“ಸ್ವಚ್ಛತೆಯಲ್ಲಿ ಭಾಗವಹಿಸುವುದು ಪುಣ್ಯದ ಕೆಲಸ’

ರಾಮಕೃಷ್ಣ ಮಿಷನ್‌ ಸ್ವಚ್ಛ ಸುರತ್ಕಲ್‌ ಅಭಿಯಾನ

Team Udayavani, Jul 17, 2019, 5:00 AM IST

n-21

ಸುರತ್ಕಲ್‌: ಸ್ವಚ್ಛತಾ ಶ್ರಮ ದಾನದಲ್ಲಿ ಭಾಗವಹಿಸುವುದು ದೇವತಾ ಕಾರ್ಯದಷ್ಟೇ ಪುಣ್ಯದ ಕೆಲಸ. ಕಸದ ಸೂಕ್ತ ವಿಲೇವಾರಿ ಮಾಡದೆ ಇರುವುದರಿಂದಾಗಿ ಮನುಕುಲವು ಬೇರೆ ಬೇರೆ ಆರೋಗ್ಯದ ಸಮಸ್ಯೆಗಳನ್ನು ಎದುರಿಸುತ್ತಿದ್ದು, ನಮ್ಮ ಹಿರಿಯರು ಕೊಟ್ಟಂತಹ ಸುಂದರವಾದ ಪ್ರಕೃತಿಯನ್ನು ಮುಂದಿನ ಪೀಳಿಗೆಗೆ ನೀಡಬೇಕಾದ ಅಗತ್ಯವಿದೆ ಎಂದು ಆಲ್‌ ಬದ್ರಿಯಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಅಬ್ದುಲ್‌ ಖಾದರ್‌ ಹೇಳಿದರು.

ರಾಮಕೃಷ್ಣ ಮಿಷನ್‌ ಮಂಗಳೂರು, ನಾಗರಿಕ ಸಲಹಾ ಸಮಿತಿ ಸುರತ್ಕಲ್‌ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಎಂ.ಆರ್‌.ಪಿ.ಎಲ್‌. ನೆರವಿನೊಂದಿಗೆ ನಡೆಯುವ ರಾಮಕೃಷ್ಣ ಮಿಷನ್‌ ಸ್ವಚ್ಛ ಸುರತ್ಕಲ್‌ ಅಭಿಯಾನದ 39ನೇ ವಾರದ ಸ್ವತ್ಛತಾ ಅಭಿಯಾನಕ್ಕೆ ಕೃಷ್ಣಾಪುರ 7ನೇ ಬ್ಲಾಕ್‌ ಪರಿಸರದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ಆಲ್‌ ಬದ್ರಿಯಾ ಸಂಸ್ಥೆಯ ಸಂಚಾಲಕ ಇಕ್ಬಾಲ್‌ ಮಾತನಾಡಿ, ರಾಮಕೃಷ್ಣ ಮಿಷನ್‌ ವತಿಯಿಂದ ನಡೆಯುವ ಸತ್ಕಾರ್ಯದಲ್ಲಿ ಪ್ರತಿಯೋರ್ವ ನಾಗರಿಕರು ಭಾಗವಹಿಸಿ ರಾಷ್ಟ್ರಪಿತ ಗಾಂಧೀಜಿಯವರು ಕಂಡಂತಹ ಸುಂದರ ದೇಶದ ಕನಸನ್ನು ನನಸು ಮಾಡಬೇಕೆಂದರು.

ಆಲ್‌ ಬದ್ರಿಯಾ ಜುಮ್ಮಾ ಮಸೀದಿಯ ಗುರುಗಳು, ಕಾರ್ಯದರ್ಶಿ ಇಬ್ರಾಹಿಂ, ಕೋಶಾಧಿಕಾರಿ ಟಿ.ಎಂ. ಮುಬಾರಕ್‌, ಉಪಾಧ್ಯಕ್ಷ ಸತ್ತಾರ್‌, ಜತೆ ಕಾರ್ಯದರ್ಶಿ ಮೊಹಮ್ಮದ್‌ ಸತ್ತಾರ್‌ ಉಪಸ್ಥಿತರಿದ್ದರು.
ಆಲ್‌ ಬದ್ರಿಯಾ ಶಿಕ್ಷಣ ಸಂಸ್ಥೆಗಳು, ನಾಗರಿಕ ಸಲಹಾ ಸಮಿತಿ, ರೋಟರಿ ಕ್ಲಬ್‌ ಸುರತ್ಕಲ್‌ ಮುಂತಾದ ಸಂಘಟನೆಗಳು ಶ್ರಮದಾನದಲ್ಲಿ ತೊಡಗಿಸಿ ಕೊಂಡವು. ಕಾಲೇಜಿನ ಪ್ರಾಂಶುಪಾಲೆ ವಿಲ್ಮಾ ಡಿಮೆಲ್ಲೋ ನೇತೃತ್ವದ ಶಿಕ್ಷಕಿಯರ ಹಾಗೂ ವಿದ್ಯಾರ್ಥಿನಿಯರ ಒಂದು ತಂಡ ಸಾರ್ವಜನಿಕ ಪಾರ್ಕ್‌ ಕೃಷ್ಣಾಪುರ ಭಾಗದಲ್ಲಿ ಶ್ರಮದಾನದಲ್ಲಿ ತೊಡಗಿಸಿಕೊಂಡಿತು. ಮುಖ್ಯೋಪಾಧ್ಯಾಯ ಸತೀಶ್‌, ಶಿಕ್ಷಕ ಭರತ್‌ ನೇತೃತ್ವದ ವಿದ್ಯಾರ್ಥಿಗಳ ಒಂದು ತಂಡ ಕೃಷ್ಣಾಪುರ 7ನೇ ಬ್ಲಾಕ್‌ನ ಮುಖ್ಯ ರಸ್ತೆಯ ದಕ್ಷಿಣ ಭಾಗದಲ್ಲಿ ಸರಕಾರಿ ಪ್ರೌಢಶಾಲೆಯವರೆಗೆ ಸ್ವತ್ಛತಾ ಶ್ರಮದಾನ ಕೈಗೊಂಡಿತು.

