ಸಮರ್ಪಕ ಬರ ಪರಿಹಾರ ಕಾರ್ಯಕ್ಕೆ ಸಿಪಿಐ ಆಗ್ರಹ
Team Udayavani, Jul 16, 2019, 3:40 PM IST
ದಾವಣಗೆರೆ: ಸಿಪಿಐ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ.
ದಾವಣಗೆರೆ: ಕೇಂದ್ರ ಮತ್ತು ರಾಜ್ಯ ಸರ್ಕಾರ ಸಮರ್ಪಕವಾಗಿ ಬರ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ(ಸಿಪಿಐ) ಮುಖಂಡರು, ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
ಅಶೋಕ ರಸ್ತೆಯಲ್ಲಿನ ಸಿಪಿಐ ಕಚೇರಿಯಿಂದ ಎಸಿ ಕಚೇರಿವರೆಗೆ ಮೆರವಣಿಗೆ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಮಳೆಗಾಲದಲ್ಲೇ ಭೀಕರ ಬರಗಾಲದ ವಾತಾವರಣ ಇದೆ. ಜೂನ್ ತಿಂಗಳಲ್ಲಿ ಮಳೆಯಾಗದೆ ರೈತರು ಬಿತ್ತನೆ ಮಾಡಲಿಕ್ಕೆ ಆಗಿಯೇ ಇಲ್ಲ. ಜುಲೈನಲ್ಲೂ ಅಂತಹ ಪ್ರಮಾಣದ ಮಳೆ ಆಗುತ್ತಿಲ್ಲ. ಜಲಾನಯನ ಪ್ರದೇಶದಲ್ಲಿ ತೀವ್ರ ಮಳೆಯ ಕೊರತೆಯಿಂದ ಜಲಾಶಯ ತುಂಬದೇ ಈಗಲೇ ಮುಂದಿನ ದಿನಗಳ ಬಗ್ಗೆ ಗಂಭೀರವಾಗಿ ಯೋಚಿಸಬೇಕಾದ ವಾತಾವರಣ ಇದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಬರ ಪರಿಸ್ಥಿತಿ ನಿರ್ವಹಣೆ ಮಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಪ್ರತಿಭಟನಾಕಾರರು ದೂರಿದರು. ರಾಜ್ಯದ 156 ತಾಲೂಕಿನಲ್ಲಿ ಬರಗಾಲ ತಾಂಡವವಾಡುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸಮರೋಪಾದಿ ಬರ ಪರಿಹಾರ ಮಾಡಬೇಕಿತ್ತು. ರಾಜ್ಯ ಸಮ್ಮಿಶ್ರ ಸರ್ಕಾರ ಕುರ್ಚಿ ಉಳಿಸಿಕೊಳ್ಳಲು, ವಿಪಕ್ಷ ಬಿಜೆಪಿ ಕುರ್ಚಿಗೇರುವ ಆಸೆಯಲ್ಲಿ ಜಿದ್ದಿಗೆ ಬಿದ್ದಂತೆ ಇಡೀ ರಾಜ್ಯದ ಜನತೆ ತಲೆ ತಗ್ಗಿಸುವಂತೆ ನಡೆದುಕೊಳ್ಳುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರದ ಬರ ಅಧ್ಯಯನ ತಂಡ ಬರ ನಿರ್ವಹಣೆಗೆ 30 ಸಾವಿರ ಕೋಟಿ ಅನುದಾನ ಬೇಕು ಎಂಬ ವರದಿ ನೀಡಿದೆ. ಆದರೆ ಕೇಂದ್ರ ಬರೀ 950 ಕೋಟಿ ಮಾತ್ರ ಬಿಡುಗಡೆ ಮಾಡಿದೆ. ಈ ತಾರತಮ್ಯ ನೀತಿ ಅತ್ಯಂತ ಖಂಡನೀಯ ಎಂದು ದೂರಿದರು. ಸಮರ್ಪಕವಾಗಿ ಬರ ಪರಿಹಾರ ಕಾಮಗಾರಿ ನಡೆಸಬೇಕು ಮತ್ತು ಖಾತರಿ ಯೋಜನೆಯ ಮೂಲಕ ಗ್ರಾಮೀಣ ಜನರಿಗೆ ಉದ್ಯೋಗ ಒದಗಿಸಬೇಕು ಎಂದು ಒತ್ತಾಯಿಸಿದರು.
ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಚ್.ಕೆ. ರಾಮಚಂದ್ರಪ್ಪ, ಆನಂದರಾಜ್, ಆವರಗೆರೆ ಚಂದ್ರು, ಆವರಗೆರೆ ವಾಸು, ಎಂ.ಬಿ. ಶಾರದಮ್ಮ, ರಂಗನಾಥ್, ಸರೋಜಾ, ಲಕ್ಷ್ಮಣ, ಟಿ.ಎಸ್. ನಾಗರಾಜ್, ಎನ್.ಟಿ. ಬಸವರಾಜ್, ರಮೇಶ್, ರೇವಣಸಿದ್ದಪ್ಪ, ಚಮನ್‌ಸಾಬ್, ಏಳುಕೋಟಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ
IPL 2024: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.