ಪ್ಲಾಸ್ಟಿಕ್‌ ಬಳಸಿದವರಿಗೆ 3.5 ಲಕ್ಷ ರೂ. ದಂಡ


Team Udayavani, Jul 16, 2019, 3:08 AM IST

plasttic

ಬೆಂಗಳೂರು: ನಗರದಲ್ಲಿ ಪರಿಣಾಮಕಾರಿ ಪ್ಲಾಸ್ಟಿಕ್‌ ನಿಷೇಧಿಸುವ ನಿಟ್ಟಿನಲ್ಲಿ ಬಿಬಿಎಂಪಿ ಏಕಕಾಲಕ್ಕೆ ವಿವಿಧೆಡೆ ಪ್ಲಾಸ್ಟಿಕ್‌ ಬಳಸುವವರ ಮೇಲೆ ದಾಳಿ ಮಾಡಿ, ಒಂದೇ ದಿನದಲ್ಲಿ 3.5 ಲಕ್ಷ ದಾಖಲೆ ಮೊತ್ತದ ದಂಡ ವಿಧಿಸಿದೆ.

ಮೇಯರ್‌ ಗಂಗಾಂಬಿಕೆ, ಉಪಮೇಯರ್‌ ಭದ್ರೇಗೌಡ, ಆಡಳಿತ ಪಕ್ಷದ ನಾಯಕ ಅಬ್ದುಲ್‌ ವಾಜೀದ್‌, ಆಡಳಿತ ವಿಭಾಗದ ವಿಶೇಷ ಆಯುಕ್ತ ಡಿ.ರಂದೀಪ್‌ ನೇತೃತ್ವದಲ್ಲಿ ಪ್ರತ್ಯೇಕ ತಂಡಗಳ ಮೂಲಕ ಯಶವಂತಪುರ ಎಪಿಎಂಸಿ ಯಾರ್ಡ್‌, ಜಯನಗರ ಮಾರುಕಟ್ಟೆ, ಶಿವಾಜಿನಗರ ರಸೆಲ್‌ ಮಾರುಕಟ್ಟೆ, ಶಾಂತಿನಗರದ ಜಾನ್ಸನ್‌ ಮಾರುಕಟ್ಟೆ ಮತ್ತು ಆಸ್ಟಿನ್‌ ಟೌನ್‌ನಲ್ಲಿರುವ ಬಿಡಿಎ ಕಾಂಪ್ಲೆಕ್ಸ್‌, ವಿಜಯನಗರ ಮಾರುಕಟ್ಟೆ ಹಾಗೂ ಬನಶಂಕರಿ ಬಿಡಿಎ ಕಾಂಪ್ಲೆಕ್ಸ್‌ಗಳಿಗೆ ಸೋಮವಾರ ಅನಿರೀಕ್ಷಿತವಾಗಿ ಭೇಟಿ ನೀಡಿ ತಪಾಸಣೆ ನಡೆಸಲಾಯಿತು.

ದಾಳಿಯಲ್ಲಿ ಪ್ಲಾಸ್ಟಿಕ್‌ ಬಳಸುವವರ ಮೇಲೆ 3.5 ಲಕ್ಷ ರೂ. ದಂಡ ವಿಧಿಸಲಾಗಿದ್ದು, 600 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ ಉತ್ಪನ್ನ ವಶಕ್ಕೆ ಪಡೆಯಲಾಗಿದ್ದು, 81 ವ್ಯಾಪಾರಿಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ.

ಮೇಯರ್‌ ನೇತೃತ್ವದ ತಂಡ ಮೊದಲಿಗೆ ಯಶವಂತಪುರ ಎಪಿಎಂಸಿ ಯಾರ್ಡ್‌ಗೆ ಭೇಟಿ ನೀಡಿ ಸಗಟು ವ್ಯಾಪಾರ ಮಳಿಗೆಗಳಲ್ಲಿ ಪ್ಲಾಸ್ಟಿಕ್‌ ಬಳಸುತ್ತಿದ್ದವರ ಮೇಲೆ ದಾಳಿ ನಡೆಸಲಾಯಿತು. ಈ ವೇಳೆ ಗಜಾನನ ಪ್ರಾವಿಜನ್‌ ಸ್ಟೋರ್‌ , ಬೃಂದಾವನಾ ಟ್ರೇಡರ್, ರಾಘವೇಂದ್ರ ಪ್ಲಾಸ್ಟಿಕ್‌ , ವರಲಕ್ಷ್ಮೀ ಟ್ರೇಡಸ್‌ ಸೇರಿದಂತೆ ಒಟ್ಟು ನಲವತ್ತು ಮಳಿಗೆಗಳ ಮೇಲೆ ದಾಳಿ ನಡೆಸಿ 150 ಕೆ.ಜಿ. ಪ್ಲಾಸ್ಟಿಕ್‌ ಜಪ್ತಿ ಮಾಡಲಾಯಿತು.

