ಜರುಗಹಳ್ಳಿಯಲ್ಲಿ ಗಂಟಲುಮಾರಿ ರೋಗ: ಜನರಲ್ಲಿ ಆತಂಕ
ಮೂರು ದಿನಗಳ ಹಿಂದೆ ವಿದ್ಯಾರ್ಥಿ ಸಾವು • ಹಲವು ವಿದ್ಯಾರ್ಥಿಗಳಿಗೆ ರೋಗ ಶಂಕೆ • ವೈದ್ಯರ ತಂಡದಿಂದ ಲಸಿಕೆ
Team Udayavani, Jul 17, 2019, 3:49 PM IST
ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಗ್ರಾಪಂನ ಜರುಗಹಳ್ಳಿ ಗ್ರಾಮದಲ್ಲಿ ದುರ್ಗಾ ಪ್ರಸಾದ್ ಎಂಬ ವಿದ್ಯಾರ್ಥಿಗೆ ಗಂಟಲು ಊದುಕೊಂಡಿರುವುದನ್ನು ಗ್ರಾಪಂ ಅಧ್ಯಕ್ಷ ಸುಬ್ಬಣ್ಣ ಪರಿಶೀಲಿಸಿದರು.
ಶಿಡ್ಲಘಟ್ಟ: ತಾಲೂಕಿನ ಜರುಗಹಳ್ಳಿ ಗ್ರಾಮದಲ್ಲಿ ಸಂಶಯಾಸ್ಪದ ಗಂಟಲುಮಾರಿ ರೋಗದಿಂದ ಬಳಲುತ್ತಿದ್ದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ದಿಬ್ಬೂರಹಳ್ಳಿ ಗ್ರಾಪಂಗೆ ಬರುವ ಜರುಗಹಳ್ಳಿ ಗ್ರಾಮದಲ್ಲಿ ಸಂಶಯಾಸ್ಪದ ಗಂಟಲು ಮಾರಿ ರೋಗದಿಂದ ಬಳಲುತ್ತಿದ್ದ 5ನೇ ತರಗತಿಯ ವಿದ್ಯಾರ್ಥಿ ಪ್ರಜ್ವಲ್ ಮೃತಪಟ್ಟಿದ್ದು, ಇನ್ನೂ ಹಲವು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಗಂಟಲು ರೋಗದಿಂದ ನರಳುತ್ತಿದ್ದು, ನೆಮ್ಮದಿಗೆ ಭಂಗ ಉಂಟು ಮಾಡಿದೆ.
ಫಲಕಾರಿಯಾಗದ ಚಿಕಿತ್ಸೆ: ಗ್ರಾಮದ ವೆಂಕಟಸ್ವಾಮಿ ಅವರ ಪುತ್ರ ಪ್ರಜ್ವಲ್ಗೆ ಗಂಟಲು ಊದುಕೊಂಡಿದ್ದರಿಂದ ಚಿಕ್ಕಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ತೋರಿಸಿ ಬಳಿಕ ಇಂದಿರಾಗಾಂಧಿ ಆಸ್ಪತ್ರೆ ಮತ್ತು ವಾಣಿ ವಿಳಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಮೃತಪಟ್ಟಿದ್ದಾನೆ.
ಜನರಲ್ಲಿ ಜಾಗೃತಿ: ವಿಷಯ ತಿಳಿದ ಕೂಡಲೇ ದಿಬ್ಬೂರಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸುಬ್ಬಣ್ಣ ಮತ್ತು ಸಾದಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ತಂಡ ಜರುಗಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದಲ್ಲಿರುವ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಿದರಲ್ಲದೇ, ಸ್ವಚ್ಛತೆ ಕಾಪಾಡಲು ಸೂಚನೆ ನೀಡಿದರು. ಗಂಟಲು ನೋವು ಕಾಣಿಸಿಕೊಂಡರೆ ಅನುಸರಿಸಬೇಕಾದ ಕ್ರಮಗಳು ಕುರಿತು ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ.
ನಿಯಂತ್ರಣಕ್ಕೆ ಬಾರದ ರೋಗ: ಗ್ರಾಮದಲ್ಲಿ ಯಾರು ಬಾಯಲ್ಲೂ ಕೇಳಿದರೂ ಗಂಟಲು ರೋಗದ್ದೇ ಮಾತು. ಮನೆಯ ಮಂದಿ, ಮಕ್ಕಳು ರೋಗದಿಂದ ಚೇತರಿಸಿಕೊಳ್ಳುತ್ತಿಲ್ಲ. ಡಾಕ್ಟರ್‌ಗಳು ಯಾವ ಕಾರಣಕ್ಕೆ ಈ ರೋಗ ಬರುತ್ತದೆ ಎಂಬುದನ್ನು ಹೇಳುತ್ತಿಲ್ಲ. ನಮಗೆ ಭಯವಾಗುತ್ತಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು.
