ಹೈಕಮಾಂಡ್‌ ಸೂಚನೆಯಂತೆ ಬಿಜೆಪಿಗೆ ಗುರಿ ತಲುಪುವ “ಸಂತಸ’


Team Udayavani, Jul 15, 2019, 3:08 AM IST

bjp-logo

ಬೆಂಗಳೂರು: ರಾಜೀನಾಮೆ ನೀಡಿ ನಂತರ ವಾಪಸ್‌ ಪಡೆಯುವುದಾಗಿ ಹೇಳಿ ಗೊಂದಲ ಮೂಡಿಸಿದ್ದ ಎಂ.ಟಿ.ಬಿ.ನಾಗರಾಜ್‌ ಅವರು ಮುಂಬೈ ಅತೃಪ್ತರ ಗುಂಪು ಸೇರುತ್ತಿದ್ದಂತೆ ಬಿಜೆಪಿ ನಿರಾಳವಾಗಿದ್ದು, ಪಕ್ಷದ ನಾಯಕರಲ್ಲಿ ಆತ್ಮವಿಶ್ವಾಸ ಹೆಚ್ಚಾದಂತಾಗಿದೆ.

ಸ್ಪೀಕರ್‌, ಮುಖ್ಯಮಂತ್ರಿಗಳ ನಡೆ ಹಾಗೂ ಸುಪ್ರೀಂಕೋರ್ಟ್‌ ನೀಡಲಿರುವ ಆದೇಶ ನಿರ್ಣಾಯಕವೆನಿಸಿದ್ದು, ಮಂಗಳವಾರ ಹಾಗೂ ಬುಧವಾರ ಮಹತ್ವದ ಬೆಳವಣಿಗೆಗಳಾಗುವ ನಿರೀಕ್ಷೆಯಿದೆ. ವರಿಷ್ಠರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರ ಸೂಚನೆಯಂತೆಯೇ ಮುಂದುವರಿದು ಅಂತಿಮ ಗುರಿ ತಲುಪುವ ಉತ್ಸಾಹದಲ್ಲಿದೆ ರಾಜ್ಯ ಬಿಜೆಪಿ.

ಇನ್ನೂ ನಾಲ್ಕಾರು ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದ್ದು, ಸದ್ಯ ಬಿಜೆಪಿ ನಾಯಕರಲ್ಲಿ ಸಂತಸ ಮನೆ ಮಾಡಿದೆ. ಜು.6ರಂದು ಅಂದರೆ, ಸರಿಯಾಗಿ ಒಂಬತ್ತು ದಿನಗಳ ಹಿಂದೆ 12 ಮಂದಿ ರಾಜೀನಾಮೆ ನೀಡಿದಂದಿನಿಂದ ಈವರೆಗೆ ಎಲ್ಲ ಬೆಳವಣಿಗೆಗಳು ಮೈತ್ರಿ ಸರ್ಕಾರದ ಸಂಖ್ಯಾಬಲ ಇಳಿಕೆಗೆ ಕಾರಣವಾಗಿದ್ದರೆ, ಬಿಜೆಪಿ ಪಾಲಿಗೆ ಆಶಾದಾಯಕವಾಗಿದೆ.

ಸುಪ್ರೀಂಕೋರ್ಟ್‌ ಆದೇಶ, ರಾಜೀನಾಮೆ ನೀಡಿದ ಕೆಲ ಶಾಸಕರ ನಡೆ, ಮೈತ್ರಿ ಪಕ್ಷಗಳ ಮನವೊಲಿಕೆ ತಂತ್ರ, ಕೆಲ ರಾಜಕೀಯ ಪ್ರಹಸನಗಳಿಂದ ಬಿಜೆಪಿಗೆ ತಾತ್ಕಾಲಿಕ ಹಿನ್ನಡೆ ಉಂಟಾದಂತೆ ಕಂಡು ಬಂದರೂ ಅಂತಿಮವಾಗಿ ಬಿಜೆಪಿಗೆ ಪೂರಕವಾದ ವಾತಾವರಣ ಸೃಷ್ಟಿಯಾದಂತಾಗಿದೆ ಎನ್ನುತ್ತಾರೆ ಬಿಜೆಪಿ ನಾಯಕರು.