ಸುದ್ದಿಗಾರರೊಂದಿಗೆ ಮಾತನಾಡಿದ ಮೇಯರ್‌, “ಪ್ಲಾಸ್ಟಿಕ್‌ನಿಂದ ಉತ್ಪತ್ತಿಯಾಗುವ ಪೇಪರ್‌, ನ್ಪೋನ್‌, ಪ್ಲೇ ಟ್ಸ್‌, ಪಾಲಿಥೀನ್‌ ಕವರ್‌ಗಳು ಕಂಡ ಸಗಟು ವ್ಯಾಪಾರ ಮಳಿಗೆಗಳಲ್ಲಿ ಜಪ್ತಿಮಾಡುವ ಜತೆಗೆ ಇನ್ನು ಮುಂದೆ ಪ್ಲಾಸ್ಟಿಕ್‌ನಿಂದ ತಯಾರಾಗುವ ಉತ್ಪನ್ನಗಳನ್ನು ಯಾವುದೇ ಕಾರಣಕ್ಕೂ ಬಳಕೆ ಮಾಡುವಂತಿಲ್ಲ.

ಪ್ಲಾಸ್ಟಿಕ್‌ ಕವರ್‌ ಬದಲು ಬಟ್ಟೆ ಹಾಗೂ ಪೇಪರ್‌ ಬ್ಯಾಗಗಳನ್ನು ಬಳಸಬೇಕು. ನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಷೇಧ ಮಾಡುವ ಉದ್ದೇಶದಿಂದ ನಗರದೆಲ್ಲೆಡೆ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ. ಪಾಲಿಕೆ ಆರೋಗ್ಯಾಧಿಕಾರಿಗಳು ಇದೇ ರೀತಿ ಒಂದು ವಾರಗಳ ಕಾಲ ಎಲ್ಲ 198 ವಾರ್ಡ್‌ಗಳ ಪ್ರಮುಖ ಸ್ಥಳಗಳಲ್ಲಿ ದಾಳಿ ನಡೆಸಿ ಪ್ಲಾಸ್ಟಿಕ್‌ ಬಳಕೆ ಮಾಡದಂತೆ ಜಾಗೃತಿ ಮೂಡಿಸುವ ಜೊತೆಗೆ ಕಂಡುಬರುವ ಪ್ಲಾಸ್ಟಿಕ್‌ ಜಪ್ತಿ ಮಾಡಲಿದ್ದಾರೆ.

ಒಂದು ವಾರದ ಬಳಿಕವೂ ಪ್ಲಾಸ್ಟಿಕ್‌ ಬಳಕೆ ಮಾಡಿದರೆ ಪ್ಲಾಸ್ಟಿಕ್‌ ಜಪ್ತಿ ಮಾಡುವುದರ ಜೊತೆಗೆ ದಂಡ ವಿಧಿಸಲಾಗುವುದು. ದಂಡವಿಧಿಸಿದ ನಂತರವೂ ಪ್ಲಾಸ್ಟಿಕ್‌ ಬಳಕೆ ಮುಂದುವರಿದಲ್ಲಿ ಮಳಿಗೆಗಳ ಪರವಾನಗಿ ರದ್ದುಗೊಳಿಸಿ ಬೀಗ ಮುದ್ರೆ ಜಡಿಯಲಾಗುವುದು’ ಎಂದು ಎಚ್ಚರಿಕೆ ನೀಡಿದರು.

