ಸರ್ವ ಸಮಸ್ಯೆಗೆ ಜನಸಂಖ್ಯೆ ಹೆಚ್ಚಳ ಮೂಲ ಕಾರಣ: ಬಿರಾದಾರ

ಪ್ರತಿ ಕುಟುಂಬ ಸದೃಢವಾಗಿದ್ದರೆ ದೇಶ ಸದೃಢ

Team Udayavani, Jul 17, 2019, 3:33 PM IST

17-July-33

ವಿಜಯಪುರ: ನಗರದಲ್ಲಿ ವಿವಿಧ ಸಂಘಟನೆಗಳಿಂದ ಹಮ್ಮಿಕೊಂಡಿದ್ದ ಜನಸಂಖ್ಯೆ ದಿನಾಚರಣೆ ಕಾರ್ಯಕ್ರಮಕ್ಕೆ ಎಸ್‌.ಕೆ. ಬಿರಾದಾರ ಚಾಲನೆ ನೀಡಿದರು

ವಿಜಯಪುರ: ವಿಶ್ವದಲ್ಲಿ ಪ್ರಸಕ್ತ ಎಲ್ಲ ಸಮಸ್ಯೆಗಳಿಗೆ ಅದರಲ್ಲೂ ಮನುಕುಲವನ್ನು ಕಾಡುತ್ತಿರುವ ಹಸಿವು, ಬಡತನ, ವಸತಿ, ನಿರುದ್ಯೋಗ, ವಲಸೆ, ಗಂಭೀರ ರೋಗ, ಯುದ್ಧ, ಮೂಲಭೂತ ಸೌಕರ್ಯಗಳ ಕೊರತೆ ಹೀಗೆ ಎಲ್ಲ ಸಮಸ್ಯೆಗಳಿಗೆ ಜನಸಂಖ್ಯಾ ಸ್ಫೋಟವೇ ಮೂಲ ಕಾರಣ ಎಂದು ವಲಯ ಶಿಕ್ಷಣ ಸಂಯೋಜಕ ಎಸ್‌.ಕೆ. ಬಿರಾದಾರ ಆಭಿಪ್ರಾಯಪಟ್ಟರು.

ನಗರದಲ್ಲಿ ಅಫಜಲಪುರ-ಟಕ್ಕೆ ಅಂಗನವಾಡಿ ಕೇಂದ್ರದಲ್ಲಿ ಫ್ಯಾಮಿಲಿ ಪ್ಲಾನಿಂಗ್‌ ಅಸೊಶಿಯೇಶನ್‌ ಇಂಡಿಯಾ, ವರ್ಕ್‌ ಇಸ್‌ ವರ್ಶಿಫ್‌ ಇಂಟರ್‌ ನ್ಯಾಷನಲ್ ಫೌಂಡೇಶನ್‌, ಅಂತಾರಾಷ್ಟ್ರೀಯ ಬಸವಸೇನೆ, ಫಂಕ್‌-ಟು-ಡಿಸೈರ್‌ ಚಾರಿಟೆಬಲ್ ಟ್ರಸ್ಟ್‌ ಹಾಗೂ ಪುರಂದರ ಕಲಾ ಸಾಹಿತ್ಯ, ಶಿಕ್ಷಣ ಸಮಾಜ ಸೇವಾ ಸಂಸ್ಕೃತಿ ವೇದಿಕೆ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಹಾಗೂ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಬ್ಬರು ಕಡ್ಡಾಯ ಜನಸಂಖ್ಯಾ ನಿಯಂತ್ರಣ ಅಳವಡಿಸಿಕೊಳ್ಳಬೇಕಿದೆ ಎಂದರು.

