170 ವಿದ್ಯಾರ್ಥಿಗಳಿಗೆ ಮೂರೇ ಶಿಕ್ಷಕರು


Team Udayavani, Jul 15, 2019, 10:45 AM IST

kopala-tdy-2..

ದೋಟಿಹಾಳ: ಶಾಲೆಯಲ್ಲಿ ಶಿಕ್ಷಕರೇ ಇಲ್ಲದ ಕಾರಣ ಬಾಲಕಿಯರು ಆನಿಕಲ್, ಕುಂಟಾಟ ಆಡಿದರೆ, ಬಾಲಕರು ಲಗೋರಿ, ಕ್ರಿಕೆಟ್ ಆಡಿ ಮನೆಗಳಿಗೆ ಹೋಗುವಂತ ಸ್ಥಿತಿ ಸಮೀಪದ ಮುದೇನೂರು ಪ್ರಾಥಮಿಕ ಶಾಲೆಯಲ್ಲಿ ಇದೆ.

ಹೌದು, ಸಮೀಪದ ಮುದೇನೂರ ಪ್ರಾಥಮಿಕ ಶಾಲೆ ಮೂರ್‍ನಾಲ್ಕು ವರ್ಷಗಳಿಂದ ಶಿಕ್ಷಕರ ಕೊರತೆ ಎದುರಿಸುತ್ತಿದೆ. ಇದರಿಂದಾಗಿ ಇಲ್ಲನ ಮಕಳ್ಳ ಶೈಕ್ಷಣಿಕ ಭವಿಷ್ಯಕ್ಕೆ ಮಂಕು ಕವಿದಿದೆ. ಸರ್ಕಾರ ಬಿಸಿಯೂಟ, ಕ್ಷೀರಭಾಗ್ಯ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಶಾಲೆ ಹಾಜರಾತಿಯನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸುತ್ತಿದೆಯೇ ಹೊರತು ಶಿಕ್ಷಕರನ್ನು ನೇಮಕ ಮಾಡಿಕೊಳ್ಳುತ್ತಿಲ್ಲ. ಹೀಗಾಗಿ ಅನೇಕ ಗ್ರಾಮೀಣ ಭಾಗಗಳಲ್ಲಿ ಶಿಕ್ಷಕರ ಕೊರತೆಯಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ನಮಗೆ ಬಿಸಿಯೂಟ ಬೇಡ, ಕ್ಷೀರಭಾಗ್ಯ ಬೇಡ ವಿಷಯವಾರು ಶಿಕ್ಷಕರನ್ನು ಕೊಡಿ. ಮೊದಲೇ ನಾವು ಹಳ್ಳಿಯ ವಿದ್ಯಾರ್ಥಿಗಳಾಗಿದ್ದರಿಂದ ಅಭ್ಯಾಸದಲ್ಲಿ ಹಿಂದುಳಿಯುತ್ತಿದ್ದೇವೆ. ಹೀಗಿರುವಾಗ ಶಾಲೆಯಲ್ಲಿ ವಿಷಯವಾರು ಶಿಕ್ಷಕರು ಇಲ್ಲದೇ ಅಭ್ಯಾಸಗಳು ನಡೆಯದಿದ್ದರೆ ಪರೀಕ್ಷೆಯಲ್ಲಿ ಏನು ಬರಿಯಬೇಕು. ಉತ್ತಮ ಶಿಕ್ಷಣ ಸಿಗದೇ ನಮ್ಮ ಮುಂದಿನ ಭವಿಷ್ಯಕ್ಕೆ ಹಾಳಾಗುತ್ತಿದೆ ಎಂಬ ಮಕ್ಕಳು ಅಳಲು ತೋಡಿಕೊಂಡರು. ಹೀಗಾಗಿ ಕೂಡಲೇ ವಾರದೊಳಗೆೆ ಶಿಕ್ಷಕರನ್ನು ನಿಯೋಜನೆ ಮಾಡಬೇಕು. ಇಲ್ಲದ್ದಿದರೇ ತರಗತಿ ಬಹಿಷ್ಕರಿಸಿ ಹೋರಾಟ ಮಾಡಬೇಕಾಗುತ್ತದೆ ಎಂದು ವಿದ್ಯಾರ್ಥಿಗಳು ಎಚ್ಚರಿಸಿದಾರೆ.