ಆತಂಕದ ಕಾರ್ಮೋಡ ಸರಿಸಿದ ಸಂಭ್ರಮ: ರಾಜೀನಾಮೆ ನೀಡಿ ಕಾಂಗ್ರೆಸ್‌ನಿಂದ ಅಂತರ ಕಾಯ್ದುಕೊಂಡಿದ್ದ ಎಂ.ಟಿ.ಬಿ.ನಾಗರಾಜ್‌ ಶನಿವಾರ ಕಾಂಗ್ರೆಸ್‌ ನಾಯಕರು ಇಡೀ ದಿನ ನಡೆಸಿದ ಮನವೊಲಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ ರಾತ್ರಿ ರಾಜೀನಾಮೆ ಹಿಂಪಡೆಯುವುದಾಗಿ ಬಹಿರಂಗವಾಗಿ ಹೇಳಿದ್ದರು. ಈ ಬೆಳವಣಿಗೆ ಮುಂಬೈನಲ್ಲಿರುವ ಅತೃಪ್ತ ಶಾಸಕರು ಮಾತ್ರವಲ್ಲದೆ ಬಿಜೆಪಿ ನಾಯಕರನ್ನೂ ವಿಚಲಿತಗೊಳಿಸಿತ್ತು. ಜತೆಗೆ ಅತೃಪ್ತ ಶಾಸಕರಲ್ಲೂ ಒಡಕು ಮೂಡುವ ಆತಂಕ ಸೃಷ್ಟಿಸಿತ್ತು.

ಆದರೆ, ರಾತ್ರೋರಾತ್ರಿ ಬಿಜೆಪಿಯ ಕೆಲ ನಾಯಕರು ಎಂ.ಟಿ.ಬಿ.ನಾಗರಾಜ್‌ ಅವರನ್ನು ಸಂಪರ್ಕಿಸಿ ಭಾನುವಾರ ಬೆಳಗ್ಗೆ ಮುಂಬೈನಲ್ಲಿ ಅತೃಪ್ತರಿರುವ ಹೋಟೆಲ್‌ಗೆ ತಲುಪಿಸುತ್ತಿದ್ದಂತೆ ಬಿಜೆಪಿ ನಿರಾಳವಾಯಿತು. ಸಂಜೆ ಹೊತ್ತಿಗೆ ಎಂ.ಟಿ.ಬಿ.ನಾಗರಾಜ್‌ ಪತ್ರಿಕಾಗೋಷ್ಠಿ ನಡೆಸಿ ಎಲ್ಲ ಅತೃಪ್ತ ಶಾಸಕರು ಒಟ್ಟಿಗೆ ಇರುವುದಾಗಿ ಪ್ರಕಟಿಸುವ ಮೂಲಕ ಗೊಂದಲಗಳಿಗೆ ತೆರೆ ಬಿತ್ತು. ಈ ಬೆಳವಣಿಗೆಯಾಗುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸೇರಿ ಇತರ ನಾಯಕರಲ್ಲೂ ಸಂತಸದ ಕಳೆ ಮೂಡಿದ್ದು ಕಂಡು ಬಂತು.

