ ಉದ್ದೇಶದಿಂದ ಪರಿಶೀಲನೆಗೆ ಆಗಮಿಸಿದ್ದು, ಜಿಲ್ಲೆಯಲ್ಲಿ ಚೆಕ್ ಡ್ಯಾಂ, ಕಲ್ಯಾಣಿಗಳ ಪುನಶ್ಚೇತನ ಕಾಮಗಾರಿ, ಗೋಕುಂಟೆಗಳ ನಿರ್ಮಾಣ ಸೇರಿದಂತೆ ನೀರಿನ ಮೂಲಗಳನ್ನು ರೂಪಿಸುವ ಕಾಮಗಾರಿಗಳಿಗೆ ಒತ್ತು ನೀಡಬೇಕಾಗಿದೆ ಎಂದು ತಿಳಿಸಿದರು.
ನರೇಗಾ ಯೋಜನೆಯಡಿಯಲ್ಲಿ ನಿರ್ಮಾಣ ಮಾಡಲಾಗಿರುವ ಕಾಮಗಾರಿಗಳು ಉತ್ತಮವಾಗಿದ್ದು, ಮಳೆ ನೀರು ಸಂಗ್ರಹಿಸಿ ಅಂತರ್ಜಲ ಮಟ್ಟವನ್ನು ವೃದ್ಧಿಸುತ್ತವೆ. ಮುಂದಿನ ದಿನಗಳಲ್ಲಿ ನೀರು ಶೇಖರಣೆಯಾಗಿ ದನಕರುಗಳಿಗೆ ಕುಡಿಯುವ ನೀರಿಗೆ ಅನುಕೂಲವಾಗುವ ರೀತಿಯ ಕಾಮಗಾರಿಗಳನ್ನು ಮಾಡಬೇಕೆಂಬ ಉದ್ದೇಶದಿಂದ ವೀಕ್ಷಣೆ ಮಾಡಲಾಗಿದೆ ಎಂದರು.
ಎಲ್ಲೆಲ್ಲಿ ವೀಕ್ಷಣೆ: ಕೇಂದ್ರ ಸರ್ಕಾರದ ಪರಿವೀಕ್ಷಣಾ ತಂಡದ ಸದಸ್ಯರಾದ ಶಶಿ ರಾಜನ್ ಕುಮಾರ್, ವಿಜ್ಞಾನಿ ಯು.ಆರ್ ರಾಖೀ, ಚಿಂತಾಮಣಿ ತಾಪಂ ಇಒ ಮಂಜುನಾಥ್, ಶಿಡ್ಲಘಟ್ಟ ತಾಪಂ ಇಒ ಶಿವಕುಮಾರ್, ಮುಳಬಾಗಿಲು ತಾಪಂ ಇಒ ವೆಂಕಟಾಚಲಪತಿ, ಪಿಡಿಒಗಳಾದ ಕವಿತಾ, ಶೈಲಜಾ, ಮಂಜುನಾಥ, ಕೃಷಿ ಇಲಾಖೆಯ ಎ.ಒ ಪ್ರಸಾದ್, ಕಾಗತಿ ಕೃಷಿ ತರಬೇತಿ ಕೇಂದ್ರದ ಕೆ.ಸಿ.ಮಂಜುನಾಥ್, ಪಾಪಿರೆಡ್ಡಿ, ತೋಟಗಾರಿಕೆಯ ಗಂಗುಲಪ್ಪ, ತಾಪಂ ನರೇಗಾ ಸಿಬ್ಬಂದಿ, ಅರುಣ್, ನಾಗೇಂದ್ರ, ನಳಿನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.