ಅಧಿಕಾರಿಗಳ ಕ್ರಮಕ್ಕೆ ಆಕ್ರೋಶ

•ನೀರೆತ್ತುವ ಮುಖ್ಯ ಸ್ಥಾವರ ಎದುರು ಗ್ರಾಮಸ್ಥರ ದಿಢೀರ್‌ ಪ್ರತಿಭಟನೆ

Team Udayavani, Jul 16, 2019, 9:33 AM IST

bk-tdy-2..

ಕಲಾದಗಿ: ಪ್ರತಿಭಟನೆ ನಡೆಸಿದ ರೈತರೊಂದಿಗೆ ಪಿಎಸ್‌ಐ ಅಶೋಕ ಚವಾಣ ಚರ್ಚೆ ನಡೆಸಿದರು.

ಕಲಾದಗಿ: ಕೃಷ್ಣಾ ಭಾಗ್ಯ ಜಲ ನಿಗಮ ಹೇರಕಲ್ ದಕ್ಷಿಣ ಏತ ನೀರಾವರಿ ಯೋಜನೆಯಲ್ಲಿ ಕಳಸಕೊಪ್ಪ ಕೆರೆ ಸೇರಿದಂತೆ ಬಾದಾಮಿ ತಾಲೂಕಿನ ಹಲವು ಕೆರೆಗೆ ನೀರು ತುಂಬಿಸುವ ಉದ್ದೇಶಕ್ಕಾಗಿ ಭೂಮಿಯ ಅಲ್ಪಭಾಗವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ, ಇಡೀ ಭೂಮಿಗೆ ಭೂಸ್ವಾಧೀನ ಪ್ರಕ್ರಿಯೆ ಎಂದು ರೈತರ ಪಹಣಿ ಪತ್ರದಲ್ಲಿ ತೋರಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಗೋವಿಂದಕೊಪ್ಪ ಗ್ರಾಮಸ್ಥರು ನೀರೆತ್ತುವ ಮುಖ್ಯ ಸ್ಥಾವರದ ಎದುರು ದಿಢೀರ್‌ ಪ್ರತಿಭಟನೆ ನಡೆಸಿದರು.

