![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 16, 2019, 11:11 AM IST
ಹೊಸಪೇಟೆ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಸಂಯೋಜಿತ ಆಟೋ ಸಂಘ ಮತ್ತು ವಿಜಯನಗರ ಆಟೋ ಚಾಲಕರ ಸಂಘ ಹಾಗೂ ತುಂಗಭದ್ರಾ ಆಟೋ ಚಾಲಕರ ಸಂಘಗಳ ನೇತೃತ್ವದಲ್ಲಿ ನಗರದ ರೋಟರಿ ವೃತ್ತದ ರಸ್ತೆ ತಡೆದು ಪ್ರತಿಭಟನೆ ನಡೆಸಿತು.
ಹೊಸಪೇಟೆ: ಅಟೋ ಚಾಲಕರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಿಐಟಿಯು ಸಂಯೋಜಿತ ಆಟೋ ಸಂಘ ಮತ್ತು ವಿಜಯನಗರ ಆಟೋ ಚಾಲಕರ ಸಂಘ ಹಾಗೂ ತುಂಗಭದ್ರಾ ಆಟೋ ಚಾಲಕರ ಸಂಘಗಳ ನೇತೃತ್ವದಲ್ಲಿ ನೂರಾರು ಆಟೋ ಚಾಲಕರು ಸೋಮವಾರ ನಗರದ ರೋಟರಿ ವೃತ್ತದ ರಸ್ತೆ ತಡೆದು ಪ್ರತಿಭಟನೆ ಮಾಡಿದರು.
15 ವರ್ಷದ ವಾಹನಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಇದರಿಂದ ಬಡ ಆಟೋ ಚಾಲಕ ಹಾಗು ಮಾಲೀಕರಿಗೆ ವಿಪರೀತ ತೊಂದರೆಯಾಗುತ್ತಿದೆ. ಕಾರಣ ಹೊಸ ಆಟೋ ಖರೀದಿಗೆ ಹಣಕಾಸಿನ ನೆರವು ನೀಡಬೇಕು, ಆಟೋ ರಿಕ್ಷಾಗಳ ಮೇಲಿನ ವಿಮೆ ದರವನ್ನು ಕಡಿತ ಮಾಡಬೇಕು. ಚಾಲಕರಿಗೆ ನಗರಸಭೆ ವತಿಯಿಂದ ಎಸ್ಸಿ-ಎಸ್ಟಿ ನಿಗಮ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಬ್ಯಾಂಕ್‌ಗಳಲ್ಲಿ ಸಾಲ ಸೌಲಭ್ಯ ನೀಡಲು ಕ್ರಮ ವಹಿಸಬೇಕು. ಸುಪ್ರೀಂ ಕೋರ್ಟ್‌ನ ಆದೇಶದಂತೆ 7500 ಕೆಜಿ ತೂಕದ ವಾಹನಗಳಿಗೆ ಲೈಸೆನ್ಸ್ ಬ್ಯಾಡ್ಜ್ ಕಡ್ಡಾಯ ಇರುವುದಿಲ್ಲ. ರಾಜ್ಯದಲ್ಲೂ ಈ ನೀತಿ ಜಾರಿಯಾಗಬೇಕು ಎಂಬ ಬೇಡಿಕೆಗಳಿಗೆ ಪ್ರಧಾನಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಎಚ್.ವಿಶ್ವನಾಥ ಅವರಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಆಟೋ ಚಾಲಕರ ಮುಖಂಡರಾದ ಕೃಷ್ಣ, ಸಂತೋಷ, ಗೋಪಾಲ, ರಾಮಚಂದ್ರ, ಭಾಸ್ಕರ್ ರೆಡ್ಡಿ, ಈ. ಸಿದ್ಧಲಿಂಗ, ಬಸವರಾಜ, ಚಂದ್ರಶೇಖರ್, ಶ್ರೀನಿವಾಸ್ ಸೇರಿದಂತೆ ನೂರಾರು ಅಟೋಚಾಲಕರು ಪ್ರತಿಭಟನೆಯಲ್ಲಿ ಇದ್ದರು.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.