ಕೆರೆಗೆ ನೀರು ತುಂಬಿಸುವ ಕಾರ್ಯ ಎಂದು?

•ಪರದಾಡುತ್ತಿರುವ ರೈತರ ಆತಂಕ ದೂರ ಮಾಡಲಿ•ಘಟಪ್ರಭಾ ನದಿಯಿಂದ ಕೆರೆ ತುಂಬಿಸಿ

Team Udayavani, Jul 15, 2019, 9:58 AM IST

bk-tdy-2..

ಕಲಾದಗಿ: ಶೆಲ್ಲಿಕೇರಿ ಕ್ರಾಸ್‌ ಬಳಿ ಕಳಸಕೊಪ್ಪ ಕೆರೆಗೆ ನೀರು ತುಂಬಿಸುವ ಪಂಪ್‌ಹೌಸ್‌ ಮುಂದೆ ನೀರು ತುಂಬಿಕೊಂಡಿದೆ.

ಕಲಾದಗಿ: ಕಳಸಕೊಪ್ಪ ಕೆರೆ ಸೇರಿದಂತೆ ಕಲಾದಗಿ ಹೋಬಳಿಮಟ್ಟದ ಏಳು ಕೆರೆಗಳನ್ನು ತುಂಬಿಸುವ ಕಾರ್ಯ ಕೈಗೊಳ್ಳಬೇಕಾಗಿದೆ.

ಕಲಾದಗಿ ಹೋಬಳಿ ಮಟ್ಟದಲ್ಲಿ ಮಳೆ ನಿರೀಕ್ಷೆ ಪ್ರಮಾಣದಲ್ಲಿ ಸುರಿಯದೇ ನಿರಾಸೆ ಮೂಡಿಸಿದೆ, ನೀರಿಗಾಗಿ ರೈತ ಸಮುದಾಯ ಇನ್ನೂ ಕಂಗಾಲಾಗಿದೆ. ಜನಪ್ರತಿನಿಧಿಗಳು, ಕೆಬಿಜೆಎನ್‌ಎಲ್ ಅಧಿಕಾರಿಗಳು ಕೆರೆಗೆ ನೀರು ಎಂದು ತುಂಬಿಸುತ್ತಾರೆ ಎಂದು ಕಾಯುತ್ತಿದ್ದಾರೆ.

ಹೋಬಳಿ ವ್ಯಾಪ್ತಿಯಲ್ಲಿ ಇರುವ ಹತ್ತಾರು ಕೆರೆಗಳು ಬತ್ತಿ ಬರಿದಾಗಿವೆ, ಅಂತರ್ಜಲ ಮಟ್ಟ ಕುಸಿದು ರೈತರ ಕೊಳವೆಬಾವಿಗಳು ಬತ್ತಿ ಬರಿದಾಗುತ್ತಿವೆ. ಘಟಪ್ರಭಾ ನದಿಯಿಂದ ಕಳಸಕೊಪ್ಪ ಕೆರೆ, ಗೊವಿಂದಕೊಪ್ಪ ಕೆರೆ, ತುಳಸಿಗೇರಿ ಕೆರೆ, ಗದ್ದನಕೇರಿ ಕೆರೆಗೆ, ಕೆರೂರ ಭಾಗದ ಏಳು ಕೆರೆಗಳಿಗೆ ನೀರು ತುಂಬಿಸಿ ನೀರಿಗಾಗಿ ಪರದಾಡುತ್ತಿರುವ ರೈತರ ಆತಂಕ ದೂರ ಮಾಡಬೇಕಾಗಿದೆ.

ಕಳಸಕೊಪ್ಪ ಕೆರೆಯಲ್ಲಿ ನೀರು ಆವರಿಸುವ ಕ್ಷೇತ್ರ 270 ಹೆಕ್ಟೇರ್‌ ಆಗಿದ್ದು, 667.1845 ಎಕರೆ ಪ್ರದೇಶದಲ್ಲಿ ನೀರು ನಿಲ್ಲುತ್ತದೆ. ಕೆರೆ ನೀರು ನಿಲ್ಲುವ ಎತ್ತರ 5.80 ಮೀಟರನಷ್ಟಿದೆ. ಕೆರೆಯ ಕಟ್ಟೆಯ ಎತ್ತರ 57 ಅಡಿ, ಉದ್ದ 1616 ಅಡಿ, ಮೇಲಗಲ 12 ಅಡಿ ಅಗಲ ಹೊಂದಿದೆ, ಕೆಳ ಅಗಲ 228 ಅಡಿಗಳಷ್ಟಿದೆ. 200 ಹೆಕ್ಟೇರ ಪ್ರದೇಶ ಮುಳುಗಡೆಯಾಗಿಸಿ ನೀರು ತುಂಬಿ ಹೊರಚೆಲ್ಲುವ ಕೋಡಿ 909 ಅಡಿ ಉದ್ದವಿದೆ. 0.24 ಟಿಎಂ.ಸಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದೆ.

ಘಟಪ್ರಭಾ ನದಿಯಲ್ಲಿ ದಿನದಿಂದ ದಿನಕ್ಕೆ ನೀರು ಏರಿಕೆಯಾಗುತ್ತಿದ್ದು ಒಡಲು ತುಂಬಿಕೊಂಡಿದೆ. ಮತಕ್ಷೇತ್ರದ ಜನಪ್ರತಿನಿಧಿಗಳು, ಕೃಷ್ಣಾ ಭಾಗ್ಯ ಜಲ ನಿಗಮ ಮಂಡಳಿಯ ಅಧಿಕಾರಿಗಳು ಕೆರೆಗೆ ನೀರು ತುಂಬಿಸುವ ಕಾರ್ಯಕ್ಕೆ ಮುಂದಾಗುತ್ತಿಲ್ಲ ಎಂದು ಈ ಭಾಗದ ರೈತರು ಆರೋಪಿಸುತ್ತಿದ್ದಾರೆ.

ಬಾಗಲಕೋಟೆ ತಾಲೂಕಿನ 6 ಗ್ರಾಮಗಳ 1143 ಹೆಕ್ಟೇರ್‌ ಪ್ರದೇಶವನ್ನು ನೀರಾವರಿಗೆ ಒಳಪಡಿಸುವ, ಚಿಕ್ಕಶೆಲ್ಲಿಕೇರಿ, ಹಿರೇಶೆಲ್ಲಿಕೇರಿ, ಕಗಲಗೊಂಬ, ನೀರಬೂದಿಹಾಳ, ಕಳಸಕೊಪ್ಪ, ಕೆರಕಲಮಟ್ಟಿ, ಕಲಾದಗಿಯಲ್ಲಿ ಬತ್ತಿದ ಕೊಳವೆ ಬಾವಿಗಳಿಗೆ ಮರುಜೀವ ತುಂಬುವ ಕೆರೆಗೆ ಈಗಿನಿಂದಲೇ ನೀರು ತುಂಬಿಸಲು ಆರಂಭಿಸಬೇಕಾಗಿದೆ. ಇಲ್ಲದಿದ್ದಲ್ಲಿ ಕೆರೆಗಳು ಸಂಪೂರ್ಣವಾಗಿ ತುಂಬಿಕೊಳ್ಳುವುದಿಲ್ಲ ಎನ್ನುವ ಅಭಿಪ್ರಾಯ ರೈತರದ್ದಾಗಿದೆ.

 

•ಚಂದ್ರಶೇಖರ ಆರ್‌.ಎಚ್

ಟಾಪ್ ನ್ಯೂಸ್

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.