ಹಲವರಿಗೆ ಗಂಟಲು ನೋವು: ಮೃತ ಬಾಲಕ ಪ್ರಜ್ವಲ್ರ ದೊಡ್ಡಪ್ಪ ಶಿವಣ್ಣ ಎಂಬುವರ ಪುತ್ರಿ ಎಸ್‌ಎಸ್‌ಎಲ್ಸಿ ಓದುತ್ತಿರುವ ವಿದ್ಯಾರ್ಥಿನಿ ಕಾವ್ಯ ಸಹ ಗಂಟಲು ನೋವಿನಿಂದ ಬಳಲುತ್ತಿದ್ದು, ಬೆಂಗಳೂರಿನ ಇಂದಿರಾಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬುದು ತಿಳಿದುಬಂದಿದೆ.
ಗ್ರಾಮದ ಮುನಿರತ್ನಮ್ಮ ಹಾಗೂ ಸರೋಜಮ್ಮ, ಶ್ರೀನಿವಾಸ್ ಸಹಿತ ಹಲವರು ಗಂಟಲು ನೋವಿನಿಂದ ಬಳಲುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಆವರಿಸಿದೆ.
ಶಾಲೆಯ ವಿದ್ಯಾರ್ಥಿಗಳಿಗೆ ಗಂಟಲು ರೋಗ: ಗ್ರಾಮ ಸ.ಕಿ.ಪ್ರಾ.ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಜ್ವಲ್ ಮೃತಪಟ್ಟ ಬಳಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 10 ಮಂದಿ ವಿದ್ಯಾರ್ಥಿಗಳಿಗೆ ಗಂಟಲು ರೋಗ ಕಾಣಿಸಿಕೊಂಡಿದ್ದು, ಸ್ವತಃ ಪಾಠಪ್ರವಚನಗಳು ಮಾಡುವ ಶಿಕ್ಷಕರು ಸಹ ಭಯಭೀತಿಗೊಂಡಿದ್ದಾರೆ. ಶಾಲೆಯಲ್ಲಿ 22 ಮಂದಿ ವ್ಯಾಸಂಗ ಮಾಡುತ್ತಿದ್ದು, ಅದರಲ್ಲಿ 10 ಮಂದಿ ವಿದ್ಯಾರ್ಥಿಗಳು ಶಾಲೆಗೆ ಬರುವುದನ್ನು ನಿಲ್ಲಿಸಿದ್ದಾರೆ ಎಂದು ಮುಖ್ಯಶಿಕ್ಷಕಿ ವಿಜಯ ತಿಳಿಸಿದರು.
ಸಾದಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ತಂಡ ಶಾಲೆಗೆ ಭೇಟಿ ನೀಡಿ ಎಲ್ಲಾ ಮಕ್ಕಳಿಗೆ ಚಿಕಿತ್ಸೆ ನೀಡಿದರಲ್ಲದೇ ಬಿಸಿನೀರು ತಣ್ಣಗೆ ಮಾಡಿ ಕುಡಿಯ ಬೇಕು. ಜೊತೆಗೆ ಬಿಸಿ ನೀರಿನಲ್ಲಿ ಉಪ್ಪು ಹಾಕಿ ಗಾರ್ಲೀಗ್ ಮಾಡಲು ವೈದ್ಯರು ಸೂಚನೆ ನೀಡಿದ್ದಾರೆ. ಅದನ್ನು ಪಾಲನೆ ಮಾಡುತ್ತಿದ್ದೇವೆ ಎಂದು ಮಕ್ಕಳು ಹೇಳಿದರು.
ನಿಲ್ಲದ ಆತಂಕ: ಗ್ರಾಮದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡಿರುವ ಗಂಟಲು ರೋಗದಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು, ಸದ್ಯದ ಮಟ್ಟದಲ್ಲಿ ಯಾರೂ ಸಹ ಸಮಾಧಾನಗೊಳ್ಳುವ ಪರಿಸ್ಥಿತಿಯಲ್ಲಿಲ್ಲ.
ಗಂಟಲು ನೋವು ಕಾಣಿಸಿಕೊಂಡರೆ ಸಮೀಪದ ಸಾದಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆ ಮತ್ತು ಬೆಂಗಳೂರಿನ ಆಸ್ಪತ್ರೆಗೆ ದೌಡಾಯಿಸುತ್ತಿದ್ದು, ರೋಗ ಮಾತ್ರ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಾಣುತ್ತಿಲ್ಲ ಎಂಬ ತಳಮಳ ಮತ್ತು ಆತಂಕ ಗ್ರಾಮಸ್ಥರಲ್ಲಿ ಬೇರೂರಿದೆ.