ಖ್ಯಾತ ಮನೋತಜ್ಞೆ ಡಾ| ಪಲ್ಲವಿ ಅಡಿಗ ಮಾತನಾಡಿ, ಪ್ರತಿಯೊಬ್ಬರು ಜನಸಂಖ್ಯಾ ನಿಯಂತ್ರಣದ ಮಹತ್ವವನ್ನು ಅರಿತು ಚಾಚು ತಪ್ಪದೇ ಪಾಲಿಸಬೇಕಾದ ಅವಶ್ಯಕತೆ ಇದೆ. ಅದರಲ್ಲಿ ಮಹಿಳೆಯರು, ಬರಿ ದುಡಿಮೆ ಹಾಗೂ ಸಂಸಾರಿಕ ಬಂಧನದಲ್ಲಿ ಸಮಯ ವ್ಯರ್ಥ ಮಾಡಬಾರದು. ಬದಲಾಗಿ ತಮಗಿರುವ ಸ್ಥಾನಮಾನ ಆರೋಗ್ಯದ ಸ್ಥಿತಿಗತಿ ಹೆಚ್ಚು ಮಕ್ಕಳನ್ನು ಹೆರುವುದರಿಂದ ಆಗುವ ದುಷ್ಪರಿಣಾಮ, ಬಾಣಂತನದ ಸಂದರ್ಭದಲ್ಲಿ ತಾಯಿ, ಮಗುವಿಗೆ ಬರುವ ಮಾರಣಾಂತಿಕ ಕಾಯಿಲೆಗಳ ಬಗ್ಗೆ ಜಾಗೃತಿ ವಹಿಸಬೇಕು. ತಾಯಿ, ಮಗು ಸದೃಢವಾಗಿದ್ದರೆ ಕುಟುಂಬ ಸದೃಢ. ಪ್ರತಿಯೊಂದು ಕುಟುಂಬ ಸದೃಢವಾಗಿದ್ದರೆ ಇಡಿ ದೇಶ ಸದೃಢವಾಗಿರಲು ಸಾಧ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಫ್ಯಾಮಿಲಿ ಪ್ಲಾನಿಂಗ್‌ ಅಸೋಶಿಯೇಶನ್‌ ಇಂಡಿಯಾ ಶಾಖಾ ಪ್ರಬಂಧಕ ಪ್ರಸನ್ನ ಜೋಶಿ ಮಾತನಾಡಿ, ನಮ್ಮ ಸಂಸ್ಥೆ ಹಲವಾರು ವರ್ಷಗಳಿಂದ ಜಿಲ್ಲೆಯಲ್ಲಿ ಜನತೆಗೆ ನಾನಾ ರೀತಿ ಸೇವೆ ಹಾಗೂ ಆರೋಗ್ಯದ ಕುರಿತು ಜಾಗೃತಿ ಕಾರ್ಯಕ್ರಮ ನೀಡುತ್ತ ಬಂದಿದ್ದು ಸಾವಿರಾರು ಜನ ಇದರ ಸದುಪಯೋಗ ಪಡೆಯುತ್ತಿದ್ದಾರೆ. ಪ್ರಸ್ತುತ ದೇಶದಲ್ಲಿ ಜನಸಂಖ್ಯೆ ನಿಯಂತ್ರಣ ಅತ್ಯವಶ್ಯವಾಗಿದ್ದು, ದೈಹಿಕ, ಮಾನಸಿಕ, ಕೌಟುಂಬಿಕ, ಆರ್ಥಿಕ ಹಿನ್ನೆಲೆ ಅರಿತುಕೊಂಡು ಜೀವನ ಸಾಗಿಸುತ್ತ ಊರಿಗೊಂದು ವನ, ಓಣಿಗೊಂದು ಶಾಲೆ, ಮನೆಗೊಂದು ಮಗು ಎಂಬ ತತ್ವ ಎಲ್ಲರೂ ಪಾಲಿಸಿದರೆ ಈ ದೇಶ ಸುಂದರ, ಸುಸಂಸ್ಕೃತ, ಸದೃಢವಾಗುತ್ತದೆ ಎಂದರು.

ಪ್ರಾಸ್ತಾವಿಕ ಮಾತನಾಡಿದ ವರ್ಕ್‌ ಇಸ್‌ ವರ್ಶಿಫ್‌ ಇಂಟರ್‌ ನ್ಯಾಷನಲ್ ಫೌಂಡೇಶನ್‌ ಸಂಸ್ಥಾಪಕ ಅಧ್ಯಕ್ಷ ದಾನೇಶ ಅವಟಿ, 2011 ಜನಗಣತಿ ಪ್ರಕಾರ ಭಾರತದ ಜನಸಂಖ್ಯೆ ದಿನೇ ದಿನೇ ಅತಿ ವೇಗವಾಗಿ ಮುನ್ನಡೆಯುತ್ತಿದ್ದೆ. ಜನಸಂಖ್ಯೆ ಭಾರತದಲ್ಲಿ ಒಳ್ಳೆಯ ಮಾನವ ಸಂಪನ್ಮೂಲವಾಗಿದ್ದರು ಕೂಡ ರಾಷ್ಟ್ರದ ಪ್ರಗತಿಗೆ ಪೂರಕವಾಗದೆ ಇರುವುದು ದುರದೃಷ್ಟಕರ ಎಂದು ವಿಷಾದಿಸಿದರು.

ಶಿಕ್ಷಣ ಸಂಯೋಜಕ ವಿ.ಬಿ. ಜಂಗಿನ, ಛಾಯಾ ಚಿಪ್ಪಲಕಟ್ಟಿ, ಅಂತಾರಾಷ್ಟ್ರೀಯ ಬಸವ ಸೇನೆ ಅಧ್ಯಕ್ಷ ಸೋಮನಗೌಡ ಕಲ್ಲೂರ, ಸಿದ್ದು ಭಾವಿಕಟ್ಟಿ, ಎ.ಡಿ. ಮಕಾನದಾರ, ಲಕ್ಷ್ಮೀ, ಎಸ್‌.ಬಿ. ಹೈದರಖಾನ್‌ ಮಾತನಾಡಿದರು. ರಾಘವೇಣಿ ಪ್ರಾರ್ಥಿಸಿದರು. ಎಂ.ಜೆ. ಗಾಯಕವಾಡ ನಿರೂಪಿಸಿದರು. ವಿಜಯಕುಮಾರ ವಂದಿಸಿದರು.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.