ನಾಗರಿಕ ಸಮಿತಿ ಕುಳಾಯಿ ಅಧ್ಯಕ್ಷ ಭರತ್‌ ಶೆಟ್ಟಿ, ಬಿ.ಎಸ್‌.ಎನ್‌.ಎಲ್‌. ನಿವೃತ್ತ ಉದ್ಯೋಗಿ ಆನಂದ ರಾವ್‌ ನೇತೃತ್ವ¨ ತಂಡ ಮುಖ್ಯ ರಸ್ತೆಯಲ್ಲಿ ಸ್ವತ್ಛತೆಯ ಕಾರ್ಯವನ್ನು ಕೈಗೊಂಡಿತು. ರೋಟರಿ ಕ್ಲಬ್‌ ಸುರತ್ಕಲ್‌ನ ಶ್ರೀನಿವಾಸ್‌ ರಾವ್‌, ಗೋವಿಂದ ದಾಸ ಕಾಲೇಜಿನ ಪ್ರಾಧ್ಯಾಪಕ ರಮೇಶ್‌ ಭಟ್‌, ಬೆಂಗಳೂರಿನ ಅನುರಾಗ್‌ ನೇತೃತ್ವದ ತಂಡ ಆಲ್‌ ಬದ್ರಿಯ ಶಿಕ್ಷಣ ಸಂಸ್ಥೆಗಳ ಹಿಂದಿನ ರಸ್ತೆಗಳಲ್ಲಿ ಶ್ರಮದಾನದಲ್ಲಿ ತೊಡಗಿಸಿಕೊಂಡಿತು.

ಸ್ವಚ್ಛತೆಯ ಬಗ್ಗೆ ಜಾಗೃತಿ
ನಾಗರಿಕ ಸಲಹಾ ಸಮಿತಿ ಸಂಚಾಲಕ ಡಾ| ಕೆ. ರಾಜ್‌ ಮೋಹನ್‌ ರಾವ್‌, ಗೋವಿಂದ ದಾಸ ಕಾಲೇಜಿನ ಪ್ರೊ| ಕೃಷ್ಣ ಮೂರ್ತಿ, ಭಾರತೀಯ ಸೇನೆಯ ನಿವೃತ್ತ ಯೋಧ ಗೋಪಿನಾಥ್‌ ರಾವ್‌ ಶಿಕ್ಷಕಿ ಸಾವಿತ್ರಿ ರಮೇಶ್‌ ಭಟ್‌ ನೇತೃತ್ವದಲ್ಲಿ ಪರಿಸರದ ಅಂಗಡಿ ಮಾಲಕರಿಗೆ, ಮನೆ ಮಾಲಕರಿಗೆ ಸ್ವಚ್ಛತೆಯ ಜಾಗೃತಿ ಮೂಡಿಸಲಾಯಿತು. ಹಸಿ, ಒಣ ಕಸದ ನಿರ್ವಹಣೆಯ ಮಹತ್ವ ಬಗ್ಗೆ ತಿಳಿಸಲಾಯಿತು.

ಸ್ವಚ್ಛತೆಯಲ್ಲಿ ಕೈ ಜೋಡಿಸಿದ ಸಾರ್ವಜನಿಕರು
ಅಧ್ಯಾಪಕರು, ವಿದ್ಯಾರ್ಥಿಗಳಿಂದ ಸ್ವತ್ಛತಾ ಶ್ರಮದಾನ ನಡೆಯುತ್ತಿರುವುದನ್ನು ಕಂಡ ಬಟ್ರಂಟ್‌ ಆ್ಯಂಡ್‌ ರಸೆಲ್‌ ಶಾಲೆಯ ಸಂಚಾಲಕಿ ನಿಷಾ ಲಕ್ಷ್ಮಣ್‌ ನೇತೃತ್ವದಲ್ಲಿ ಸಾರ್ವಜನಿಕರು ಶ್ರಮದಾನದಲ್ಲಿ ಕೈ ಜೋಡಿಸಿದರು. ಆಲ್‌ ಬದ್ರಿಯಾ ಶಿಕ್ಷಣ ಸಂಸ್ಥೆಗಳ 80ಕ್ಕೂ ಮಿಕ್ಕಿ ವಿದ್ಯಾರ್ಥಿಗಳು 40ಕ್ಕೂ ಮಿಕ್ಕಿ ಅಧ್ಯಾಪಕರು, ಸಿಬಂದಿ ವರ್ಗ, ಜುಮ್ಮಾ ಮಸೀದಿಯ ಪದಾ ಧಿಕಾರಿಗಳು ಸಾರ್ವಜನಿಕರು ಸ್ವತ್ಛತಾ ಕಾರ್ಯದಲ್ಲಿ ಕೈಜೋಡಿಸಿದರು. ರಾಮಕೃಷ್ಣ ಮಿಷನ್‌ ಸ್ವತ್ಛ ಸುರತ್ಕಲ್‌ ಅಭಿಯಾನದ ಸಂಯೋಜಕ ಸತೀಶ್‌ ಸದಾನಂದ್‌ ಸ್ವಯಂ ಸೇವಕರಿಗೆ ಅಗತ್ಯ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Trump imposes no taxes on India, only taxes on Canada and China!

US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್‌!

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Trump imposes no taxes on India, only taxes on Canada and China!

US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್‌!

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.