ಮೈತ್ರಿ ಪಕ್ಷಗಳ ಬಹಳಷ್ಟು ಶಾಸಕರಲ್ಲಿ ಮೈತ್ರಿ ರಚನೆ ಹಾಗೂ ನಂತರದ ಆಡಳಿತ ನಿರ್ವಹಣೆ ಬಗ್ಗೆ ಅಸಮಾಧಾನವಿತ್ತು. ಹಾಗಾಗಿ, ಈ ಅತೃಪ್ತರ ನೆರವಿನೊಂದಿಗೆ ಮೈತ್ರಿ ಸರ್ಕಾರಕ್ಕೆ ಸಂಖ್ಯಾಬಲವಿಲ್ಲದಿರುವುದನ್ನು ಸಾಬೀತುಪಡಿಸುವ ಪ್ರಯತ್ನಕ್ಕೆ ಬಿಜೆಪಿ ಈ ಹಿಂದೆ ನಾಲ್ಕೈದು ಬಾರಿ ಪ್ರಯತ್ನಿಸಿದರೂ ಫ‌ಲ ನೀಡಿರಲಿಲ್ಲ. ಆಗೆಲ್ಲಾ ಬಿಜೆಪಿಗೆ “ಆಪರೇಷನ್‌ ಕಮಲ’ದ ಕಳಂಕ ಮತ್ತೆ ಮೆತ್ತಿಕೊಂಡಿತ್ತು. ಹಾಗಾಗಿ, ಸರ್ಕಾರ ರಚನೆ ಸಂಬಂಧ ಯಾವುದೇ ಪ್ರಯತ್ನ ನಡೆದರೂ ರಾಷ್ಟ್ರಮಟ್ಟದಲ್ಲಿ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗದ ರೀತಿಯಲ್ಲಿ ಮುಂದುವರಿಯಬೇಕು ಎಂಬ ಎಚ್ಚರಿಕೆಯನ್ನು ಬಿಜೆಪಿ ಹೈಕಮಾಂಡ್‌ ರಾಜ್ಯಬಿಜೆಪಿಗೆ ಸೂಚಿಸಿತ್ತು.

ವರಿಷ್ಠರಿಗೆ ತೃಪ್ತಿ: ಅದರಂತೆಯೇ ರಾಜ್ಯದಲ್ಲಿ ಕಳೆದ ಎರಡು ವಾರಗಳಲ್ಲಿ ಮೈತ್ರಿ ಸರ್ಕಾರ ಸಂಖ್ಯಾಬಲ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾದರೂ ಅದಕ್ಕೆ ಬಿಜೆಪಿ ಕಾರಣವೆಂಬ ಅಪಖ್ಯಾತಿಯಾಗಲಿ, ಅದಕ್ಕೆ ಪುಷ್ಠಿ ನೀಡುವಂತೆ ಬಿಜೆಪಿ ನಾಯಕರು ನೇರವಾಗಿ ಪಾಲ್ಗೊಂಡಿದ್ದಾಗಲಿ ಮೇಲ್ನೋಟಕ್ಕೆ ಕಾಣಲಿಲ್ಲ. ಅಷ್ಟರ ಮಟ್ಟಿಗೆ ಬಿಜೆಪಿ ಎಲ್ಲ ಬೆಳವಣಿಗೆಗಳಿಂದ ಅಂತರ ಕಾಯ್ದುಕೊಂಡಿರುವಂತೆ ಬಿಂಬಿಸಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಇದು ವರಿಷ್ಠರಿಗೂ ಸಮಾಧಾನ ತಂದಂತಿದೆ. ಹಾಗಾಗಿ, ಮುಂದೆಯೂ ಇದೇ ರೀತಿ ಎಚ್ಚರಿಕೆಯ ಹೆಜ್ಜೆಯನ್ನಿಟ್ಟು ಮುಂದುವರಿಯುಂತೆ ವರಿಷ್ಠರು ಸೂಚನೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ಹೈಕಮಾಂಡ್‌ಗೆ ನಿರಂತರ ಮಾಹಿತಿ: ರಾಜ್ಯ ರಾಜಕೀಯ ಬೆಳವಣಿಗೆ ಬಗ್ಗೆ ನಿಯಮಿತವಾಗಿ ವರಿಷ್ಠರಿಗೆ ಮಾಹಿತಿ ರವಾನೆಯಾಗುತ್ತಿತ್ತು. ಪ್ರತಿ ಬೆಳವಣಿಗೆಗೂ ಪಕ್ಷ ನಡೆದುಕೊಂಡ ರೀತಿ ಹಾಗೂ ಮುಂದೆ ಕೈಗೊಳ್ಳಬೇಕಾದ ನಿಲುವಿನ ಬಗ್ಗೆಯೂ ಹೈಕಮಾಂಡ್‌ಗೆ ತಿಳಿಸಿ ಸಲಹೆ, ಸೂಚನೆ ಪಡೆಯಲಾಗುತ್ತಿತ್ತು.

