ಬಿಜೆಪಿ ಅವಿಶ್ವಾಸ ಮಂಡನೆಗೆ ಸ್ಪೀಕರ್ ನಕಾರ
Team Udayavani, Jul 16, 2019, 3:06 AM IST
ಬೆಂಗಳೂರು: ಮೈತ್ರಿ ಸರ್ಕಾರ ಅಲ್ಪ ಮತಕ್ಕೆ ಕುಸಿದಿರುವುದರಿಂದ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆಗೆ ಅವಕಾಶ ನೀಡುವಂತೆ ಬಿಜೆಪಿಯವರು ಮಾಡಿದ್ದ ಮನವಿಯನ್ನು ಸ್ಪೀಕರ್ ರಮೇಶ್ ಕುಮಾರ್ ತಿರಸ್ಕರಿಸಿದ್ದಾರೆ.
ಸೋಮವಾರ ಬೆಳಗ್ಗೆಯೇ ಜೆ.ಸಿ. ಮಾಧುಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಶಾಸಕರ ನಿಯೋಗ ಸ್ಪೀಕರ್ ರಮೇಶ್‌ಕುಮಾರ್ ಅವರನ್ನು ಭೇಟಿ ಮಾಡಿ, ರಾಜ್ಯ ಸರ್ಕಾರ ಅಲ್ಪ ಮತಕ್ಕೆ ಕುಸಿದಿದ್ದು, ಸರ್ಕಾರದ ವಿರುದ್ಧ ಸೋಮವಾರವೇ ಅವಿಶ್ವಾಸ ಮಂಡನೆಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.
ಆದರೆ, ಈಗಾಗಲೇ ಮುಖ್ಯಮಂತ್ರಿ ಕುಮಾರಸ್ವಾಮಿಯೇ ವಿಶ್ವಾಸಮತ ಯಾಚನೆಗೆ ಸಮಯ ಕೇಳಿರುವುದರಿಂದ ಅವಿಶ್ವಾಸ ಮಂಡನೆಗೆ ಅವಕಾಶ ನೀಡಲು ಬರುವುದಿಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ಬಿಜೆಪಿ ನಿಯೋಗಕ್ಕೆ ತಿಳಿಸಿದ್ದಾರೆಂದು ತಿಳಿದು ಬಂದಿದೆ.
ಆ ನಂತರ ವಿಧಾನಸಭಾಧ್ಯಕ್ಷ ರಮೇಶ್‌ಕುಮಾರ್ ನೇತೃತ್ವದಲ್ಲಿ ನಡೆದ ಕಲಾಪ ಸಲಹಾ ಸಮಿತಿಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೋರಿರುವ ವಿಶ್ವಾಸ ಮತ ಯಾಚನೆಗೆ ದಿನಾಂಕ ನಿಗದಿ ಮಾಡುವ ಕುರಿತು ಆಡಳಿತ ಹಾಗೂ ಪ್ರತಿಪಕ್ಷಗಳ ನಾಯಕರ ನಡುವೆ ವಾದ ಪ್ರತಿ ವಾದ ನಡೆದಿದೆ ಎಂದು ತಿಳಿದು ಬಂದಿದೆ.
ಬಿಜೆಪಿಯವರು ಸೋಮವಾರವೇ ಮುಖ್ಯಮಂತ್ರಿ ವಿಶ್ವಾಸಮತ ಯಾಚನೆ ಮಾಡಬೇಕೆಂದು ಪಟ್ಟು ಹಿಡಿದಿದ್ದರೆಂದು ತಿಳಿದು ಬಂದಿದೆ. ಆದರೆ, ಮುಖ್ಯಮಂತ್ರಿ ಕುಮಾರಸ್ವಾಮಿ ಬುಧವಾರ ವಿಶ್ವಾಸ ಮತಯಾಚಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.
ಸ್ಪೀಕರ್ ರಮೇಶ್ ಕುಮಾರ್ ಮಂಗಳವಾರ ರಾಜೀನಾಮೆ ನೀಡಿರುವ ರಾಜ್ಯದ ಶಾಸಕರ ಪ್ರಕರಣ ಸುಪ್ರೀಂ ಕೊರ್ಟ್‌ನಲ್ಲಿ ವಿಚಾರಣೆಗೆ ಬರುತ್ತಿರುವುದರಿಂದ, ಸುಪ್ರೀಂಕೋರ್ಟ್ ಆದೇಶ ನೋಡಿಕೊಂಡು ಮುಂದಿನ ತೀರ್ಮಾನ ತೆಗೆದುಕೊಳ್ಳುವುದು ಉತ್ತಮ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗುರುವಾರ ವಿಶ್ವಾಸಮತ ಯಾಚನೆಗೆ ಸಮಯ ನೀಡುವುದಾಗಿ ತಿಳಿಸಿದ್ದಾರೆ.