ಈ ಶಾಲೆಯು 1ರಿಂದ 8 ತರಗತಿವರೆಗೆ 170 ವಿದ್ಯಾರ್ಥಿಗಳಿದ್ದಾರೆ. ಸರಕಾರ ಆದೇಶದ ಪ್ರಕಾರ ಶಾಲೆಗೆ ಒಟ್ಟು 10 ಹುದ್ದೆಗಳು ಮುಂಜುರಾಗಿವೆ. ಇದರಲ್ಲಿ 7 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಕೇವಲ ಶಾಲೆಯಲ್ಲಿ 3 ಜನ ಶಿಕ್ಷಕರು 170 ವಿದ್ಯಾರ್ಥಿಗಳಿಗೆ ಬೋಧನೆ ಮಾಡುವ ಅನಿವಾರ್ಯತೆ ಇದೆ. ಮೂವರು ಶಿಕ್ಷಕರಲ್ಲಿ ಒಬ್ಬರು ದೈಹಿಕ ಶಿಕ್ಷಕರು, ಮುಖ್ಯೋಪಾ ಧ್ಯಾಯರು ಮತ್ತು ಇಂಗ್ಲಿಷ್‌ ಶಿಕ್ಷಕರಿದ್ದಾರೆ. ಈ ಶಿಕ್ಷಕರೇ 1ರಿಂದ 3ನೇ ತರಗತಿಯ ಮಕ್ಕಳು ಒಂದೇ ಕೊಠಡಿಯಲ್ಲಿದ್ದಾರೆ. ಶಿಕ್ಷಕರಿಲ್ಲದ ಕಾರಣ ಮಕ್ಕಳು ಆಟವಾಡಿ ಮನೆಗೆ ಹೋಗಬೇಕಾಗಿದೆ. ಇನ್ನೂ 4 ಮತ್ತು 5ನೇ ತರಗತಿಗಳಿಗೆ ದೈಹಿಕ ಶಿಕ್ಷಕರು ಪಾಠ ಮಾಡುತ್ತಿದ್ದಾರೆ. 6 ಹಾಗೂ 7ನೇ ತರಗತಿಗೆ ಇಂಗ್ಲಿಷ್‌ ಮುತ್ತು ಮುಖ್ಯೋಪಾಧ್ಯಾಯರು ಪಾಠ ಮಾಡುತ್ತಿದ್ದಾರೆ. ಈ ಎಲ್ಲಾ ಶಿಕ್ಷಕರು ಬೆಳಗಿನಿಂದ ಶಾಲಾ ಅವಧಿ ಮುಗಿಯು ವವರೆಗೂ ಒಂದೇ ತರಗತಿಯಲ್ಲಿ ಪಾಠ ಮಾಡಬೇಕಾದ ಪರಿಸ್ಥಿತಿ ಅನಿವಾರ್ಯ ವಾಗಿದೆ. ಇದರ ಮಧ್ಯ ಕಚೇರಿ ಕೆಲಸ ಮಾಡಬೇಕು.

ಕಾರಣ 4-5 ವರ್ಷಗಳಿಂದ ಮಕ್ಕಳಿಗೆ ಅನುಗುಣವಾಗಿ ಶಿಕ್ಷಕರ ನೇಮಕಾತಿ ಮಾಡುತ್ತಿಲ್ಲ. ಶಾಲೆಗಳಲ್ಲಿ ಶಿಕ್ಷಕರ ಕೊರತೆ ಹೆಚ್ಚಾಗುತ್ತಿದೆ. ಕೂಡಲೇ ಸರಕಾರ ಶಾಲೆಗಳಿಗೆ ಶಿಕ್ಷಕನ್ನು ನೇಮಿಸಿ, ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಲು ಅನೂಕುಲ ಮಾಡಬೇಕು. 4-5 ವರ್ಷಗಳಿಂದ ಈ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಹೀಗಾಗಿ ಕೂಡಲೇ ಅಧಿಕಾರಿಗಳು ಶಾಲೆಗೆ ಶಿಕ್ಷಕರು ನೇಮಿಸಬೇಕು. ಇಲ್ಲದಿದ್ದೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಮುದೇನೂರು ಗ್ರಾಮದ ಯುವಕರು ಎಚ್ಚರಿಕೆ ನೀಡಿದ್ದಾರೆ.

ಮುದೇನೂರ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಕೊರತೆ ಇರುವ ಮಾಹಿತಿ ಇದೆ. ಸದ‌ಲ್ಲಿ ಅತಿಥಿ ಶಿಕ್ಷಕರ ನೇಮಕಾತಿ ನಡೆಯಲ್ಲಿದೆ. ಈ ಶಾಲೆಗೆ 2-3 ಶಿಕ್ಷಕರು ಕೊಡುತ್ತೇವೆ ಹಾಗೂ ಬೇರೆ ಶಾಲೆಯಿಂದ ಈಗಾಗಲೇ ಒಬ್ಬ ಶಿಕ್ಷಕರನ್ನು ನಿಯೋಜನೆ ಮಾಡಲಾಗಿದೆ.

ಶಾಲೆಯಲ್ಲಿ ಶಿಕ್ಷಕ ಕೊರತೆ ಇದೆ. 170 ಮಕ್ಕಳಿಗೆ ಕೇವಲ ಮೂವರು ಶಿಕ್ಷಕರಿದ್ದೇವೆ. ಇಲ್ಲಿಯ ಮಕ್ಕಳು ವಿಧ್ಯಾವಂತರು. ಅದರೆ ಅವರಿಗೆ ಸರಿಯಾದ ಶಿಕ್ಷಣ ಸಿಗುತ್ತಿಲ್ಲ. ಶಾಲೆಯ ಬಿಸಿಯೂಟ, ಸಭೆ ಮತ್ತು ಇನ್ನಿತರ ಕೆಲಸದ ಜೊತೆಗೆ ಮಕ್ಕಳಿಗೆ ಪಾಠ ಮಾಡುವುದು ತೊಂದರೆಯಾಗುತ್ತಿದೆ. ಸದ್ಯ ಬಿಜಕಲ್ ಗ್ರಾಮದಿಂದ ಒಬ್ಬ ಶಿಕ್ಷಕರನ್ನು ನಿಯೋಜನೆ ಮಾಡಿದ್ದಾರೆ. ಕಳೆದ ವರ್ಷ ಮೂವರು ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿತ್ತು. ಈ ವರ್ಷವು ಮೂವರು ಅತಿಥಿ ಶಿಕ್ಷಕರನ್ನು ನೀಡುತ್ತಾರೆ.•ಪುತ್ರಪ್ಪ, ಮುಖ್ಯೋಪಾಧ್ಯಯರು ಮುದೇನೂರ.

 

•ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.