ಇನ್ನೂ ಕೆಲವರ ರಾಜೀನಾಮೆ: ಮಹಿಳಾ ಶಾಸಕಿಯರೂ ಸೇರಿ ಇನ್ನೂ ಐದಾರು ಮಂದಿ ರಾಜೀನಾಮೆ ನೀಡುವ ಲೆಕ್ಕಾಚಾರದಲ್ಲಿದ್ದಾರೆ. ಎಂ.ಟಿ.ಬಿ.ನಾಗರಾಜ್‌, ಕೆ.ಸುಧಾಕರ್‌ ರಾಜೀನಾಮೆ ನೀಡಿದ ದಿನವೇ ಕೆಲವರು ರಾಜೀನಾಮೆ ನೀಡಬೇಕಿತ್ತು. ಆದರೆ, ಆ ದಿನ ಕಾಂಗ್ರೆಸ್‌ ನಾಯಕರು ಸುಧಾಕರ್‌ ಅವರ ಕೊರಳಪಟ್ಟಿ ಹಿಡಿದು ಎಳೆದಾಡಿ ಕೊಠಡಿಯಲ್ಲಿ ಹಿಡಿದಿಟ್ಟುಕೊಂಡ ಘಟನೆ ಹಿನ್ನೆಲೆಯಲ್ಲಿ ಸಾಧ್ಯವಾಗಿರಲಿಲ್ಲ. ಸೋಮವಾರ ಇಲ್ಲವೇ ಮಂಗಳವಾರ ಅವಕಾಶ ಸಿಕ್ಕಾಗ ಇನ್ನೂ ಕೆಲ ಅತೃಪ್ತರು ರಾಜೀನಾಮೆ ನೀಡಿದರೂ ಅಚ್ಚರಿ ಇಲ್ಲ.

ಕೆಲ ಆಯ್ಕೆ: ಮುಖ್ಯಮಂತ್ರಿಗಳು ವಿಶ್ವಾಸಮತ ಯಾಚಿಸುವುದಾದರೆ ಸೋಮವಾರವೇ ಈ ಪ್ರಕ್ರಿಯೆ ನಡೆಸುವಂತೆ ಒತ್ತಡ ಹೇರುವುದು. ಸುಪ್ರೀಂಕೋರ್ಟ್‌ ಮಂಗಳವಾರ ನೀಡುವ ಆದೇಶ ಗಮನಿಸಿ, ಮುಂದುವರಿಯುವುದು. ಸ್ಪೀಕರ್‌ ಅನಿರೀಕ್ಷಿತ ನಡೆಗೆ ಮುಂದಾದರೆ ಅವರ ವಿರುದ್ಧವೇ ಅವಿಶ್ವಾಸ ಗೊತ್ತುವಳಿ ಮಂಡಿಸುವುದು. ಈ ಸಂಬಂಧ ಈಗಾಗಲೇ ನ್ಯಾಯಾಲಯದ ಕೆಲ ತೀರ್ಪು, ನಿರ್ದೇಶನಗಳ ಪರಾಮರ್ಶನ ಕಾರ್ಯ ನಡೆದಿದೆ ಎನ್ನಲಾಗಿದೆ.

* ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.