ಸೋಮವಾರ ಬೆಳಗ್ಗೆ ಜಾಕ್‌ವೆಲ್ನಿಂದ ಕೆರೆಗೆ ನೀರೆತ್ತಲು ಪ್ರಾರಂಭ ಮಾಡಲಿದ್ದಾರೆ ಎಂದು ಭಾವಿಸಿ ಜಾಕ್ವೆಲ್ ಪಂಪ್‌ ಹೌಸ್‌ ಎದುರು ಗೋವಿಂದಕೊಪ್ಪ ಗ್ರಾಮದ 50ಕ್ಕೂ ಅಧಿಕ ರೈತರು ಜಮಾಯಿಸಿದರು. ಕೆರೆ ತುಂಬಿಸುವ ಯೋಜನೆಗೆ ಗ್ರಾಮದ ನೂರಾರು ರೈತರ ಭೂಮಿ ಸ್ವಾಧಿಧೀನಮಾಡಿಕೊಂಡು ಪೈಪ್‌ಲೈನ್‌ ಹಾಯಿಸಲಾಗಿದೆ. ರೈತನ 10 ಎಕರೆ ಭೂಮಿಯಲ್ಲಿ 1 ಎಕರೆ, ಅರ್ಧ ಎಕರೆ, 20 ಗುಂಟೆ, 10 ಗುಂಟೆ ಪೈಪ್‌ಲೈನ್‌ ಮಾರ್ಗಕ್ಕೆ ಭೂ ಬಳಕೆ ಸ್ವಾಧೀನಗೊಂಡರೆ ಇಡೀ 10 ಎಕರೆ ಭೂಮಿಗೆ ಸರಕಾರದ ಭೂಸ್ವಾಧೀನ ಎಂದು ಉತಾರ್‌ನಲ್ಲಿ ನಮೂದಿಸಲಾಗಿದೆ. ಇದರಿಂದ ರೈತರಿಗೆ ಸರಕಾರ ಸಹಾಯ ಸಬ್ಸಿಡಿ, ಬ್ಯಾಂಕ್‌ ಸಾಲ ಸಿಗುತ್ತಿಲ್ಲ ಎಂದು ಕೃಷ್ಣಾ ಮೇಲ್ದಂಡೆ ಯೋಜನಾ ಬಾಗಲಕೋಟೆ ನವನಗರ ಹೆಚ್ಚುವರಿ ವಿಶೇಷ ಭೂಸ್ವಾಧೀನ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ವರ್ಷವೂ ಇದೇ ತಿಂಗಳಲ್ಲಿ ಕಳಸಕೊಪ್ಪ ಕೆರೆಗೆ ನೀರು ತುಂಬಿಸಲು ಚಾಲನೆ ನೀಡಲು ಆಗಮಿಸಿದ್ದ ವಿಧಾನ ಪರಿಷತ್‌ ಸದಸ್ಯ ಹನಮಂತ್‌ ಆರ್‌. ನಿರಾಣಿಯವರ ಮುಂದೆಯೂ ಈ ಸಮಸ್ಯೆ ಹೇಳಿಕೊಂಡಾಗ ಅಧಿಕಾರಿಗಳ ಶೀಘ್ರ ಸಮಸ್ಯೆ ಇತ್ಯರ್ಥ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಆ ವೇಳೆ ಅಧಿಕಾರಿಗಳು ಸರಿಪಡಿಸುವುದಾಗಿ ಭರವಸೆ ನೀಡಿ ವರ್ಷ ಕಳೆದರೂ ರೈತರ ಸಮಸ್ಯೆ ಬಗೆಹರಿಸುತ್ತಿಲ್ಲ. ಕಳೆದ ನಾಲ್ಕು ವರ್ಷದಿಂದ ಈ ಸಮಸ್ಯೆ ಹೇಳಿಕೊಳ್ಳುತ್ತಿದ್ದರೂ ಅಧಿಕಾರಿಗಳು ಸರಿಪಡಿಸುತ್ತಿಲ್ಲ ಎಂದು ರೈತರು ತಮ್ಮ ನೋವನ್ನು ತೋಡಿಕೊಂಡರು.

ಪ್ರತಿಭಟನೆ ಸುದ್ದಿ ತಿಳಿದ ಸ್ಥಳೀಯ ಪೊಲೀಸ್‌ ಠಾಣಾಧಿಕಾರಿ ಅಶೋಕ ಚವಾಣ್‌ ಸ್ಥಳದಲ್ಲಿದ್ದು, ರೈತರ ಸಮಸ್ಯೆ ಆಲಿಸಿ ರೈತರೊಂದಿಗೆ ಮಾತನಾಡಿದರು. ಅನ್ಯಾಯ ಸರಿಪಡಿಸದಿದ್ದಲ್ಲಿ ಬಾಗಲಕೋಟೆಯ ಕೆಬಿಜೆಎನ್‌ ಅಧಿಕಾರಿಗಳ ಕಚೇರಿ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.

ಶಿವಣ್ಣಾ ವಾಘ, ಹಸನಅಹದ ರೋಣ, ಅಲ್ಲಾಭಕ್ಷ ರೋಣ, ಮುತ್ತಪ್ಪ ಬೀಡಕಿ, ವಿಠಲದೇಶಮುಖ, ಅಬ್ದುಲ್ಖಾದರ ತಾಂಬೊಳೆ, ಮುನ್ನಾ ರೋಣ, ಬಸಪ್ಪ ಬೀಡಕಿ ಮುಂತಾದವರಿದ್ದರು.

ಟಾಪ್ ನ್ಯೂಸ್

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.