ಗ್ರಾಮದಲ್ಲಿ ಗಂಟಲು ರೋಗ ದಿನೇ ದಿನೇ ಮಕ್ಕಳು ಮತ್ತು ಹಿರಿಯರಿಗೆ ಹರಡುತ್ತಿದ್ದರು ಸಹ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡುವ ಗೋಜಿಗೆ ಹೋಗಿಲ್ಲವೆಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಕೇವಲ ಸಾದಲಿ ಆಸ್ಪತ್ರೆಯ ವೈದ್ಯರು ಮತ್ತು ಆಶಾ ಕಾರ್ಯಕರ್ತರು,ದಾದಿಯರು ಮಾತ್ರ ನೀರಿನ ಮಾದರಿ ಸ್ವೀಕರಿಸಿ ಚಿಕಿತ್ಸೆ ನೀಡಿದ್ದಾರೆ ಆದರೂ ಸಹ ರೋಗ ನಿಯಂತ್ರಣಕ್ಕೆ ಬರುತ್ತಿಲ್ಲ ಹಿರಿಯ ಅಧಿಕಾರಿಗಳು ಭೇಟಿ ನೀಡಿ ರೋಗವನ್ನು ನಿಯಂತ್ರಣ ಮಾಡಿ ಜನರ ಆರೋಗ್ಯವನ್ನು ಕಾಪಾಡಬೇಕೆಂದು ಅಳಲು ತೋಡಿಕೊಂಡಿದ್ದಾರೆ.
ಗ್ರಾಮದಲ್ಲಿ ಗಂಟಲು ರೋಗ ವ್ಯಾಪಕವಾಗಿ ಹರಡುತ್ತಿದ್ದರೂ ಸಹ ಗ್ರಾಮ ಪಂಚಾಯಿತಿಯಿಂದ ಅಥವಾ ಆರೋಗ್ಯ ಇಲಾಖೆಯಿಂದ ಯಾವುದೇ ರೀತಿಯ ಸ್ವಚ್ಛತೆ ಕಾರ್ಯ ನಡೆಯುತ್ತಿಲ್ಲ. ಎಲ್ಲೆಡೆ ಗಲೀಜು ತುಂಬಿದೆ. ಚರಂಡಿ ನೀರು ರಸ್ತೆಗೆ ಹರಿದು ಸೊಳ್ಳೆಗಳಿಗೆ ಆಶ್ರಯತಾಣವಾಗಿದ್ದು, ಸಾಂಕ್ರಾಮಿಕ ರೋಗ ಭೀತಿ ಆವರಿಸಿದೆ.
ನೀರು ಶುದ್ಧೀಕರಣ ಘಟಕ ಮಂಜೂರು: ಗ್ರಾಮದಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ನೀರಿನಲ್ಲಿ ಫ್ಲೋರೈಡ್ ಅಂಶ ಅಧಿಕ0ವಾಗಿರುವ ಕುರಿತು ಶಾಸಕ ವಿ.ಮುನಿಯಪ್ಪ ಅವರಿಗೆ ಮನವಿ ಸಲ್ಲಿಸಿದ ಪರಿಣಾಮ ತಾಲೂಕಿನಾದ್ಯಂತ 40 ನೀರು ಶುದ್ಧೀಕರಣ ಘಟಕ ಮಂಜೂರು ಮಾಡಿದ್ದಾರೆ. ಅದರಲ್ಲಿ ಜರುಗಹಳ್ಳಿ ಸಹ ಸೇರಿದ್ದು, ಶೀಘ್ರವೇ ಘಟಕ ಆರಂಭಿಸಲಾಗುವುದು ಎಂದು ಗ್ರಾಪಂ ಅಧ್ಯಕ್ಷರು ತಿಳಿಸಿದ್ದಾರೆ.
ಗ್ರಾಮದಲ್ಲಿರುವ ಕೊಳವೆಬಾವಿಯಲ್ಲಿ ಲಭಿಸಿರುವ ನೀರಿನಲ್ಲಿ ಫ್ಲೋರೈಡ್ ಅಂಶ ಅಧಿಕ ವಾಗಿದೆ ಎಂದು ಈಗಾಗಲೇ ತಿಳಿದು ಬಂದಿದೆ. ಗಂಟಲುರೋಗ ವ್ಯಾಪಕವಾಗಿರುವುದರಿಂದ ಕುಡಿಯುವ ನೀರು ಆರೋಗ್ಯ ಇಲಾಖೆಯ ಅಧಿಕಾರಿಗಳು ನಮೂನೆಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ನೀರು ಕುಡಿಯಲು ಯೋಗ್ಯವಿಲ್ಲವೆಂದು ಪ್ರಯೋಗಾ ಲಯದಿಂದ ಧೃಡಪಟ್ಟಿದೆ. ಕಲುಷಿತ ನೀರು ಸೇವಿಸಿ ಗಂಟಲು ರೋಗ ಕಾಣಿಸಿಕೊಂಡಿ ರಬಹುದು ಎಂದು ಗ್ರಾಮಸ್ಥರು ಕಳವಳ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.