“ಸೋಮವಾರ ಒಟ್ಟು ಐದು ತಂಡವಾಗಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳವಾರದಿಂದ ವಲಯಕ್ಕೆ ಎರಡು ತಂಡಗಳಂತೆ 16 ತಂಡಗಳು ಕಾರ್ಯಾಚರಣೆ ನಡೆಸಲಿವೆ’ ಎಂದು ಪಾಲಿಕೆ ಆರೋಗ್ಯಾಧಿಕಾರಿ ಮನೋರಂಜನ್‌ ಹೆಗ್ಡೆ ಹೇಳಿದ್ದಾರೆ.

ದಾಳಿ ಮಾಹಿತಿ ನೀಡಿದ ಅಧಿಕಾರಿ ವಿರುದ್ಧ ಕ್ರಮ: ನಗರದ ವಿವಿಧೆಡೆ ಪ್ಲಾಸ್ಟಿಕ್‌ ಬಳಸುವ ವ್ಯಾಪಾರಿಗಳ ಮೇಲೆ ದಾಳಿ ಮಾಡುವ ವಿಚಾರವನ್ನು ಅತ್ಯಂತ ಗೌಪ್ಯವಾಗಿ ಇರಿಸಲಾಗಿತ್ತು. ಆದರೆ, ಬನಶಂಕರಿ ಬಿಡಿಎ ಕಾಂಪ್ಲೆಕ್ಸ್‌ನಲ್ಲಿ ವ್ಯಾಪಾರಿಗಳ ಬಳಿ ಮೇಯರ್‌ “ಪ್ಲಾಸ್ಟಿಕ್‌ ಕೈಚೀಲ ಕೊಡಿ’ ಎಂದು ಕೇಳಿದರು. ಆದರೆ, ಯಾರ ಬಳಿಯೂ ಪ್ಲಾಸ್ಟಿಕ್‌ ಚೀಲ ಇರಲಿಲ್ಲ. ಇದನ್ನು ಗಮನಿಸಿದ ಮೇಯರ್‌, ಅನಿರೀಕ್ಷಿತ ದಾಳಿಯ ಬಗ್ಗೆ ವರ್ತಕರಿಗೆ ಮಾಹಿತಿ ನೀಡಿದ ಅಧಿಕಾರಿಗಳ ವಿರುದ್ಧ ಗರಂ ಆದರು.

“ಭಾನುವಾರ ನಾನು ಇಲ್ಲಿಗೆ ಭೇಟಿ ನೀಡಿದಾಗ ಪ್ಲಾಸ್ಟಿಕ್‌ ಕವರ್‌ಗಳನ್ನು ಬಳಸಲಾಗುತ್ತಿತ್ತು. ಆದರೆ, ಇಂದು ಒಂದು ಅಂಗಡಿಯಲ್ಲಿ ಕೂಡಾ ಪ್ಲಾಸ್ಟಿಕ್‌ ಸಿಗುತ್ತಿಲ್ಲ. ಇಲ್ಲಿನ ಆರೋಗ್ಯಾಧಿಕಾರಿಗಳು ನಾವು ಬರುವ ಬಗ್ಗೆ ಮೊದಲೇ ಮಾಹಿತಿ ನೀಡಿದ್ದಾರೆ. ಹೀಗಾಗಿ, ಪ್ಲಾಸ್ಟಿಕ್‌ ಬಳಕೆ ಮಾಡುತ್ತಿಲ್ಲ. ಸಂಬಂಧಪಟ್ಟ ಆರೋಗ್ಯಾಧಿಕಾರಿಗಳ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಿ’ ಎಂದು ವಿಶೇಷ ಆಯುಕ್ತ ರಂದೀಪ್‌ ಅವರಿಗೆ ಮೇಯರ್‌ ಸೂಚನೆ ನೀಡಿದರು.

ಶುಕ್ರವಾರ ಸಭೆ: ನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಷೇಧ ಮಾಡುವ ಉದ್ದೇಶದಿಂದ ಪ್ಲಾಸ್ಟಿಕ್‌ ವಿತರಕರು, ಪ್ಯಾಕರ್ಸ್‌ ಹಾಗೂ ಸಗಟು ವ್ಯಾಪಾರಿಗಳ ಜೊತೆ ಶುಕ್ರವಾರ(ಜು.19)ರಂದು ಟೌನ್‌ ಹಾಲ್‌ನಲ್ಲಿ ಸಭೆನಡೆಸಿ, ಪ್ಲಾಸ್ಟಿಕ್‌ ಬಳಕೆ ಮಾಡದಂತೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.

