ಹೆಚ್ಚುವರಿ ಬಸ್ ಸೇವೆಗೆ ಆಗ್ರಹಿಸಿ ಪ್ರತಿಭಟನೆ
Team Udayavani, Jul 17, 2019, 10:33 AM IST
ನರೇಗಲ್ಲ: ಜಕ್ಕಲಿ ಗ್ರಾಮದಲ್ಲಿ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು.
ನರೇಗಲ್ಲ: ಸಮೀಪದ ಜಕ್ಕಲಿ ಮಾರ್ಗವಾಗಿ ನರೇಗಲ್ಲ, ರೋಣ, ಗದಗ, ಗಜೇಂದ್ರಗಡ ನಗರಗಳಿಗೆ ಸಮರ್ಪಕ ಬಸ್ ಸೇವೆ ಒದಗಿಸುವಂತೆ ಒತ್ತಾಯಿಸಿ ಜಕ್ಕಲಿ ಗ್ರಾಮದ ವಿದ್ಯಾರ್ಥಿಗಳು, ಗ್ರಾಮಸ್ಥರು, ಕರವೇ ಕಾರ್ಯಕರ್ತರು ಬಸ್ ತಡೆದು ಪ್ರತಿಭಟನೆ ನಡೆಸಿದರು.
ತಾಲೂಕು ಕರವೇ ಅಧ್ಯಕ್ಷ ಉಮೇಶ ಮೇಟಿ ಮಾತನಾಡಿ, ಗ್ರಾಮದಿಂದ ನಿತ್ಯ 300ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರತಿನಿದಿನ ಶಾಲಾ, ಕಾಲೇಜುಗಳಿಗೆ ತೆರಳಬೇಕು. ಆದರೆ, ಈ ಗ್ರಾಮಕ್ಕೆ ಸಮರ್ಪಕವಾದ ಬಸ್ ಸಂಚಾರ ವ್ಯವಸ್ಥೆ ಇಲ್ಲ. ಇದರಿಂದ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗಿದೆ. ಈ ಸಮಸ್ಯೆ ಕುರಿತು ಅನೇಕ ಬಾರಿ ಮಾಹಿತಿ ಹಾಗೂ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ. ಎರಡು ದಿನಗಳಲ್ಲಿ ಈ ವ್ಯವಸ್ಥೆ ಕಲ್ಪಿಸದೆ ಹೋದಲ್ಲಿ ಶಾಲೆಯ ಮಕ್ಕಳ ಜೊತೆಗೆ ಪಾಲಕರು ಸೇರಿಕೊಂಡು ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಆಗ್ರಹಿಸಿದರು.
ಸಂಗಮೇಶ ಮೆಣಸಗಿ ಮಾತನಾಡಿ, ಕೂಡಲೇ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಹೆಚ್ಚುವರಿ ಬಸ್ ಸೌಲಭ್ಯ ನೀಡಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದರು.
ಈ ವೇಳೆ ರೋಣ ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕ ವಿ.ಎಸ್. ಕಾಗವಾಡಿ ಅವರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿ ಮಾತನಾಡಿದ ಅವರು, ಜಕ್ಕಲಿ ಮಾರ್ಗವಾಗಿ ನರೇಗಲ್ಲ ಸೇರಿದಂತೆ ಗದಗ ನಗರಕ್ಕೆ ಎರಡು ದಿನಗಳಲ್ಲಿ ಹೆಚ್ಚುವರಿಗೆ ಬಸ್ ಸೌಲಭ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು. ನಂತರ ಪ್ರತಿಭಟನೆ ಹಿಂಪಡೆದರು.
ರವೀಂದ್ರ ಮುಗಳಿ, ರಾಜು ಮಸಲವಾಡ, ಮಲ್ಲಿಕಾರ್ಜುನ ಮುಧೋಳ, ಗೊಡಚಪ್ಪ ಅಕ್ಕಿಶೆಟ್ಟರ್, ಮಂಜುನಾಥ ಆದಿ, ಚಂದ್ರ ಆದಿ, ಸುಭಾಷ್ ಕೆಳಗಡಿ, ವೀರಭದ್ರಪ್ಪ ಗಾಣಿಗೇರ, ಮಲ್ಲಪ್ಪ ಪಲ್ಲೇದ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.