ಶಾಸಕರ ನಡೆಗೆ ರೈತಸಂಘದಿಂದ ಛೀ…ಥೂ…
Team Udayavani, Jul 16, 2019, 9:03 AM IST
ದಾವಣಗೆರೆ: ಶಾಸಕರ ಭಾವಚಿತ್ರವಿರುವ ಫ್ಲೆಕ್ಸ್‌ಗೆ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಎಲೆ ಅಡಕೆ ಜಗಿದು ಉಗಿದರು.
ದಾವಣಗೆರೆ: ಮೂರು ರಾಜಕೀಯ ಪಕ್ಷಗಳ ಮುಖಂಡರು, ಶಾಸಕರು ರಾಜ್ಯದ ಮತದಾರರ ಆಶಯಗಳನ್ನು ಧಿಕ್ಕರಿಸುತ್ತಿದ್ದಾರೆ ಎಂದು ಆರೋಪಿಸಿ ಸೋಮವಾರ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಸಾರಿಗೆ ಬಸ್ ನಿಲ್ದಾಣದ ಎದುರು ಶಾಸಕರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಎಲೆ-ಅಡಕೆ ಹಾಕಿಕೊಂಡು ಛೀ…ಥೂ… ಎಂದು ಉಗಿಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಬಡವರು, ರೈತರಿಗೆ ನ್ಯಾಯ ದೊರಕುತ್ತಿಲ್ಲ. ಅನೇಕರಿಗೆ ರೇಷನ್ ಕಾರ್ಡ್, ಮನೆ, ಜಾಗ ಇಲ್ಲ, ಮಹದಾಯಿ ಯೋಜನೆ ಜಾರಿಗೊಳಿಸಲಿಲ್ಲ, ಬೆಳೆಗೆ ಸೂಕ್ತ ಬೆಲೆ ದೊರಕುತ್ತಿಲ್ಲ. ಬರದಿಂದ ತತ್ತರಿಸುತ್ತಿರುವ ಜನರಿಗೆ ಪರಿಹಾರ ಒದಗಿಸುತ್ತಿಲ್ಲ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ನೀಡುತ್ತಿಲ್ಲ, ಗೋಶಾಲೆ ಸರಿಯಾಗಿ ನಡೆಸುತ್ತಿಲ್ಲ, ಹೇಳಿದಂತೆ ರೈತರ ಸಾಲ ಮನ್ನಾ ಮಾಡಲಿಲ್ಲ…. ಯಾವ ಶಾಸಕರು ಸಹ ಇದ್ಯಾವ ಕಾರಣಕ್ಕೂ ರಾಜೀನಾಮೆ ನೀಡಿಲ್ಲ. ಬದಲಿಗೆ ತಮ್ಮ ಸ್ವಾರ್ಥಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ತಮಗೆ ಆ ಖಾತೆ ನೀಡಿಲ್ಲ. ಈ ಖಾತೆ ಕೊಟ್ಟಿಲ್ಲ ಎನ್ನುವ ಶಾಸಕರು ಕೃಷಿ ಇಲಾಖೆಯಲ್ಲಿ ಟೊಮೊಟೋ, ಬೆಂಡೆಕಾಯಿ, ಮೆಕ್ಕೆಜೋಳ, ರಾಗಿ, ಪಶುಪಾಲನೆ ಇಲಾಖೆಯಲ್ಲಿ ಕೋಳಿ, ಹಂದಿ, ನಾಯಿ, ಕತ್ತೆ, ಶಿಕ್ಷಣ ಇಲಾಖೆಯಲ್ಲಿ 1ನೇ ಕ್ಲಾಸ್, 2ನೇ ಕ್ಲಾಸ್… ಹೀಗೆ 224 ಜನ ಶಾಸಕರು ಮಂತ್ರಿಗಳಾಗಲಿ ಎಂದು ಲೇವಡಿ ಮಾಡಿದರು.
ರಾಜ್ಯದ ಜನರ ಸಮಸ್ಯೆಗೆ ಸ್ಪಂದಿಸಿ, ಪರಿಹಾರ, ಕೆಲಸ ಮಾಡಿಕೊಡುವಂತೆ ಶಾಸಕರನ್ನು ಆಯ್ಕೆ ಮಾಡಿ ಕಳುಹಿಸಿದರೆ ತಮ್ಮ ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡುವ ಮೂಲಕ ರಾಜ್ಯ ರಾಜಕೀಯದಲ್ಲಿ ಅರಾಜಕತೆ ಉಂಟು ಮಾಡುತ್ತಿದ್ದಾರೆ. ಕೂಡಲೇ ರಾಷ್ಟ್ರಪತಿಗಳು ಮಧ್ಯ ಪ್ರವೇಶ ಮಾಡಿ, ವಿಧಾನಸಭೆ ವಿಸರ್ಜಿಸಿ, ಮತ್ತೆ ಚುನಾವಣೆ ನಡೆಸುವಂತಾಗಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಭೀಕರ ಬರಗಾಲ ಇದೆ. ನೀರು-ಮೇವಿಲ್ಲದೆ ಜನ-ಜಾನುವಾರು ಪರಿತಪಿಸುತ್ತಿವೆ. ಇಂತಹ ಸಂದರ್ಭದಲ್ಲಿ ರಾಜ್ಯ ವಿಧಾನ ಸಭಾ ಕಲಾಪದಲ್ಲಿ ಗಹನ ಚರ್ಚೆ ನಡೆಸಿ, ಪರಿಹಾರ, ಮಾರ್ಗೋಪಾಯ ಕಂಡುಕೊಳ್ಳಬೇಕಾದ ಶಾಸಕರು ಇಡೀ ರಾಜ್ಯದ ಜನತೆ ತಲೆತಗ್ಗಿಸುವಂತೆ ನಡೆದುಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ತದ್ವಿರುದ್ಧವಾಗಿ ನಡೆದುಕೊಂಡಿರುವರಿಗೆ ಮುಂದಿನ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಜಿಲ್ಲಾ ಅಧ್ಯಕ್ಷ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ, ಹುಚ್ಚವ್ವನಹಳ್ಳಿ ಗಣೇಶ್, ಚಿನ್ನಸಮುದ್ರ ಶೇಖರನಾಯ್ಕ, ಮಲ್ಲಶೆಟ್ಟಿ ಹಳ್ಳಿ ಹನುಮೇಶ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.