ಪ್ಲಾಸ್ಟಿಕ್‌ ಬಳಕೆ ನಿಷೇಧ ಮಾಡಿರುವ ಬಗ್ಗೆ ಅಂಗಡಿ ಮಾಲೀಕರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಸೋಮವಾರ ಪೂಜ್ಯ ಮಹಾಪೌರರ ಅಧ್ಯಕ್ಷತೆಯಲ್ಲಿ ನಗರದ ಪ್ರಮುಖ ಮಾರುಕಟ್ಟೆ ಹಾಗೂ ಕಾಂಪ್ಲೆಕ್ಸ್‌ಗಳಿಗೆ ಅನಿರೀಕ್ಷಿತ ಭೇಟಿ ತಪಾಸಣೆ ನಡೆಸಲಾಯಿತು.

ಪೊಲೀಸ್‌ ಭದ್ರತೆಯಲ್ಲಿ ದಾಳಿ: ಜಯನಗರ ಮಾರುಕಟ್ಟೆಗೆ ಬಿಬಿಎಂಪಿ ಆರೋಗ್ಯ ಅಧಿಕಾರಿಗಳ ತಂಡ ಅನಿರೀಕ್ಷಿತ ದಾಳಿ ನಡೆಸಿ ವ್ಯಾಪಾರಿ ಮಳಿಗೆಗಳನ್ನು ತಪಾಸಣೆ ನಡೆಸಿದ ವೇಳೆ ನಿಷೇಧಿತ ಪ್ಲಾಸ್ಟಿಕ್‌ ಉತ್ಪನ್ನ ವಶಕ್ಕೆ ಪಡೆದ ಅಧಿಕಾರಿಗಳು ಅಂಗಡಿ ಮಾಲೀಕರಿಗೆ ದಂಡ ವಿಧಿಸಿ ನೋಟಿಸ್‌ ಜಾರಿದ್ದಕ್ಕೆ ವ್ಯಾಪಾರಿಗಳು ವಿರೋಧ ವ್ಯಕ್ತಪಡಿಸಿದರು. ಇದು ಅಧಿಕಾರಿಗಳು ಮತ್ತು ವ್ಯಾಪಾರಿಗಳ ಮಧ್ಯೆ ವಾಗ್ವಾದಕ್ಕೆ ಕಾರಣವಾಯಿತು. ಇದಾದ ನಂತರ ಪೊಲೀಸ್‌ ಭದ್ರತೆಯಲ್ಲಿ ತಪಾಸಣೆ ಮುಂದುವರಿಸಲಾಗಿದೆ.

ಪ್ಲಾಸ್ಟಿಕ್‌ ದಾಳಿ ನಡೆಸಿದ ವಿವರ
ಸ್ಥಳ ಅಂಗಡಿಗಳ ಸಂಖ್ಯೆ ನೋಟಿಸ್‌ ಜಾರಿ ಪ್ಲಾಸ್ಟಿಕ್‌ ಜಪ್ತಿ(ಕೆ.ಜಿಗಳಲ್ಲಿ) ದಂಡ(ಲಕ್ಷರೂ. ಗಳಲ್ಲಿ)
ಜಯನಗರ ಮಾರುಕಟ್ಟೆ 200 48 250 1,70,000
ಯಶವಂತಪುರ ಎಪಿಎಂಸಿ ಯಾರ್ಡ್‌ 40 20 150 75,000
ಶಿವಾಜಿನಗರ ರಸೆಲ್‌ ಮಾರುಕಟ್ಟೆ 150 06 100 25,000
ಶಾಂತಿ ನಗರ (ಜಾನ್ಸನ್‌ ಮಾರುಕಟ್ಟೆ, ಆಸ್ಟಿನ್‌ ಟೌನ್‌, ಬಿಡಿಎ ಕಾಂಪ್ಲೆಕ್ಸ್‌) 50 06 70 20,000
ವಿಜಯನಗರ ಮಾರುಕಟ್ಟೆ 20 01 20 5,000
ಬನಶಂಕರಿ ಬಿಡಿಎ ಕಾಂಪ್ಲೆಕ್ಸ್‌ 15 00 10 00
ಒಟ್ಟು 475 81 600 3,05,000

ಟಾಪ್ ನ್ಯೂಸ್

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.