ಸ್ಪೀಕರ್ ರಮೇಶ್ ಕುಮಾರ್ ಸಲಹೆಯನ್ನೂ ಆಡಳಿತ ಹಾಗೂ ಪ್ರತಿಪಕ್ಷದ ನಾಯಕರು ಒಪ್ಪಿಕೊಂಡಿದ್ದಾರೆ. ಆದರೆ, ಬಿಜೆಪಿಯವರು ವಿಶ್ವಾಸ ಇಲ್ಲದ ಸರ್ಕಾರ ಸದನದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಆಗುವುದಿಲ್ಲ. ಹೀಗಾಗಿ ಗುರುವಾರದವರೆಗೂ ಯಾವುದೇ ಕಲಾಪದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಪ್ರತಿಪಕ್ಷ ಬಿಜೆಪಿ ನಾಯಕರ ಸಲಹೆ ಮೇರೆಗೆ ಸ್ಪೀಕರ್ ರಮೇಶ್‌ಕುಮಾರ್, ಪ್ರತಿಪಕ್ಷದ ಅನುಪಸ್ಥಿತಿಯಲ್ಲಿ ಕಲಾಪ ನಡೆಸುವುದು ಸೂಕ್ತವಲ್ಲ ಎಂದು ತೀರ್ಮಾನಿಸಿ ಸದನವನ್ನು ಗುರುವಾರಕ್ಕೆ ಮುಂದೂಡಿದ್ದಾರೆ.
ಸರ್ಕಾರ ವಿಶ್ವಾಸ ಮತ ಯಾಚನೆಗೆ ಅವಕಾಶ ಕೇಳಿದೆ. ಗುರುವಾರ ವಿಶ್ವಾಸ ಮತ ಯಾಚನೆಗೆ ಅವಕಾಶ ಕಲ್ಪಿಸಿದ್ದಾರೆ. ಸಭೆಯ ನಿರ್ಧಾರವನ್ನು ನಾವು ಒಪ್ಪಿಕೊಂಡಿದ್ದೇವೆ. ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಗಿದೆ. ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಎಂಬ ವಿಶ್ವಾಸವಿದೆ.
-ಜೆ.ಸಿ. ಮಾದುಸ್ವಾಮಿ, ಬಿಜೆಪಿ ಶಾಸಕ
ವಿಶ್ವಾಸ ಮತ ಯಾಚನೆ ಮಾಡುವವರೆಗೂ ಯಾವುದೇ ಕಾರ್ಯಕಲಾಪ ನಡೆಯಬಾರದು ಎಂದು ಮನವಿ ಮಾಡಿದ್ದೆವು. ಎರಡು ದಿನ ಸದನ ಮುಂದೂಡಿದ್ದಾರೆ. ಗುರುವಾರ ಸರ್ಕಾರದ ಹಣೆ ಬರಹ ಗೊತ್ತಾಗಲಿದೆ.
-ಬಸವರಾಜ್ ಬೊಮ್ಮಾಯಿ, ಬಿಜೆಪಿ ಶಾಸಕ
ಗುರುವಾರ ವಿಶ್ವಾಸ ಮತ ಯಾಚನೆಗೆ ನಾವು ಒಪ್ಪಿದ್ದೇವೆ. ನಮ್ಮ ಮನವಿಗೆ ಬಿಜೆಪಿ ನಾಯಕರೂ ಒಪ್ಪಿದ್ದಾರೆ. ನಮಗೆ ಸರ್ಕಾರ ಉಳಿಯುವ ನಂಬಿಕೆ ಇರುವುದರಿಂದಲೇ ವಿಶ್ವಾಸ ಮತ ಯಾಚನೆಗೆ ಅವಕಾಶ ಕೋರಿದ್ದೇವೆ.
-ಸಿದ್ದರಾಮಯ್ಯ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.